ಅತೃಪ್ತರನ್ನು ಸಂಭಾಳಿಸುವುದೇ ಸವಾಲು
Team Udayavani, Jul 27, 2019, 5:51 AM IST
ಬೆಂಗಳೂರು: ಯಡಿಯೂರಪ್ಪ ಅವರು 105 ಶಾಸಕರ ಸಂಖ್ಯಾಬಲವನ್ನೇ ನಂಬಿ ಮುಖ್ಯಮಂತ್ರಿಯಾಗಿರುವುದರಿಂದ ಜೆಡಿಎಸ್ ಹಾಗೂ ಕಾಂಗ್ರೆಸ್‌ನಿಂದ ಬಂಡಾಯವೆದ್ದು, ಹೊರ ಬಂದಿರುವ ಶಾಸಕರನ್ನು ಬಿಜೆಪಿಯಲ್ಲಿ ನಿಯಂತ್ರಿಸಿಕೊಂಡು ಹೋಗುವುದು ಅವರ ಮುಂದಿರುವ ದೊಡ್ಡ ಸವಾಲಾಗಿದೆ.
ಕಾಂಗ್ರೆಸ್‌ನಿಂದ ಬಂಡಾಯವೆದ್ದು ಮುಂಬೈ ಸೇರಿರುವ 15 ಶಾಸಕರ ಕ್ಷೇತ್ರಗಳಿಗೆ ಮುಂದಿನ ಆರು ತಿಂಗಳ ಒಳಗಾಗಿ ಉಪ ಚುನಾವಣೆಗಳು ನಡೆಯುವುದರಿಂದ ಅವರಲ್ಲಿ ಕನಿಷ್ಠ ಹತ್ತು ಜನರನ್ನಾದರೂ ಗೆಲ್ಲಿಸಿಕೊಂಡು ಬರುವ ಪ್ರಮುಖ ಹೊಣೆಗಾರಿಕೆ ಯಡಿಯೂರಪ್ಪ ಮೇಲಿದೆ. 225 ಸಂಖ್ಯಾಬಲದ ರಾಜ್ಯ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಅಗತ್ಯವಿರುವ 113 ಶಾಸಕರನ್ನು ಉಳಿಸಿಕೊಂಡು ಹೋಗಲು ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಅನಿವಾರ್ಯವಾಗಿದೆ. ಅಧಿಕಾರ ವಂಚಿತರಾಗಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಉಪ ಚುನಾವಣೆಗಳನ್ನು ಜಂಟಿಯಾಗಿಯೇ ಎದುರಿಸುವ ಆಲೋಚನೆಯಲ್ಲಿದ್ದಾರೆ. ಅವರಿಗೆ ಅತೃಪ್ತ ಶಾಸಕರನ್ನು ಹೇಗಾದರೂ ಮಾಡಿ ಸೋಲಿಸಿ, ರಾಜಕೀಯ ಭವಿಷ್ಯವನ್ನು ಅಂತ್ಯಗೊಳಿಸಬೇಕೆನ್ನುವುದೇ ಮುಖ್ಯ ಉದ್ದೇಶವಾಗಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿರುವ ಅತೃಪ್ತರಲ್ಲಿ ಎಷ್ಟು ಶಾಸಕರಿಗೆ ಮಂತ್ರಿ ಸ್ಥಾನ ನೀಡುತ್ತಾರೆ ಎನ್ನುವುದರ ಮೇಲೆ ಎಷ್ಟು ಸರಳವಾಗಿ ಸರ್ಕಾರ ನಡೆಯುತ್ತದೆ ಎನ್ನುವುದು ನಿರ್ಧಾರವಾಗುತ್ತದೆ. ಅತೃಪ್ತ ಶಾಸಕರು ಈಗಾಗಲೇ ತಮಗೆ ಇಂತಹುದೇ ಖಾತೆ ಬೇಕೆಂದು ಪಟ್ಟು ಹಿಡಿದಿರುವುದರಿಂದ ಅವರು ಬಯಸಿದ ಖಾತೆ ಸಿಗದೇ ಹೋದರೆ, ಅವರು ಬಿಜೆಪಿಯಲ್ಲಿ ಮುಂದುವರಿಯುತ್ತಾರಾ ಎನ್ನುವುದು ಮುಖ್ಯವಾಗುತ್ತದೆ. ಒಂದು ವೇಳೆ, ಬಂಡಾಯಗಾರರಿಗೆ ಪ್ರಮುಖ ಖಾತೆಗಳನ್ನು ನೀಡಿದರೆ, ಮೂಲ ಬಿಜೆಪಿಯವರಿಂದ ಆಕ್ಷೇಪ ವ್ಯಕ್ತವಾಗಬಹುದು ಹಾಗೂ ಬಂಡಾಯಗಾರರು ಮೂಲ ಬಿಜೆಪಿ ಶಾಸಕರ ಕೆಲಸಗಳಿಗೆ ಸರಿಯಾಗಿ ಮಾನ್ಯತೆ ನೀಡದಿದ್ದರೆ, ಅವರು ಅಸಮಾಧಾನಗೊಳ್ಳುವ ಸಾಧ್ಯತೆ ಇದೆ. ಅದು ಮೂಲ ಹಾಗೂ ವಲಸಿಗರ ನಡುವಿನ ತಿಕ್ಕಾಟಕ್ಕೆ ಕಾರಣವಾಗಬಹುದು.
