ಅರಿಶಿನ ಬೀಜಗಳ ಕೊರತೆ : ಹೆಚ್ಚಿದ ಬೆಲೆ, ಚಿನ್ನಾ ಸೇಲಂ ಬೀಜಗಳಿಗೆ ಭಾರಿ ಬೇಡಿಕೆ
ಅರಿಶಿನ ಬೀಜಗಳಲ್ಲಿಯೂ ಕೂಡಾ ಕಲಬೆರಿಕೆ
Team Udayavani, May 3, 2022, 5:02 PM IST
ರಬಕವಿ-ಬನಹಟ್ಟಿ : ಈ ಬಾರಿ ಅರಿಶಿನಕ್ಕೆ ಮಾರುಕಟ್ಟೆಯಲ್ಲಿ ಬೇಡಿಕೆ ಉಂಟಾಗಿದ್ದು, ಅರಿಶಿನಕ್ಕೆ ಉತ್ತಮ ಬೆಲೆಯೂ ಕೂಡಾ ಇರುವುದರಿಂದ ಈ ಭಾಗದ ರೈತರು ಅರಿಸಿನ ಬೀಜಗಳನ್ನು ಖರೀದಿಸಲು ಮುಂದಾಗಿದ್ದಾರೆ.
ಈ ಭಾಗಕ್ಕೆ ತಮಿಳುನಾಡಿನ ಸೇಲಂನಿಂದ ಅರಿಶಿನ ಬೀಜಗಳನ್ನು ತರಿಸಿಕೊಳ್ಳಲಾಗುತ್ತದೆ. ಈ ಬಾರಿ ತಮಿಳುನಾಡಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ತಮಿಳುನಾಡಿನ ಸೇಲಂನಲ್ಲಿ ಅರಿಶಿನ ಬೀಜಗಳ ಇಳುವರಿ ಕಡಿಮೆಯಾಗಿದೆ. ಜೊತೆಗೆ ಅಲ್ಲಿಯ ರೈತರು ಕೂಡಾ ಅರಿಶಿನ ಬೀಜಗಳ ಮಾರಾಟಕ್ಕೆ ಮುಂದಾಗುತ್ತಿಲ್ಲ. ಆದ್ದರಿಂದ ಸೇಲಂನಿಂದ ಬರುವ ಅರಿಶಿನ ಬೀಜಗಳ ಪೂರೈಕೆಯೂ ಕಡಿಮೆಯಾಗಿದೆ. ಅಲ್ಲಿಯ ರೈತರು ಮುಂದಿನ ದಿನಗಳಲ್ಲಿ ಬೀಜಗಳ ಬೆಲೆ ಇನ್ನಷ್ಟು ಹೆಚ್ಚಾಗುತ್ತದೆ ಎಂದು ಅವುಗಳನ್ನು ಸಂಗ್ರಹ ಮಾಡಿಟ್ಟುಕೊಂಡಿದ್ದಾರೆ. ಆದ್ದರಿಂದ ನಮ್ಮಲ್ಲಿ ಬೀಜಗಳ ಕೊರತೆಯಾಗಿದೆ ಮತ್ತು ಬೆಲೆಗಳಲ್ಲಿ ಕೂಡಾ ಹೆಚ್ಚಾಗಿದೆ. ಕಳೆದ ಸಲ ಒಂದು ಕ್ವಿಂಟಲ್ ಬೀಜಕ್ಕೆ ರೂ. 3500 ಇತ್ತು. ಆದರೆ ಈ ಬಾರಿ ರೂ. 3900 ಕ್ಕೆ ಮಾರಾಟವಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಂಭವವಿದೆ ಎನ್ನುತ್ತಾರೆ ರೈತರಾದ ದೇವರಾಜ ರಾಠಿ.
ಈಗಾಗಲೆ ಒಂದೆರಡು ಉತ್ತಮ ಮಳೆಗಳು ಆಗಿದ್ದು, ಕೃಷ್ಣಾ ನದಿಯಲ್ಲಿ ಬೇಸಿಗೆಯ ಸಂದರ್ಭದಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸಂಗ್ರಹವಿರುವುದರಿಂದ ರೈತರು ಅರಿಶಿನ ನಾಟಿಗೆ ಸಜ್ಜಾಗುತ್ತಿದ್ದಾರೆ.
ಜಾಗದಾಳ ಗ್ರಾಮದ ಸುತ್ತ ಮುತ್ತಲಿನ ಭಾಗದಲ್ಲಿ ಅಂದಾಜು 100ಕ್ಕೂ ಹೆಚ್ಚು ಲಾರಿಯಷ್ಟು ಅರಿಶಿನ ಬೀಜಗಳು ಮಾರಾಟವಾಗುತ್ತವೆ. ಒಂದು ಲಾರಿಯಲ್ಲಿ 16 ಟನ್ನಷ್ಟು ಬೀಜಗಳು ಬರುತ್ತವೆ.
ಜಗದಾಳ ಗ್ರಾಮಕ್ಕೆ ಅರಿಶಿನ ಬೀಜಗಳನ್ನು ಖರೀದಿಸಲು ರಬಕವಿ ಬನಹಟ್ಟಿ, ಜಮಖಂಡಿ, ಗೋಕಾಕ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ ವಿವಿಧ ನಗರ ಮತ್ತು ಗ್ರಾಮೀಣ ಪ್ರದೇಶಗಳಿಂದ ರೈತರು ಆಗಮಿಸುತ್ತಿದ್ದಾರೆ.
ಅರಿಶಿನ ಬೀಜಗಳಲ್ಲಿಯೂ ಕೂಡಾ ಸಾಕಷ್ಟು ಕಲಬೆರೆಕೆಯ ಬೀಜಗಳು ಬರುತ್ತಿರುವುದರಿಂದ ರೈತರಿಗೆ ತೊಂದರೆಯಾಗಿದೆ ಎಂದು ರಾಯಬಾಗ ತಾಲ್ಲೂಕಿನ ರೈತರು ಪತ್ರಿಕೆಗೆ ತಿಳಿಸಿದರು.
ಒಟ್ಟಿನಲ್ಲಿ ಅರಿಶಿನ ಕೃಷಿ ರೈತರಿಗೆ ಪರಿಶ್ರಮದ ಬೆಳೆಯಾಗಿದ್ದರೂ, ಕೋವಿಡ್ ನಿಂದಾಗಿ ಸ್ಥಗಿತಗೊಂಡಿದ್ದ ಮಾರುಕಟ್ಟೆ ಮತ್ತೆ ಚುರುಕುಗೊಂಡಿದೆ. ಮುಂದಿನ ದಿನಗಳಲ್ಲಿ ಲಾಭವಾಗಬಹುದು ಎಂಬ ಭರವಸೆಯೊಂದಿಗೆ ರೈತರು ಅರಿಸಿನ ಬೆಳೆಗೆ ಸಜ್ಜಾಗಿದ್ದಾರೆ.
-ಕಿರಣ ಶ್ರೀಶೈಲ ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.