ಸಚಿವರಾಗುವ ಆಸೆ, ಖಾತೆಗಳಿಗೆ ಮಹದಾಸೆ
Team Udayavani, Feb 2, 2020, 3:10 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗುತ್ತಿದ್ದಂತೆ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆನ್ನು ಬಿದ್ದಿದ್ದಾರೆ. ಶುಕ್ರವಾರ ರಾತ್ರಿ ದೆಹಲಿಯಿಂದ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಜತೆಗೆ ಸಂದೇಶ ಹೊತ್ತು ತರುತ್ತಿದ್ದಂತೆ ಆಕಾಂಕ್ಷಿಗಳ ದಂಡು ಶನಿವಾರ ಬೆಳ್ಳಂಬೆಳಗ್ಗೆ ಯಡಿಯೂರಪ್ಪ ನಿವಾಸಕ್ಕೆ ಲಗ್ಗೆ ಇಟ್ಟಿತು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಮುಖ್ಯಮಂತ್ರಿ ಅವರು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತನಾಡಿದರೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ ಮುಖ್ಯಮಂತ್ರಿಯವರ ನಿವಾಸಕ್ಕೆ ಆಗಮಿಸಿ ಚರ್ಚಿಸಿದರು. ಈ ಮಧ್ಯೆ, ರಮೇಶ್ ಜಾರಕಿಹೊಳಿ ಅವರು ಯಡಿಯೂರಪ್ಪ ಅವರನ್ನು ಸಂಪರ್ಕಿಸಿ ಕೊಟ್ಟ ಮಾತಿನಂತೆ ಹನ್ನೊಂದು ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಮಹೇಶ್ ಕುಮಟಳ್ಳಿ ಅಥವಾ ಶ್ರೀಮಂತ ಪಾಟೀಲ್ ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಕೊಟ್ಟು ಮತ್ತೂಬ್ಬರಿಗೆ ನಿಗಮ ಮಂಡಳಿ ಸ್ಥಾನ ಕೊಡಲಾಗುವುದು ಎಂಬ ಪ್ರಸ್ತಾಪದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದರು ಎಂದು ಹೇಳಲಾಗಿದೆ. ಮತ್ತೂಂದೆಡೆ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತವಾಗುತ್ತಿದ್ದಂತೆ ಅರ್ಹ ಶಾಸಕರು ಪ್ರಬಲ ಖಾತೆಗೆ ಬೇಡಿಕೆ ಇಟ್ಟಿದ್ದಾರೆ.
ನಗರಾಭಿವೃದ್ಧಿ ಖಾತೆ ಮೇಲೆ ಬೈರತಿ ಬಸವರಾಜ್, ಬೆಂಗಳೂರು ಅಭಿವೃದ್ಧಿ (ಬಿಡಿಎ, ಬಿಬಿಎಂಪಿ ಸೇರಿ) ಖಾತೆ ಮೇಲೆ ಎಸ್. ಟಿ.ಸೋಮಶೇಖರ್ , ನೀರಾವರಿ ಅಥವಾ ಸಮಾಜ ಕಲ್ಯಾಣ ಖಾತೆ ಮೇಲೆ ರಮೇಶ್ ಜಾರಕಿಹೊಳಿ ಕಣ್ಣಿಟ್ಟು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕುತ್ತಿದ್ದಾರೆಂದು ಹೇಳಲಾಗಿದೆ. ಡಾ.ಕೆ.ಸುಧಾಕರ್, ಆನಂದ್‌ಸಿಂಗ್, ಗೋಪಾಲಯ್ಯ, ಬಿ.ಸಿ.ಪಾಟೀಲ್ ಸಹ ಪ್ರಬಲ ಖಾತೆಗಳಿಗೆ ಪಟ್ಟು ಹಿಡಿದಿದ್ದಾರೆ. ಆನಂದ್‌ಸಿಂಗ್ ಈ ಸಂಬಂಧ ಮುಖ್ಯಮಂತ್ರಿಯವರನ್ನು ಶನಿವಾರ ಸಂಜೆ ಭೇಟಿ ಮಾಡಿ ಚರ್ಚಿಸಿದರು.
