![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 4, 2021, 3:12 PM IST
ಸಾಂದರ್ಭಿಕ ಚಿತ್ರ...
ಬೆಂಗಳೂರು: ಕೋವಿಡ್ ಆರ್ಥಿಕ ಸಂಕಷ್ಟದ ಸಿಲುಕ್ಕಿದ್ದ ಹೋಟೆಲ್ ಉದ್ಯಮದ ಈಗ ಚೇತರಿಕೆ ಹಾದಿಯಲ್ಲಿ ಸಾಗುತ್ತಿದೆ. ಆದರೆ
ಪ್ರವಾಸೋದ್ಯಮ ಮತ್ತು ಐಟಿ ಕಂಪನಿಗಳನ್ನು ನಂಬಿಕೊಂಡಿದ್ದ ಹೋಟೆಲ್‌ಗಳು ಇನ್ನೂ ಬಾಗಿಲು ತೆರೆದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಅವುಗಳು ಸದ್ಯದಲ್ಲಿ ತೆರೆದುಕೊಳ್ಳುವ ಸೂಚನೆಗಳು ಕಾಣುತ್ತಿಲ್ಲ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇನ್ನೂ ತೆರೆದು ಕೊಂಡಿಲ್ಲ. ಐಟಿ-ಬಿಟಿ ಕಂಪನಿಗಳು ಕೂಡ ವರ್ಕ್ ಫ್ರಮ್ ಹೋಮ್ ಕಾರ್ಯಕ್ಕೆ ಮೊರೆ ಹೋಗಿವೆ. ಆ ಹಿನ್ನೆಲೆಯಲ್ಲಿ ಐಟಿ-ಬಿಟಿ ಕಂಪನಿಗಳು ಮತ್ತು ಪ್ರವಾಸೋದ್ಯಮ ನಂಬಿಕೊಂಡಿದ್ದ ಹಲವು ಹೋಟೆಲ್‌ಗಳ ಮಾಲೀಕರು ಬಾಗಿಲು ತೆರೆಯಲು ಹಿಂದೇಟು ಹಾಕುತ್ತಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ವೈಟ್ ಫೀಲ್ಡ್, ಮಾನ್ಯತಾ ಟೆಕ್‌ಪಾರ್ಕ್ ಸೇರಿದಂತೆ ಬೆಂಗಳೂರಿನ ಇನ್ನೂ ಕೆಲವು ಪ್ರದೇಶಗಳ ವ್ಯಾಪ್ತಿಯಲ್ಲಿ ಐಟಿ- ಕಂಪನಿಗಳು ನೆಲೆಸಿವೆ. ಈ ಪ್ರದೇಶವ್ಯಾಪ್ತಿಯಲ್ಲಿ ಸುಮಾರು1 ಸಾವಿರಕ್ಕೂ ಅಧಿಕ ಹೋಟೆಲ್‌ಗಳು ಇವೆ. ಆದರೆ ಕಳೆದ ಮಾರ್ಚ್‌ನಲ್ಲಿ ಬಾಗಿಲು ಹಾಕಿರುವ ಈ ಹೋಟೆಲ್‌ಗಳು ಇನ್ನೂ ತೆರೆದಿಲ್ಲ. ಕೋವಿಡ್ ಮೊದಲ ಮತ್ತು 2ನೇ ಅಲೆಯಲ್ಲಿ ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಿದ ಹೋಟೆಲ್ ಮಾಲೀಕರು ಪ್ರವಾಸೋದ್ಯಮ ಮತ್ತು ಐಟಿಬಿಟಿ ಕಂಪನಿಗಳ ವ್ಯಾಪ್ತಿಯಲ್ಲಿರುವ ಹೋಟೆಲ್ ಗಳನ್ನು ತೆರೆಯುವ ಬಗ್ಗೆ ಆಲೋಚನೆ ಹೊಂದಿಲ್ಲ. ಏತನ್ಮಧ್ಯೆ ಸಂಭಾವ್ಯ ಮೂರನೇ ಅಲೆಯ ಬಗ್ಗೆ ಈಗಾಗಲೇ ತಜ್ಞರು ಮಾತನಾಡುತ್ತಿದ್ದಾರೆ. ಹೀಗಾಗಿ ಹೋಟೆಲ್ ಉದ್ಯಮಕ್ಕೂ 3ನೇ ಅಲೆಯ ಭೀತಿ ಶುರುವಾಗಿದೆ ಎಂದು ರಾಜ್ಯ ಹೋಟೆಲ್‌ಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಟಾರ್ ಹೇಳಿದ್ದಾರೆ.
