ಟೆಂಗಿನಕಾಯಿ ಮೂಲಕ ಈಡುಗಾಯಿ ಒಡೆದ ಬಿಜೆಪಿ!


Team Udayavani, Sep 2, 2019, 3:08 AM IST

bjp-logo

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ, ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ವಿಚಾರದಲ್ಲಿ ಶಾಕ್‌ ನೀಡುತ್ತ ಬಂದಿರುವ ಬಿಜೆಪಿ ಹೈಕಮಾಂಡ್‌, ಇದೀಗ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ನೇಮಕದಲ್ಲೂ ಮತ್ತೂಂದು ಅಚ್ಚರಿಯ ಸಂದೇಶ ರವಾನಿಸಿದೆ. ಹುಬ್ಬಳ್ಳಿಯ ಮಹೇಶ ಟೆಂಗಿನಕಾಯಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿಸುವ ಮೂಲಕ ಉತ್ತರಕ್ಕೆ ಪಕ್ಷದಲ್ಲಿ ಮಹತ್ವದ ಸ್ಥಾನವೊಂದನ್ನು ನೀಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ನಳೀನಕುಮಾರ ಕಟೀಲ ನೇಮಕಗೊಂಡ ನಂತರ ಪಕ್ಷದ ಮಹತ್ವದ ಹುದ್ದೆಯೊಂದಕ್ಕೆ ನೇಮಕ ಮಾಡಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯೊಂದಕ್ಕೆ ಮಾತ್ರ ನೇಮಕ ಆದೇಶ ಹೊರಡಿಸಿರುವುದು ವಿಶೇಷವಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಎಂದರೆ ರಾಜ್ಯ ಘಟಕದಲ್ಲಿ ರಾಜ್ಯಾಧ್ಯಕ್ಷರ ನಂತರದ ಮಹತ್ವದ ಸ್ಥಾನ. ಅಂತಹ ಹುದ್ದೆಗೆ ಮಹೇಶ ಟೆಂಗಿನಕಾಯಿ ಅವರ ನೇಮಕ ಬಹುತೇಕ ರಾಜ್ಯ ನಾಯಕರ ಗಮನಕ್ಕೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.

ಹುಬ್ಬಳ್ಳಿ ಶಕ್ತಿ ಕೇಂದ್ರ: ಬಿಜೆಪಿಯಲ್ಲಿ ಉತ್ತರ ಕರ್ನಾಟಕ ಮಟ್ಟಿಗೆ ಹುಬ್ಬಳ್ಳಿ ಮಹತ್ವದ ಶಕ್ತಿ ಕೇಂದ್ರವೂ ಆಗಿದೆ. ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಹಲವು ವಿದ್ಯಮಾನಗಳ ಮೂಲಕ ಪಕ್ಷಕ್ಕೆ ಬಲ ತುಂಬಿದ, ಪಕ್ಷಕ್ಕೆ ಹೆಚ್ಚು ಸ್ಥಾನಗಳನ್ನು ಬರುವಂತೆ ಮಾಡಿದ ಕೀರ್ತಿಯಲ್ಲಿ ಹೆಚ್ಚಿನ ಪಾಲು ಹುಬ್ಬಳ್ಳಿಗೆ ಸಲ್ಲುತ್ತದೆ ಎಂಬುದನ್ನು ಬಿಜೆಪಿ ಅನೇಕ ನಾಯಕರು ಒಪ್ಪುತ್ತಾರೆ.

ಈ ಹಿಂದೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಎರಡೂ ಹುಬ್ಬಳ್ಳಿಗೆ ದಕ್ಕಿದ್ದರಿಂದ, ಹುಬ್ಬಳ್ಳಿ ಬಿಜೆಪಿ ಶಕ್ತಿಕೇಂದ್ರವಾಗಿಯೂ ಗೋಚರಿಸಿತ್ತು. 2012ರಲ್ಲಿ ಜಗದೀಶ ಶೆಟ್ಟರ ಮುಖ್ಯಮಂತ್ರಿಯಾಗಿದ್ದರು. 2013ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹುಬ್ಬಳ್ಳಿಯವರೇ ಆದ ಸಂಸದ ಪ್ರಹ್ಲಾದ ಜೋಶಿ ಅವರನ್ನು ನೇಮಕ ಮಾಡಲಾಗಿತ್ತು. ಆ ಮೂಲಕ ಹುಬ್ಬಳ್ಳಿ ಬಿಜೆಪಿಯ ಶಕ್ತಿಕೇಂದ್ರವಾಗಿ ಹೊರಹೊಮ್ಮಿತ್ತು.

ಇದಕ್ಕೂ ಮೊದಲು ಜಗದೀಶ ಶೆಟ್ಟರ್‌ 1996ರಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. 2005ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ನೇಮಕವಾಗಿದ್ದರು. ಇದಲ್ಲದೆ, ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ, ವಿವಿಧ ಸಚಿವ ಸ್ಥಾನ, ಸ್ಪೀಕರ್‌ ಹೀಗೆ ವಿವಿಧ ಹುದ್ದೆ ನಿರ್ವಹಿಸಿದ್ದರು. ಪ್ರಹ್ಲಾದ ಜೋಶಿ ಸಹ 2006ರಿಂದ 2013ರವರೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮಹತ್ವದ ಹುದ್ದೆ ನಿಭಾಯಿಸಿದ್ದರಲ್ಲದೆ, ನಂತರ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು.