ಯಡಿಯೂರಪ್ಪ ಅವರು ಸಚಿವಾಕಾಂಕ್ಷಿಗಳ ಸಭೆ ಕರೆದು ಶನಿವಾರ ಮಾತನಾಡುತ್ತಾರೆಂದು ಹೇಳಲಾಗಿತ್ತಾದರೂ ಕೇಂದ್ರ ಬಜೆಟ್ ಹಾಗೂ ಪೂರ್ವ ನಿಯೋಜಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಾಧ್ಯವಾಗಿಲ್ಲ. ಭಾನುವಾರ ಈ ಬಗ್ಗೆ ಚರ್ಚಿಸಬಹುದು. ಜತೆಗೆ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿ ಪ್ರಮುಖ ಸಚಿವರ ಜತೆ ದೆಹಲಿಯಲ್ಲಿ ಅಮಿತ್ ಶಾ, ಜೆ.ಪಿ.ನಡ್ಡಾ ಅವರೊಂದಿಗೆ ನಡೆದ ಮಾತುಕತೆಯ ಮಾಹಿತಿ ನೀಡಿ ಅವರ ಸಂದೇಶ ಸಹ ತಿಳಿಸಿದ್ದಾರೆ ಎನ್ನಲಾಗಿದೆ.
ಪುನಾರಚನೆ ಆಗತ್ತಾ? ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪ ಅವರಿಗೆ ಕೆಲವೊಂದು ಸಲಹೆ ನೀಡಿದ್ದಾರೆ. ಇದೇ ಕಾರಣಕ್ಕೆ ನಾನು ಕೆಲವು ನಾಯಕರ ಜತೆ ಚರ್ಚಿಸಿ ಮತ್ತೂಮ್ಮೆ ಅಮಿತ್ ಶಾ ಅವರೊಂದಿಗೂ ಮಾತನಾಡಿ ಅಂತಿಮಗೊಳಿಸುತ್ತೇನೆಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಅವರು ಯಡಿಯೂರಪ್ಪ ಅವರಿಗೆ ನೀಡಿರುವ ಸಲಹೆಯಾ ದರೂ ಏನು ಎಂಬುದೇ ಕುತೂಹಲ ಮೂಡಿಸಿದೆ. ಸಂಪುಟ ವಿಸ್ತರಣೆ ಜತೆಗೆ ಸಣ್ಣ ಪ್ರಮಾಣದ ಪುನಾರಚನೆಯೂ ನಡೆಯುವುದೇ ಎಂಬ ಅನುಮಾನವೂ ಉಂಟಾಗಿದೆ.
ಪುನಾರಚನೆ ಆಗಿದ್ದೇ ಆದರೆ ಯಾರನ್ನು ಕೈ ಬಿಡಲಾಗುವುದು ಎಂಬ ಆತಂಕವೂ ಸಚಿವರಿಗಿದೆ. ಸಿ.ಸಿ.ಪಾಟೀಲ್, ಪ್ರಭು ಚೌವ್ಹಾಣ್ ಸೇರಿ ಕೆಲವರನ್ನು ಕೈ ಬಿಡಲಾಗುವುದು ಎಂಬ ವದಂತಿಯೂ ಹಬ್ಬಿದೆ. ಇದರ ನಡುವೆಯೇ ಶನಿವಾರ ಸಚಿವ ಸಿ.ಸಿ.ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಯಡಿಯೂರಪ್ಪ ಅವರು ಆಪ್ತರ ಬಳಿ ಹೇಳಿರುವ ಪ್ರಕಾರ ಬಹುತೇಕ ಸೋಮವಾರವೇ ಸಂಪುಟ ವಿಸ್ತರಣೆಯಾಗಬಹುದು ಎಂದು ಬಿಜೆಪಿಯ ನಾಯಕರು ಹೇಳುತ್ತಾರೆ.
ನನಗೆ ಪ್ರಬಲ ಖಾತೆ ದೊರೆ ಯುವ ನಿರೀಕ್ಷೆಯಿದೆ. ನಗರಾಭಿವೃದ್ಧಿ ಖಾತೆ ಸಿಕ್ಕರೆ ಸಂತೋಷ. ನಗರಾಭಿವೃದ್ಧಿ ಖಾತೆಯಲ್ಲಿ ಕೆಲಸ ಮಾಡಬೇಕೆಂಬ ಆಸೆಯಿದೆ. ಮುಖ್ಯಮಂತ್ರಿಯವರ ತೀರ್ಮಾನಕ್ಕೆ ಬಿಟ್ಟಿದ್ದು.
-ಬೈರತಿ ಬಸವರಾಜ್, ಸಚಿವಾಕಾಂಕ್ಷಿ
ಮುಖ್ಯಮಂತ್ರಿ ಯವರು ನನ್ನನ್ನು ಕೈ ಬಿಡುವುದಿಲ್ಲ ಎಂಬ ನಂಬಿಕೆಯಿದೆ. ಹೀಗಾಗಿ, ಸಂಪುಟ ವಿಸ್ತರಣೆ ಸಂಬಂಧ ಬೇರೆ ವಿಚಾರಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಪಕ್ಷದ ನಿರ್ಧಾರಕ್ಕೆ ಬದ್ಧ.
-ಮಹೇಶ್ ಕುಮಟಳ್ಳಿ, ಸಚಿವಾಕಾಂಕ್ಷಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.