ಈಗಾಗಲೇ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುತ್ತಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ಹೋಟೆಲ್ ಉದ್ಯಮಕ್ಕೂ ಭಯ ಕಾಡತೊಡಗಿದೆ. ನೆರೆ ಹೊರೆಯ ರಾಜ್ಯಗಳಲ್ಲಿನ ಕೋವಿಡ್ ಪ್ರಕರಣಗಳ ಬಗ್ಗೆ ಸರ್ಕಾರ ಹೆಚ್ಚು ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ
ಡಿಸೆಂಬರ್‌ವರೆಗೂ ಆಂತಕ: ಬೆಂಗಳೂರಿನಲ್ಲಿ ಈಗ ಸುಮಾರು 24,500 ಹೋಟೆಲ್‌ಗಳಿವೆ. ಇದರಲ್ಲಿ ಸುಮಾರು 3,500 ಹೋಟೆಲ್‌ಗಳು ಹೋಟೆಲ್ ಕಂ ಕೊಠಡಿ ಸೇವೆಯನ್ನು ಹೊಂದಿದೆ. ದರ್ಶನಿ ಸೇರಿದಂತೆ ಕೆಲವು ಹೋಟೆಲ್‌ಗಳ ವ್ಯಾಪಾರ ಶೇ.70 ರಷ್ಟಿದೆ. ಆದರೆ, ಹೋಟೆಲ್ ಕಂ ಕೊಠಡಿ ಸೇವೆ ಹೊಂದಿರುವ ಹೋಟೆಲ್‌ಗಳಲ್ಲಿ ಶೇ.30 ಮಾತ್ರ ವ್ಯಾಪಾರವಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿರುವ ಸ್ಟಾರ್ ಹೋಟೆಲ್ ಗಳೂ ಪ್ರವಾಸಿಗರನ್ನು ನೆಚ್ಚಿಕೊಂಡಿವೆ. ಹಾಗೆಯೇ ಹೋಟೆಲ್ ಕಂ ರೆಸ್ಟೋರೆಟ್‌ಗಳೂ ದೊಡ್ಡ ಸಭೆ ಸಮಾರಂಭಗಳನ್ನು ನೆಚ್ಚಿಕೊಂಡಿವೆ. ಆದರೆ ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸಭೆ ಸಮಾರಂಭಗಳು ನಡೆಯುತ್ತಿಲ್ಲ. ಹೊರದೇಶ ಮತ್ತು ಹೊರ
ರಾಜ್ಯದ ಪ್ರವಾಸಿಗಳು ಭೇಟಿ ನೀಡುತ್ತಿಲ್ಲ. ಇದು ಹೋಟೆಲ್ ಉದ್ಯಮದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ ಎಂದಿದ್ದಾರೆ. ಕೋವಿಡ್ ಆತಂಕ ಮತ್ತೆ ಶುರುವಾಗಿದೆ. ಹೀಗಾಗಿ ಹೋಟೆಲ್ ಉದ್ಯಮ ಡಿಸೆಂಬರ್ ಬಳಿಕ ದೊಡ್ಡ ಮಟ್ಟದಲ್ಲಿ ಚೇತರಿಕೆ ಕಾಣುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಉತ್ತರ ಭಾರತ ಕಾರ್ಮಿಕರಿಗೆ ಭಯ
ರಾಜ್ಯದ ಹೋಟೆಲ್ ಉದ್ಯಮದಲ್ಲಿ ಸುಮಾರು 1.5 ಲಕ್ಷ ಮಂದಿ ಕಾರ್ಮಿಕರಿದ್ದಾರೆ. ಅದರಲ್ಲಿ ಸುಮಾರು 80 ಸಾವಿರದಷ್ಟು ಕಾರ್ಮಿಕರು ಉತ್ತರ ಪ್ರದೇಶ, ಬಿಹಾರ, ಪಶ್ಚಿಮಬಂಗಾಳ ಸೇರಿದಂತೆ ಉತ್ತರ ಭಾರತ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಕೋವಿಡ್ 2ನೇ ಅಲೆಯ ವೇಳೆ ಹಲವು ಮಂದಿ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳಿದ್ದಾರೆ. ಅದರಲ್ಲಿ ಶೇ.30 ಮಂದಿ ಮಾತ್ರ ಕಾರ್ಮಿಕರು ಕೆಲಸಕ್ಕೆ ಮರಳಿದ್ದಾರೆ. ಉಳಿದ ಕಾರ್ಮಿಕರು 3ನೇ ಅಲೆಯ ನಂತರ ಬರುವುದಾಗಿ ಹೇಳುತ್ತಾರೆ ಎಂದು ಹೋಟೆಲ್ ಮಾಲೀಕರು ಹೇಳುತ್ತಾರೆ
ಕೋವಿಡ್ ಹಿನ್ನೆಲೆಯಲ್ಲಿ ಐಟಿ-ಬಿಟಿ ಕಂಪನಿಗಳಿಗೆ ವರ್ಕ್ ಫ್ರಮ್ ಹೋಮ್‌ಗೆ ಮೊರೆ ಹೋಗಿವೆ. ಆ ಹಿನ್ನೆಲೆಯಲ್ಲಿಯೇ ಐಟಿ-ಬಿಟಿ ಉದ್ಯಮವನ್ನು ಹೆಚ್ಚಿಕೊಂಡಿದ್ದ ಹೋಟೆಲ್‌ಗಳು ಬಾಗಿಲು ಹಾಕಿವೆ.
-ಪಿ.ಸಿ.ರಾವ್, ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷರು
-ದೇವೇಶ ಸೂರಗುಪ್ಪ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.