![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 24, 2019, 3:07 AM IST
ಬೆಂಗಳೂರು: ಕಾನೂನು ತಜ್ಞರೊಂದಿಗೆ ಸಮಾಲೋಚನೆ, ತಾಳ್ಮೆಯ ನಡೆ, ವಿಧಾನಸಭೆಯ ಒಳಗೆ, ಹೊರಗೆ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ ಹಾಗೂ ವಿಶ್ವಾಸ ಮತ ಯಾಚನೆ ನಿರ್ಣಯವನ್ನು ಮತಕ್ಕೆ ಹಾಕುವಂತೆ ವಿಧಾನಸಭಾಧ್ಯಕ್ಷರ ಮೇಲೆ ಒತ್ತಡ ಹೇರಿದ ಬಿಜೆಪಿಯ ಕಾರ್ಯತಂತ್ರ ನಿರೀಕ್ಷಿತ ಫಲವನ್ನೇ ನೀಡಿದಂತಿದೆ.
ಜು.12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ ಪ್ರಕಟವಾಗುತ್ತಿದ್ದಂತೆ ಬಿಜೆಪಿಯು ಯೋಜಿತ ರೀತಿಯಲ್ಲೇ ಸಜ್ಜಾಗಿತ್ತು. ಆಡಳಿತ ಪಕ್ಷಗಳ 15 ಶಾಸಕರ ರಾಜೀನಾಮೆ ವಿಚಾರವನ್ನೇ ಮುಖ್ಯವಾಗಿಟ್ಟುಕೊಂಡು ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಶಾಸಕರು, ಇಡೀ ಅಧಿವೇಶನ ಇದೇ ವಿಚಾರದ ಬಗ್ಗೆ ಚರ್ಚೆಗೆ ಸೀಮಿತವಾಗುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು.
ಕಾಂಗ್ರೆಸ್, ಜೆಡಿಎಸ್ ಸಚಿವರು, ಶಾಸಕರು ಬಿಜೆಪಿ ನಾಯಕರ ವಿರುದ್ಧ ಹಾಗೂ ಆಪರೇಷನ್ ಕಮಲದ ಆರೋಪ ಹೊರಿಸಿ ಪ್ರಚೋದನೆ ನೀಡುವ ಪ್ರಯತ್ನದ ಬಗ್ಗೆ ಮೊದಲೇ ಅಂದಾಜಿಸಿದ್ದ ಬಿಜೆಪಿ ನಾಯಕರು, ಸದನದಲ್ಲಿ ಹೇಗೆ ವರ್ತಿಸಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರಂತರವಾಗಿ ಸೂಚನೆ ನೀಡುತ್ತಿದ್ದರು.
ಬಿಜೆಪಿ ವತಿಯಿಂದ ಜೆ.ಸಿ.ಮಾಧುಸ್ವಾಮಿ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಎಸ್.ಸುರೇಶ್ ಕುಮಾರ್ ಅವರಷ್ಟೇ ಪ್ರತಿಕ್ರಿಯೆ, ಪ್ರತ್ಯುತ್ತರ ನೀಡಬೇಕು ಎಂದು ಸೂಚಿಸಲಾಗಿತ್ತು. ಯಾವುದೇ ವಿಚಾರ ಪ್ರಸ್ತಾಪವಾದರೂ ವಿಶ್ವಾಸ ಮತ ಯಾಚನೆ ನಿರ್ಣಯ ಪ್ರಸ್ತಾಪವನ್ನು ಮತಕ್ಕೆ ಹಾಕುವಂತೆ ಒತ್ತಡ ಹೇರುವ ಕಾರ್ಯತಂತ್ರ ರೂಪಿಸಿತು.
ಮುಖ್ಯಮಂತ್ರಿ ಆದಿಯಾಗಿ ಸಚಿವರು, ಶಾಸಕರು ಟೀಕೆ, ಟಿಪ್ಪಣಿ ಮಾಡಿದರೂ ಬಿಜೆಪಿ ಶಾಸಕರು ಗಾಢ ಮೌನಕ್ಕೆ ಶರಣಾಗಿದ್ದರು. ತುಟಿ ಬಿಚ್ಚಿದರೆ ಸದನದ ಕಲಾಪ ಕಾಲಹರಣವಾಗುತ್ತಿರುವ ಬಗ್ಗೆ ದೂರುವುದನ್ನು ಮುಂದುವರಿಸಿದ ಅವರು, ಸ್ಪೀಕರ್ ಅವರ ಭರವಸೆಗಳನ್ನೇ ನೆನಪಿಸುತ್ತಾ ಒತ್ತಡ ಹೇರುವ ತಂತ್ರವನ್ನು ಮುಂದುವರಿಸಿದರು.
