ವಲಸೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟೆಂಟ್ ಸ್ಕೂಲ್


Team Udayavani, Sep 6, 2019, 5:05 AM IST

Tent–School

ಬೆಂಗಳೂರು: ಜೀವನೋಪಾಯಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಬರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸಲು ಅನುಕೂಲವಾಗುವಂತೆ ಹೆಚ್ಚುವರಿ ‘ಟೆಂಟ್ ಸ್ಕೂಲ್’ಗಳನ್ನು ತೆರೆಯುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ವಿಚಾರವಾಗಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ.ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಅನುಪಾಲನಾ ವರದಿ ಸಲ್ಲಿಸಿದ್ದಾರೆ.

ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಆಯುಕ್ತರ ಪರವಾಗಿ ನ್ಯಾಯಪೀಠಕ್ಕೆ ಅನುಪಾಲನಾ ವರದಿ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಿತು.

ಅನುಪಾಲನಾ ವರದಿಯಲ್ಲಿ ಏನಿದೆ?: ವಲಸೆ ಮಕ್ಕಳಿಗೆ ಯಾವುದೇ ದಾಖಲೆಗಳನ್ನು ಹಾಜರುಪಡಿಸಲು ಒತ್ತಾಯಪಡಿಸದೇ ಆಯಾ ಜಿಲ್ಲಾ ಮಟ್ಟದಲ್ಲಿ ಅಂಗನವಾಡಿ ಅಥವಾ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಆದೇಶ ನೀಡುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಅಧಿನಿಯಮ-2012ರ ಸೆಕ್ಷನ್‌ ‘ಎ’ ಪ್ರಕಾರ ನೇಮಿಸಲಾಗಿರುವ ಹಾಜರಾತಿ ಅಧಿಕಾರಿಗಳಿಗೆ ಅವರ ಕರ್ತವ್ಯ ಹಾಗೂ ಹೊಣೆಗಾರಿಕೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿರುವ ಉನ್ನತಾಧಿಕಾರ ಸಮಿತಿಯ ನಿರ್ಣಯದಂತೆ ಈ ವಿಚಾರದ ಬಗ್ಗೆ ‘ಮಾಸಿಕ ಕಾರ್ಯಕ್ರಮ ಅನುಷ್ಠಾನ ದಿನಚರಿ’ (ಎಂಪಿಐಸಿ) ಸಭೆಯಲ್ಲಿ ಪರಿಶೀಲನೆ ನಡೆಸುವ ಬಗ್ಗೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.

ಶಾಲೆಯಿಂದ ಹೊರಗುಳಿದ 6ರಿಂದ 14 ವರ್ಷದ 16,853 ಮಕ್ಕಳ ಪೈಕಿ 3,828 ಮಕ್ಕಳನ್ನು ಈಗಾಗಲೇ ಶಾಲೆಗೆ ಸೇರಿಸಲಾಗಿದೆ. ಬೆಂಗಳೂರು ವ್ಯಾಪ್ತಿಯ ಕೊಳಗೇರಿಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳ ಮಕ್ಕಳು ಶಾಲೆಯಿಂದ ಹೊರಗುಳಿದ ಬಗ್ಗೆ ಪ್ರತಿ ತಿಂಗಳು 13 ಮತ್ತು 14ರಂದು ರಾತ್ರಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರಂತೆ, ಆ.13 ಮತ್ತು 14ರಂದು ನಡೆಸಿದ ಸಮೀಕ್ಷೆಯಲ್ಲಿ ಶಾಲೆಯಿಂದ ಹೊರಗುಳಿದ 415 ಮಕ್ಕಳನ್ನು ಗುರುತಿಸಲಾಗಿದೆ. 2019-20ನೇ ಸಾಲಿಗಾಗಿ ಸರ್ಕಾರ ‘ಟೆಂಟ್ ಸ್ಕೂಲ್’ಗಳನ್ನು ನಡೆಸುತ್ತಿದ್ದು, ಅದರಲ್ಲಿ ಬೆಂಗಳೂರು ದಕ್ಷಿಣದ 3 ಹಾಗೂ 4ನೇ ಬ್ಲಾಕ್‌ನ 193 ಮಕ್ಕಳನ್ನು ದಾಖಲಿಸಿಕೊಳ್ಳಲಾಗಿದೆ.

ಜೊತೆಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಏಳು ದಿನ ಶಾಲೆಗೆ ಗೈರು ಹಾಜರಾಗುವ ಮಕ್ಕಳ ಬಗ್ಗೆ ಪ್ರತಿ ಶನಿವಾರ ರಾಜ್ಯ ಯೋಜನಾ ಕಚೇರಿಗೆ ಮಾಹಿತಿ ನೀಡುವಂತೆ ಎಲ್ಲ ಹಾಜರಾತಿ ಅಧಿಕಾರಿಗಳಿಗೆ 2019ರ ಆ.8ರಂದು ವಿಡಿಯೋ ಕಾನ್ಫ್ರೆನ್ಸ್‌ ಹಾಗೂ ಆ.13ರಂದು ಪತ್ರದ ಮೂಲಕ ಸೂಚಿಸಲಾಗಿದೆ.

ಪೋಷಕರಿಗೆ ಹಾಜರಾತಿ ನೋಟಿಸ್‌ ನೀಡಿದ ಬಳಿಕವೂ ಮಗು ಶಾಲೆಗೆ ಬರದಿದ್ದರೆ ಅಂತಹ ಪ್ರಕರಣಗಳನ್ನು ಮಕ್ಕಳ ಕಲ್ಯಾಣ ಸಮಿತಿಯ ಗಮನಕ್ಕೆ ತರುವಂತೆ ಹಾಜರಾತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗ್ರಾಮೀಣ ಭಾಗದಲ್ಲಿ ‘ವಿಲೇಜ್‌ ಎಜುಕೇಷನ್‌ ರಿಜಿಸ್ಟರ್‌’ (ವಿಇಆರ್‌) ಹಾಗೂ ನಗರ ಪ್ರದೇಶಗಳಲ್ಲಿ ‘ವಾರ್ಡ್‌ ಎಜುಕೇಷನ್‌ ರಿಜಿಸ್ಟ್ರರ್‌’ (ಡಬ್ಲ್ಯೂಇಆರ್‌) ನಿರ್ವಹಿಸುವಂತೆ ಹಾಜರಾತಿ ಅಧಿಕಾರಿಗಳಿಗೆ ಸೂಚಿಸಿ, 2014-15ನೇ ಸಾಲಿಗೆ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಮರು ಪಾಲಿಸುವಂತೆ ಸೂಚಿಸಲಾಗಿದೆ. ಡಿಎಸ್‌ಇಆರ್‌ಟಿ ಸಿದ್ದಪಡಿಸಿರುವ ತರಬೇತಿ ಕೈಪಿಡಿ ಪ್ರಕಾರ 2019ರ ಆ.17ರಂದು ಹಾಜರಾತಿ ಅಧಿಕಾರಿಗಳಿಗೆ ಮತ್ತು ಆ.21ರಂದು ಎಸ್‌ಡಿಎಂಸಿ ಸದಸ್ಯರು, ಪೋಷಕರಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 2019ರ ಕರಡು ನೀತಿಯನ್ನು ಸರ್ಕಾರದ ಪರಿಶೀಲನೆಗೆ ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.