ಕಾರ್ನಾಡ್ ವಸ್ತುಸ್ಥಿತಿ ವಿಶ್ಲೇಷಿಸುವ ರೀತಿ ಅಪೂರ್ವವಾದುದು: ಸಿಎಂ ಕುಮಾರಸ್ವಾಮಿ
Team Udayavani, Jun 10, 2019, 3:06 PM IST
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಅವರು ಇತಿಹಾಸ, ಪುರಾಣ ಕಥೆಗಳನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು. ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕಾರ್ನಾಡ್ ನಿಧನಕ್ಕೆ ಸಚಿವ ಡಿಕೆ ಶಿವಕುಮಾರ್ ಸಂತಾಪ:
‘ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದ ಸಾಹಿತಿ, ಪ್ರಗತಿಪರ ಚಿಂತಕ ಗಿರೀಶ್ ಕಾರ್ನಾಡ್ ಅವರು ಇಂದು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಯಿತು. ಅವರ ಆಲೋಚನೆಗಳು, ಚಿಂತನೆಗಳು ನಮ್ಮ ಸಮಾಜಕ್ಕೆ ಅಗತ್ಯವಾಗಿದ್ದವು.’
‘ಸಾಹಿತ್ಯ, ನಾಟಕ, ಚಲನಚಿತ್ರ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಕಾರ್ನಾಡರು, ಈ ಮೂರು ರಂಗಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರು ಬರೆದ ಸಾಹಿತ್ಯಗಳು, ರಚಿಸಿದ ನಾಟಕಗಳು, ನಿರ್ದೇಶನ ಹಾಗೂ ನಟನೆಯ ಚಿತ್ರಗಳು ನಮ್ಮ ಸಮಾಜದಲ್ಲಿನ ಕೆಟ್ಟ, ಮೂಢ ಪದ್ಧತಿಗಳ ವಿರುದ್ಧದ ದನಿಯಾಗಿದ್ದವು. ಇತಿಹಾಸ ಹಾಗೂ ಕಲ್ಪನಿಕ ಕಥೆಗಳ ಜತೆಗೆ ಸಮಾಜದ ಪ್ರಸ್ತುತ ಪರಿಸ್ಥಿತಿಯನ್ನು ಆಧರಿಸಿ ಅವರು ಬರೆಯುತ್ತಿದ್ದ ನಾಟಕಗಳು ಹೆಚ್ಚು ಖ್ಯಾತಿ ಪಡೆದಿದ್ದವು. ಎಷ್ಟರಮಟ್ಟಿಗೆ ಎಂದರೆ ಇವರ ಅನೇಕ ನಾಟಕಗಳು ಬೇರೆ ಭಾಷೆಗಳಿಗೆ ಭಾಷಾಂತರವಾಗಿವೆ.’
‘ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಅಭಿಮಾನಿಗಳು, ಕುಟುಂಬ ಸದಸ್ಯರಿಗೆ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವ ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.