Land Slide: ಪ್ರಪಾತಕ್ಕೆ ಉರುಳಿದ ಬುಲ್ಡೋಜರ್
-ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ತೀವ್ರ ಸಂಚಾರ ದಟ್ಟಣೆ
Team Udayavani, Aug 12, 2023, 5:42 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪಂಡೊದಲ್ಲಿ ಶುಕ್ರವಾರ ಭೂಕುಸಿತ ಉಂಟಾಗಿ ಬುಲ್ಡೋಜರ್ ಒಂದು ಪ್ರಪಾತಕ್ಕೆ ಬಿದ್ದಿದೆ. ಈ ವಿಡಿಯೊ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭೂಕುಸಿತದಿಂದಾಗಿ ತೀವ್ರ ಸಂಚಾರ ದಟ್ಟಣೆ ಉಂಟಾಗಿದೆ. ಇದರಿಂದ ವಾಹನಗಳು ಗಂಟೆಗಟ್ಟಲೇ ರಸ್ತೆಯಲ್ಲೇ ನಿಲ್ಲುವಂತಾಗಿದೆ. ಜಿಲ್ಲಾಡಳಿತದಿಂದ ಅವಶೇಷಗಳ ತೆರವು ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದೆಡೆ, ಚಂಡೀಗಢ-ಶಿಮ್ಲಾ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ಸುಮಾರು 8 ತಾಸು ವಾಹನಗಳು ರಸ್ತೆಯಲ್ಲೇ ನಿಲ್ಲುವಂತಾಯಿತು. ಇದರಿಂದ ಕಿಲೋಮೀಟರ್‌ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿತ್ತು. ಹೆದ್ದಾರಿಯ ಚೆಕ್ಕಿ ಮೊರ್ಹ ಸಮೀಪ ಗುರುವಾರ ಮಧ್ಯರಾತ್ರಿ 2.40ರ ಸುಮಾರಿಗೆ ಭೂಕುಸಿತ ಉಂಟಾಯಿತು. ಈ ಹಿನ್ನೆಲೆಯಲ್ಲಿ ಹೆದ್ದಾರಿಯನ್ನು ಬಂದ್ ಮಾಡಲಾಗಿತ್ತು. ಶುಕ್ರವಾರ ಬೆಳಗ್ಗೆ 11.30ರ ವೇಳೆಗೆ ಅವಶೇಷಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವುಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮುಂಗಾರಿನಲ್ಲಿ ಮಳೆ ಮತ್ತು ಪ್ರಕೃತಿ ಸಂಬಂಧಿಸಿದ ಪ್ರಕೋಪಗಳಿಂದ ಹಿಮಾಚಲ ಪ್ರದೇಶದಕ್ಕೆ 6,742 ಕೋಟಿ ರೂ. ನಷ್ಟ ಉಂಟಾಗಿದೆ. ಈಗಲು ರಾಜ್ಯದಲ್ಲಿ ಸುಮಾರು 160 ರಸ್ತೆಗಳು ಬಂದ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.