ಇದೀಗ ಹುಬ್ಬಳ್ಳಿಯವರೇ ಆದ ಮಹೇಶ ಟೆಂಗಿನಕಾಯಿ ಅವರನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಮೂಲಕ ಉತ್ತರದ ಬಿಜೆಪಿ ಶಕ್ತಿ ಕೇಂದ್ರವಾದ ಹುಬ್ಬಳ್ಳಿಗೆ ಮಹತ್ವದ ಸ್ಥಾನ ನೀಡಿದಂತಾಗಿದೆ. ಧಾರವಾಡ ವಿಭಾಗದ ಸಹ ಪ್ರಭಾರಿಯಾಗಿ ಹುಬ್ಬಳ್ಳಿಯಲ್ಲೇ ಇದ್ದ ಎನ್‌.ರವಿಕುಮಾರ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್‌.ಯಡಿಯೂರಪ್ಪ ನೇಮಿಸಿದ್ದರು.

ಸಂತೋಷ ಬಲ?: ಮಹೇಶ ಟೆಂಗಿನಕಾಯಿ ಬಿಜೆಪಿಯಲ್ಲಿ ಪ್ರಮುಖ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ಸೇರಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಧಾರವಾಡ ವಿಭಾಗೀಯ ಸಹ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ರಾಜ್ಯ ಪ್ರಧಾನ ಕಾರ್ಯದರ್ಶಿಯಂಥ ಮಹತ್ವದ ಹುದ್ದೆಗೆ ನೇಮಕಗೊಂಡಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ವೀಕ್ಷಕರಾಗಿ ನೇಮಕವಾಗುವ ಮೂಲಕ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಆಗಿತ್ತಾದರೂ, ನಂತರದಲ್ಲಿ ಇವರ ಬದಲಿಗೆ ಸಿ.ಎಂ.ನಿಂಬಣ್ಣನವರಿಗೆ ಟಿಕೆಟ್‌ ನೀಡಲಾಗಿತ್ತು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಂತಹ ಮಹತ್ವದ ಹುದ್ದೆಗೆ ಮಹೇಶ ಟೆಂಗಿನಕಾಯಿ ಅವರ ನೇಮಕ ಹಿಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ ಮಹತ್ವದ ರೀತಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಹೇಶ ಟೆಂಗಿನಕಾಯಿ ಅವರು ಸಂತೋಷ ಅವರ ಆಪ್ತ ಬಳಗದಲ್ಲಿ ಒಬ್ಬರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರ ಕಾರಣದಿಂದಲೇ ಟೆಂಗಿನಕಾಯಿ ಅವರಿಗೆ ತೆಲಂಗಾಣ ಚುನಾವಣೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ಜವಾಬ್ದಾರಿ ನೀಡಲಾಗಿತ್ತು. ಅಲ್ಲಿ ಉತ್ತಮ ಕಾರ್ಯನಿರ್ವಹಣೆ ಆಧಾರದಲ್ಲಿ ಇದೀಗ ಮಹತ್ವದ ಹುದ್ದೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಹಾಗೂ ಹಲವು ಕಾರ್ಯ-ಯೋಜನೆಗಳು ಚಾಚು ತಪ್ಪದೆ ಅನುಷ್ಠಾನಕ್ಕೆ ನಂಬಿಗೆಯಸ್ಥರೊಬ್ಬರನ್ನು ಪ್ರಮುಖ ಸ್ಥಾನಕ್ಕೆ ತರಬೇಕು ಎಂಬ ಉದ್ದೇಶದೊಂದಿಗೆ ಸಂತೋಷ ಅವರು ಪಕ್ಷದ ಹೈಕಮಾಂಡ್‌ ಮೇಲೆ ಪ್ರಭಾವ ಬೀರಿ, ಮಹೇಶ ಟೆಂಗಿನಕಾಯಿ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯ ಘಟಕದಲ್ಲಿ ಕೇವಲ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅದು ಒಬ್ಬರನ್ನೇ ನೇಮಕ ಮಾಡಿ ಆದೇಶ ಹೊರಡಿಸಿರುವುದು ನೋಡಿದರೆ, ಇದೊಂದು ಅಚ್ಚರಿಯ ತೀರ್ಮಾನ ಎಂದೇ ಹೇಳಬಹುದಾಗಿದೆ.

ಪಕ್ಷದ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ ಪಕ್ಷ ನನಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುವೆ. ಪಕ್ಷ ಇಂತಹದ್ದೊಂದು ದೊಡ್ಡ ಜವಾಬ್ದಾರಿ ನೀಡುತ್ತದೆ ಎಂಬ ಸುಳಿವು ನನಗೂ ಇರಲಿಲ್ಲ. ಪಕ್ಷದ ರಾಜ್ಯಾಧ್ಯಕ್ಷರಿಂದ ನೇಮಕ ಆದೇಶ ನೋಡಿದ ನಂತರವೇ ನನಗೆ ತಿಳಿದಿದೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ.
-ಮಹೇಶ ಟೆಂಗಿನಕಾಯಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

* ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.