Terrorism: ದೇಶದಲ್ಲಿ ಉಗ್ರ ಕೃತ್ಯಗಳು ಶೇ.65 ತಗ್ಗಿವೆ: ಅಮಿತ್ ಶಾ ಪ್ರತಿಪಾದನೆ
Team Udayavani, Oct 21, 2023, 7:43 PM IST
ನವದೆಹಲಿ/ಝೇವಾನ್: ದೇಶದಲ್ಲಿನ ಭಯೋತ್ಪದಾಕ ಘಟನೆಗಳು ಶೇ.65 ತಗ್ಗಿವೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಶಾನ್ಯ ರಾಜ್ಯಗಳಲ್ಲಿಯೂ ಕೂಡ ಎಡಪಂಥೀಯ ಉಗ್ರಕೃತ್ಯಗಳು ತಗ್ಗಿವೆ ಎಂದರು.
ಪೊಲೀಸ್ ವ್ಯವಸ್ಥೆ ಆಧುನೀಕರಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಜಗತ್ತಿಲ್ಲಿಯೇ ಅತ್ಯುತ್ತಮ ಎನಿಸುವ ಪೊಲೀಸ್ ತಂತ್ರಜ್ಞಾನ ಮಿಷನ್ ಅನ್ನು ಸರ್ಕಾರ ಜಾರಿಗೊಳಿಸಿದೆ ಎಂದರು. ದೇಶದಲ್ಲಿನ ಕಾನೂನು ಕ್ಷೇತ್ರದಲ್ಲಿನ ಮೂರು ಪ್ರಮುಖ ಕಾಯ್ದೆಗಳನ್ನು ಬದಲಾವಣೆ ಮಾಡಲೂ ಮೋದಿ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಭಯೋತ್ಪಾದನೆಯನ್ನು ಮಟ್ಟ ಹಾಕಿಯೇ ಸಿದ್ಧ: ದಿಲ್ಬಾಗ್ ಸಿಂಗ್
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಿಯೇ ಸಿದ್ಧ ಎಂದು ಅಲ್ಲಿನ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ 1,605 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರಿಗೆ ನನ್ನ ನಮನಗಳು. ಪ್ರಸಕ್ತ ವರ್ಷವೇ ಎಂಟು ಮಂದಿ ಪ್ರಾಣಾರ್ಪಣೆ ಮಾಡಿದ್ದಾರೆ. ಹೀಗಾಗಿ, ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆಯ ಹುಟ್ಟಡಗಿಸಿಯೇ ಸಿದ್ದ ಎಂದು ಪಣತೊಡಲಾಗಿದೆ. ಉಗ್ರ ಸಂಘಟನೆಗೆ ಸ್ಥಳೀಯರ ನೇಮಕ ತಗ್ಗಿದೆ. ಕಳೆದ ವರ್ಷ 110 ಮಂದಿ ಸೇರ್ಪಡೆಯಾಗಿದ್ದರೆ, ಹಾಲಿ ವರ್ಷ ಕೇವಲ 10 ಮಂದಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.