ಬುಡಕಟ್ಟು ಸಮುದಾಯದ ಏಳಿಗೆಗೆ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ
Team Udayavani, Sep 3, 2020, 6:12 PM IST
ಬೆಂಗಳೂರು : ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕೇಂದ್ರ ಪುರಸ್ಕೃತ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಕೇಂದ್ರ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿದೆ. ಬುಡಕಟ್ಟು ಸಮುದಾಯದ ಏಳಿಗೆಗೆ ಪೂರಕವಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಕೇಂದ್ರ ಬುಡಕಟ್ಟು ಸಚಿವರಿಗೆ ತಿಳಿಸಿದರು.
ಕೇಂದ್ರ ಬುಡಕಟ್ಟು ಸಚಿವರಾದ ಶ್ರೀ ಅರ್ಜುನ್ ಮುಂಡ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ವಿವರಿಸಿದ ಡಿಸಿಎಂ, ಬುಡಕಟ್ಟು ಜನರು ವಾಸಿಸುವ ಅರಣ್ಯ ಪ್ರದೇಶಗಳಲ್ಲಿರುವ 12 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತಸೌಕರ್ಯಗಳನ್ನು ಒದಗಿಸಲಾಗಿದೆ. ಕಲ್ಯಾಣ ಕರ್ನಾಟಕದ 10 ಸಂಚಾರಿ ಆರೋಗ್ಯ ಘಟಕಗಳನ್ನು ಪ್ರಾರಂಭಿಸಲಾಗುವುದು. ವಿಜ್ಞಾನ ಮತ್ತು ತಂತ್ರಜ್ಞಾನ ವನ್ನು ಬಳಕೆ ಮಾಡಿಕೊಂಡು ಸಮುದಾಯದ ಪಾಲುಗೊಳ್ಳುವಿಕೆಯೊಂದಿಗೆ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತದೆ. ರಾಜ್ಯದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳ ಸಮುದಾಯ ಆರೋಗ್ಯ ಕೋಶದಡಿ ಬುಡಕಟ್ಟು ಆರೋಗ್ಯ ಘಟಕವನ್ನು ಪ್ರಾರಂಭಿಸಲಾಗುವುದು. ರಾಜ್ಯದಲ್ಲಿರುವ 10 ವೈದ್ಯಕೀಯ ಮಹಾವಿದ್ಯಾಲಯ ಅಥವಾ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಧರ್ಮಶಾಲೆ ಪ್ರಾರಂಭಿಸಿ, ಆದಿವಾಸಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುವುದು.
ಬುಡಕಟ್ಟು ಜನರ ಪರಂಪರಿಕ ವೈದ್ಯಪದ್ದತಿಗಳನ್ನು ದಾಖಲೀಕರಣ ಮತ್ತು ಆಯ್ದ ಔಷಧಿಗಳ ತಯಾರಿಕೆಗೆ ಅಗತ್ಯ ಮೂಲಭೂತಸೌಕರ್ಯಗಳನ್ನು ಒದಗಿಸಲಾಗುವುದು. ಕಿರಿ ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಡಿ ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ನೆರವು ನೀಡಲಾಗುವುದು. 19 ಪ್ರಧಾನ ಮಂತ್ರಿ ವನ-ಧನ ಕೇಂದ್ರ (ಪಿಎಂವಿಡಿವಿಕೆ)ಗಳನ್ನು ಸ್ಥಾಪಿಸಲಾಗಿದ್ದು, ಪ್ರತಿಕೇಂದ್ರಕ್ಕೆ ತಲಾ 15 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಬುಡಕಟ್ಟು ಜನರು ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳನ್ನು ಸಂಸ್ಕರಿಸಿ, ಮೌಲ್ಯವರ್ಧಿಸಿ ಮಾರುಕಟ್ಟೆ ಒದಗಿಸಲು ಮೈಸೂರಿನ ಸಿಎಫ್‍ಟಿಆರ್ ಐ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯೊಂದಿಗೆ ನಾನ್ ಟಿಂಬರ್ ಫಾರೆಸ್ಟ್ ಪ್ರೊಡೆಕ್ಟ್ ಕಲೆಕ್ಟರ್ ಎಂಟರ್ಪ್ರೈಸಸ್ ಅನ್ನು ಸ್ಥಾಪಿಸಲಾಗುತ್ತಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನಾಗಪೂರ್ ಬಳಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೊಂಡ 228 ಕುಟುಂಬಗಳ ರೈತ ಉತ್ಪಾದಕರ ಸಂಸ್ಥೆ ಸ್ಥಾಪಿಸಲು ಸಮೀಕ್ಷೆ ಕಾರ್ಯ ನಡೆಯುತ್ತಿದೆ. 2667 ಕುಟುಂಬಗಳಿಗೆ ಹೈನುಗಾರಿಕೆ, ಕುರಿ, ಮೇಕೆ, ಗೂಡ್ಸ್ ವಾಹನ ಸೇರಿದಂತೆ ಇತರ ಜೀವನೋಪಾಯ ಕಾರ್ಯಕ್ರಮಗಳಿಗೆ 21 ಕೋಟಿ ರೂ. ನೆರವು ನೀಡಲಾಗಿದೆ. ಬಿಳಿಗಿರಿ ರಂಗನ ಬೆಟ್ಟದಲ್ಲಿನ ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಪಡೆದಿರುವ 448 ಕುಟುಂಬಗಳು ಇಲಾಖೆಯ ನೆರವಿನೊಂದಿಗೆ ರೈತ ಉತ್ಪಾದನಾ ಸಂಸ್ಥೆಯನ್ನು ಸ್ಥಾಪಿಸಿ, ಕಾಫಿ ಬೋರ್ಡ್ ನ ತಾಂತ್ರಿಕ ಸಹಾಯದಿಂದ ಕಾಫಿ ಮತ್ತು ಮೆಣಸು ಬೆಳೆಗಳಿಗೆ ಪ್ರೋತ್ಸಾಹಿಸಿ ಈ ಕುಟುಂಬಗಳ ಆದಾಯವನ್ನು ಶೇ. 16 ರಿಂದ ಶೇ.43 ರಷ್ಟು ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಬುಡಕಟ್ಟು ಸಮುದಾಯದವರಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಅತ್ಯುತ್ತವಾಗಿವೆ ಎಂದು ಕೇಂದ್ರ ಬುಡಕಟ್ಟು ಕಲ್ಯಾಣ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ ಸಂಗಪ್ಪ ಸಂವಾದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.