ಸಚಿವ ಸ್ಥಾನಕ್ಕೆ ಚರ್ಚೆ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಈ ಬಾರಿ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆ ಶುರುವಾಗಿದೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದವರ ಪೈಕಿ 26ಕ್ಕೂ ಹೆಚ್ಚು ಮಂದಿ ಈಗಲೂ ಶಾಸಕರಾಗಿದ್ದಾರೆ. ಆದರೆ, ಅತೃಪ್ತ ಜೆಡಿಎಸ್-ಕಾಂಗ್ರೆಸ್ ಶಾಸಕರ ಪರೋಕ್ಷ ಬೆಂಬಲದಿಂದ ಸರ್ಕಾರ ರಚನೆಯಾಗುತ್ತಿರುವುದರಿಂದ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿ 34 ಸ್ಥಾನವಷ್ಟೇ ಇರುವುದರಿಂದ ಒಂದಷ್ಟು ಬಿಜೆಪಿ ಶಾಸಕರು ‘ತ್ಯಾಗ’ಕ್ಕೂ ಸಿದ್ಧರಾಗಬೇಕಾಗಿದೆ. ಏಕೆಂದರೆ, ಅತೃಪ್ತರ ಪೈಕಿ ಕನಿಷ್ಠ 10 ಮಂದಿಗಾದರೂ ಸಚಿವ ಸ್ಥಾನ ಕೊಡುವ ಒಪ್ಪಂದ ಆಗಿದೆ. ಹೀಗಾಗಿ, ಬಿಜೆಪಿಯವರಿಗೆ 23 ಸ್ಥಾನವಷ್ಟೇ ಸಿಗಲಿದೆ. ಅದರಲ್ಲೂ ಜಾತಿವಾರು, ಪ್ರಾದೇಶಿಕವಾರು, ಜಿಲ್ಲಾವಾರು ಪ್ರಾತಿನಿಧ್ಯ ಸಿಗಬೇಕಿದೆ. ಇದು ಒಂದು ರೀತಿಯಲ್ಲಿ ಸವಾಲೂ ಹೌದು. ಈಗಿನ ಲೆಕ್ಕಾಚಾರದ ಪ್ರಕಾರ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಬೆಳಗಾವಿ ಜಿಲ್ಲೆಗಳ ವಿಚಾರದಲ್ಲಿ ಆಕಾಂಕ್ಷಿಗಳು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ, ಅಂತಿಮವಾಗಿ ಯಾವ ಮಾನದಂಡದಡಿ ಹಾಗೂ ಲೆಕ್ಕಾಚಾರದಡಿ ಯಾರ್ಯಾರಿಗೆ ಮಂತ್ರಿಗಿರಿ ಭಾಗ್ಯ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಸಚಿವ ಸ್ಥಾನ ಸಿಗದವರಿಗೆ ನಿಗಮ-ಮಂಡಳಿ ಅಧ್ಯಕ್ಷಗಿರಿ, ಸಮ್ಮಿಶ್ರ ಸರ್ಕಾರದಲ್ಲಿ ಅವಕಾಶ ಕಲ್ಪಿಸಿದಂತೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡುವ ಮೂಲಕವೂ ಅವರನ್ನು ಸಮಾಧಾನಪಡಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.