ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
Team Udayavani, Feb 13, 2023, 12:56 AM IST
ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಫೆ.12 ರಂದು ಬೆಳಕಿಗೆ ಬಂದಿದೆ.
ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂನಿಂದ ಎಡಕ್ಕೆ ಚಲಿಸಿದರೆ ಎಪಿಎಂಸಿ ರೈಲ್ವೇ ಗೇಟ್ಗೆ ಸಮೀಪ ರೈಲ್ವೇ ನಾಮಫಲಕದ ಪಕ್ಕದಲ್ಲಿರುವ ಪೊದೆಯಲ್ಲಿ ಶವ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ ಭಾಗ ಯಾವುದೋ ಪ್ರಾಣಿ ತಿಂದಿರುವಂತೆ ಮತ್ತು ಹುಳವಾಗಿರುವುದರಿಂದ ಮುಖ ಗುರುತು ಸಿಗುತ್ತಿಲ್ಲ. ಸುಮಾರು 35 ರಿಂದ 40 ವರ್ಷದ ಮಹಿಳೆ ಆಗಿರಬಹುದೆಂದು ಊಹಿಸಲಾಗಿದ್ದು, ಎರಡು ಮೂರು ದಿನದ ಹಿಂದೆಯೇ ಮಹಿಳೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತು ರೈಲ್ವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಪರಿಚಿತ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಳ್ತಂಗಡಿ: ಧರ್ಮಸ್ಥಳ ಪ್ರವೇಶ ದ್ವಾÌರದ ಸಮೀಪ ಅಸ್ವಸ್ಥರಾಗಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸುಮಾರು 70 ವರ್ಷ ಪ್ರಾಯದ ಮಹಿಳೆ ಧರ್ಮಸ್ಥಳ ಗೇಟಿನ ಸಮೀಪ ಅಸ್ವಸ್ಥರಾಗಿ ಕುಸಿದು ಬಿದ್ದವರನ್ನು ಸ್ಥಳೀಯರು ಧರ್ಮಸ್ಥಳ ಪೊಲೀಸರ ಸಹಕಾರದೊಂದಿಗೆ ಮಂಗಳೂನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈಕೆ ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತಪಟ್ಟಿದ್ದಾರೆ.
ಅವರು ತನ್ನ ಹೆಸರು ಸನ್ನಮ್ಮೆ ಎಂದು ತಿಳಿಸಿದ್ದು ಮನೆ ಚಿಕ್ಕಮಗಳೂರು ಪೇಟೆಯಲ್ಲಿ ಎಂದು ಹೇಳುತ್ತಿದ್ದು ಬಸ್ ನಿಲ್ದಾಣದ ಸಮೀಪವೇ ಎಂದು ಹೇಳಿದ್ದಾರೆ. ಅವರ ಬಗ್ಗೆ ಯಾವುದಾದರೂ ಮಾಹಿತಿಯಿದ್ದಲ್ಲಿ ಧರ್ಮಸ್ಥಳ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.