ಪಕ್ಷದ 105 ಶಾಸಕರ ಪೈಕಿ ಯಾರೊಬ್ಬರು ಗೈರಾಗದಂತೆ ಎಚ್ಚರ ವಹಿಸಿದ ಬಿಜೆಪಿ, ಅಧಿವೇಶನದುದ್ದಕ್ಕೂ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಾಗುವಂತೆ ವಿಪ್ ಜಾರಿಗೊಳಿಸಿ ಅದನ್ನು ಅಚ್ಚುಕಟ್ಟಾಗಿ ಪಾಲಿಸಿತು. ಮುಖ್ಯಮಂತ್ರಿಗಳು ಜು.18ರಂದು ವಿಶ್ವಾಸಮತ ಯಾಚಿಸುವುದಾಗಿ ಹೇಳಿದರೂ ನಂತರವೂ ವಿಳಂಬವಾಗಿದ್ದರಿಂದ ಸೋಮವಾರ ಮಧ್ಯರಾತ್ರಿ 11.45ರವರೆಗೆ ಸದನ ಮುಂದುವರಿಯಿತು.
ಎಷ್ಟೇ ಹೊತ್ತಾದರೂ ಮುಗಿಸುವಂತೆ ಯಡಿಯೂರಪ್ಪ ಪಟ್ಟು ಹಿಡಿದರು. ಕೊನೆಗೆ ಸ್ಪೀಕರ್ ಮಂಗಳವಾರ ಸಂಜೆ 6 ಗಂಟೆ ಹೊತ್ತಿಗೆ ಮತಕ್ಕೆ ಹಾಕುವ ಭರವಸೆ ನೀಡಿದರು. ಅಲ್ಲಿಗೆ ಬಿಜೆಪಿಯ ಕಾರ್ಯತಂತ್ರ ಬಹುತೇಕ ಯಶಸ್ವಿಯಾದಂತಾಗಿತ್ತು. ಮಂಗಳವಾರದ ಕಲಾಪದಲ್ಲೂ ಬಿಜೆಪಿ ಶಾಸಕರು ಮೌನವಾಗಿಯೇ ಇದ್ದರು. ಮತದಾನ ಪ್ರಕ್ರಿಯೆ ನಡೆಯುವ ಹೊತ್ತಿಗೆ ಎಲ್ಲ ಶಾಸಕರು ಸದನದಲ್ಲಿರುವಂತೆ ನೋಡಿಕೊಳ್ಳುವಲ್ಲಿಯೂ ಎಚ್ಚರ ವಹಿಸಿತ್ತು.
ಬಿಜೆಪಿ ಕಚೇರಿ, ಮೊಗಸಾಲೆಯಲ್ಲಿ ಹತ್ತಾರು ಮಂದಿಯನ್ನಿರಿಸಿ ಯಾವ ಶಾಸಕರೂ ಹೊರಗುಳಿಯದಂತೆ ನೋಡಿಕೊಂಡಿತು. ಮುಖ್ಯಮಂತ್ರಿಗಳು ಮಂಡಿಸಿದ್ದ ವಿಶ್ವಾಸ ಮತ ನಿರ್ಣಯ ಬಿದ್ದು ಹೋಗುತ್ತಿದ್ದಂತೆ ಬಿಜೆಪಿ ನಾಯಕರು ಗೆಲುವಿನ ನಗೆ ಬೀರಿದರು.
ನಾಯಕರಲ್ಲಿ ಸಂತಸ: ಸ್ಪೀಕರ್ ರಮೇಶ್ ಕುಮಾರ್ ಅವರು ಮುಖ್ಯಮಂತ್ರಿಗಳ ವಿಶ್ವಾಸ ಮತ ನಿರ್ಣಯ ಬಿದ್ದು ಹೋಗಿದೆ ಎಂದು ಪ್ರಕಟಿಸುತ್ತಿದ್ದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಮನೆ ಮಾಡಿತು. ಬಳಿಕ, ಸ್ಪೀಕರ್ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು. ಬಳಿಕ ಬಿಜೆಪಿ ಶಾಸಕರೆಲ್ಲಾ ಯಡಿಯೂರಪ್ಪ ಅವರನ್ನು ಸುತ್ತುವರಿದು ಅಭಿನಂದನೆ ಸಲ್ಲಿಸಿದರು. ಬಳಿಕ ಯಡಿಯೂರಪ್ಪ ಅವರು ಗೆಲುವಿನ ಸಂಕೇತ ತೋರಿ ಕೈಮುಗಿದರು. ಸದನದಿಂದ ಹೊರಗೆ ಬರುತ್ತಿದ್ದಂತೆ ಯಡಿಯೂರಪ್ಪ ಅವರು ಸಹಾಯಕರಿಗೆ ಸಿಹಿ ತರಿಸಿ ಹಂಚುವಂತೆ ಸೂಚಿಸಿದರು.
* ಎಂ. ಕೀರ್ತಿಪ್ರಸಾದ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.