![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 17, 2021, 12:03 PM IST
ಹುಣಸೂರು: ಡಿ.18ರಂದು ನಡೆಯಲಿರುವ ಹನುಮ ಜಯಂತಿಗೆ ನಗರದ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪೂಜೆ, ಹೋಮ-ಹವನ, ದೇವರ ವಿಗ್ರಹ ಪ್ರತಿಷ್ಠಾಪಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ವಿವಿಧ ದೇವಾಲಯಗಳಿಂದ ತರಲಾಗಿದ್ದ ಬೃಹತ್ ಆಂಜನೇಯ ಮೂರ್ತಿ, ಕಂಚಿನ ಆಂಜನೇಯ, ಸೀತಾಮಾತೆ ಸಹಿತ ರಾಮ-ಲಕ್ಷ್ಮಣ ಹಾಗೂ ವೀರಾಂಜನೇಯ ವಿಗ್ರಹಗಳು ಹಾಗೂ ಪ್ರಥಮ ಬಾರಿಗೆ ಬೆಂಗಳೂರಿನ ದಾನಿಗಳು ನಿರ್ಮಿಸಿಕೊಟ್ಟಿರುವ ದತ್ತಾತ್ರೇಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದ್ದು, ಮುಂಜಾನೆ ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ, ಹೋಮ ಹವನ ನಡೆಸಲಾಯಿತು. ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ಆಯೋಜಿಸಲಾಗಿತ್ತು. ಈ ವೇಳೆ ಜಯಂತಿ ಸಮಿತಿಯ ಅಧ್ಯಕ್ಷ ವಿ.ಎನ್.ದಾಸ್, ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಅನಿಲ್ ಸೇರಿದಂತೆ ಅನೇಕರಿದ್ದರು.
ಮೆರವಣಿಗೆ ರದ್ದು
ಕೋವಿಡ್ ಮೂರನೇ ಅಲೆ ಹಿನ್ನಲೆಯಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಈ ಬಾರಿ ಹನುಮಂತೋತ್ಸವದ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದ್ದು. ಆಂಜನೇಸ್ವಾಮಿ ದೇವಾಲಯದ ಆವರಣದಲ್ಲಿ ಮಹಿಳೆಯರಿಗೆ ಸ್ಪರ್ಧೆ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ವಿವಿಧ ಪೂಜೆಗಳು ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.