Crime: ಮಗಳನ್ನೇ ಕೊಲೆಗೈದು ಬೈಕಿಗೆ ಕಟ್ಟಿ ದರದರನೆ ಎಳೆದೊಯ್ದ ಪಾಪಿ ತಂದೆ!
ಸಿಸಿ ಟಿವಿ ಕ್ಯಾಮರಾದಲ್ಲಿ ದೃಶ್ಯ ಸೆರೆ
Team Udayavani, Aug 11, 2023, 6:19 PM IST
ಅಮೃತ್‌ಸರ: ಯುವಕನೊಬ್ಬನನ್ನು ಪ್ರೀತಿಸಿದ ಕಾರಣಕ್ಕೆ ಕೋಪಗೊಂಡ ತಂದೆ ತನ್ನ 16 ವರ್ಷ ಪ್ರಾಯದ ಮಗಳನ್ನು ಕೊಂದು ಬೈಕಿಗೆ ಕಟ್ಟಿ ರೈಲ್ವೇ ಹಳಿಯ ಬಳಿ ಎಳೆದೊಯ್ದ ದಾರುಣ ಘಟನೆ ಪಂಜಾಬ್‌ನ ಅಮೃತ್‌ಸರದ ಮುಚ್ಚಲ್ ಗ್ರಾಮದಲ್ಲಿ ನಡೆದಿದೆ.
ತಂದೆ ಮಗಳ ದೇಹವನ್ನು ಬೈಕಿಗೆ ಕಟ್ಟಿ ರಸ್ತೆಯಲ್ಲೇ ವೇಗವಾಗಿ ಎಳೆದೊಯ್ಯುವ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಕಳೆದ ಎರಡು ದಿನಗಳಿಂದ ಮನೆಗೆ ಬಾರದೇ ನಾಪತ್ತೆಯಾಗಿದ್ದ ಆಕೆ ಗುರುವಾರ ಮನೆಗೆ ಹಿಂದಿರುಗಿದ್ದಾಳೆ. ಆಕೆಯ ಶೀಲದ ಬಗ್ಗೆ ಸಂಶಯಪಟ್ಟ ಆಕೆಯ ತಂದೆ ಕ್ರೋಧದಿಂದ ಆಕೆಯ ತಲೆಕೂದಲು ಹಿಡಿದು ಮನೆಯಿಂದ ಎಳೆದೊಯ್ದು ಹರಿತ ಆಯುಧದಿಂದ ಆಕೆಯನ್ನು ಇರಿದು ಕೊಂದಿದ್ದಾನೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಬಳಿಕ ತನ್ನ ಬೈಕ್‌ಗೆ ಆಕೆಯ ದೇಹವನ್ನು ಕಟ್ಟಿ ರಸ್ತೆಯಲ್ಲಿ ಎಳೆದೊಯ್ದು ರೈಲ್ವೇ ಹಳಿಯ ಬಳಿ ಬೈಕ್ ನಿಲ್ಲಿಸಿದ್ದಾನೆ. ಬೈಕ್‌ನಲ್ಲಿ ಆಕೆಯನ್ನು ಎಳೆದೊಯ್ಯುತ್ತಿರುವ ದೃಶ್ಯವನ್ನು ನೋಡಿ ಗ್ರಾಮಸ್ಥರು ಬೆಚ್ಚಿಬಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ʻಕೊಲೆಯಾದ ಬಾಲಕಿಯ ದೇಹವನ್ನು ಆಕೆಯ ತಂದೆಯೇ ಎಳೆದುಕೊಂಡು ಹೋಗಿದ್ದಾನೆ. ಆಕೆಯ ತಂದೆಯನ್ನು ನಾವು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದೇವೆ. ಇದೊಂದು ಮರ್ಯಾದಾ ಹತ್ಯೆಯಾಗಿದ್ದು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಕೊಲೆಗಡುಕ ತಂದೆಯ ವಿರುದ್ಧ ಆತನ ಕುಟುಂಬದವರು ದೂರು ದಾಖಲಿಸಲು ಒಪ್ಪಿಲ್ಲʼ ಎಂದು ಅಮೃತ್‌ಸರ್ ಗ್ರಾಮಾಂತರ ಠಾಣೆಯ SSP ಸತೀಂದರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: BBMP ಕಚೇರಿಯಲ್ಲಿ ಅಗ್ನಿ ಅವಘಡ ; ಹಲವು ಸಿಬಂದಿಗಳಿಗೆ ಗಂಭೀರ ಗಾಯ
Amritsar:CCTV video records a tragic case of honor killing, a father can be seen dragging his daughter with his motorcycle.
Subsequently, the girl’s lifeless body was discovered close to railway tracks. The young woman had fled her residence with a male companion. pic.twitter.com/cGeaudfcVu
— AAP watch (@AAP_watch) August 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.