ಹಸಿವು ಸಹಾಯವಾಣಿ: ವಿಸ್ತರಣೆಗೆ ಚಿಂತನೆ
Team Udayavani, Apr 3, 2020, 5:37 AM IST
ಬೆಂಗಳೂರು: ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ ದೇಶದಲ್ಲೇ ಪ್ರಥಮ ಬಾರಿಗೆ ಶುಲ್ಕರಹಿತ ದೂರವಾಣಿ ಸಹಾಯವಾಣಿ ಆರಂಭಿಸಿದೆ. ಸದ್ಯ ಬೆಂಗಳೂರಿನಲ್ಲಿ ಈ ಸಹಾಯವಾಣಿ ಕಾರ್ಯಾಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇತರ ಪ್ರಮುಖ ನಗರಗಳಿಗೂ ವಿಸ್ತರಿಸಲು ಚಿಂತಿಸಲಾಗಿದೆ ಎಂದು ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಟಾರ್ ತಿಳಿಸಿದ್ದಾರೆ.
ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಯಾರೇ ಆಗಿದ್ದರೂ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿದರೆ ಊಟ ಪೂರೈಸಲಾಗುವುದು. ಸಹಾಯವಾಣಿಗೆ ಕರೆ ಮಾಡಿದರೆ ಒಂದಿಷ್ಟು ಮಾಹಿತಿ ಸಂಗ್ರಹಿಸಿ ಅವರು ಇದ್ದಲ್ಲೇ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಒಂದೊಮ್ಮೆ ಅವರಿಗೆ ಆಶ್ರಯವಿಲ್ಲದಿದ್ದರೆ ಸಮೀಪದ ಕಲ್ಯಾಣ ಮಂಟಪ, ಛತ್ರದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲು ಸಹಾಯವಾಣಿ ನೆರವಾಗಲಿದೆ ಎಂದು ಹೇಳಿದರು. ಸದ್ಯ ಬೆಂಗಳೂರಿನಲ್ಲಿ 80,000 ಮಂದಿಗೆ ಊಟ ಸಿದ್ಧಪಡಿಸಿ ವಿತರಿಸಲಾಗುತ್ತಿದೆ. ಸದ್ಯದಲ್ಲೇ ಮೂರು ವಾರ ಬಳಸಬಹುದಾದಷ್ಟು ದಿನಸಿ ಪೊಟ್ಟಣಗಳನ್ನು ಸಿದ್ಧಪಡಿಸಿ 85,000 ಮಂದಿಗೆ ವಿತರಿಸಲು ಕ್ರಮ ಕೈಗೊಳ್ಳ ಲಾಗುವುದು. ಕಾರ್ಮಿಕ ಕಲ್ಯಾಣ ನಿಧಿಯಿಂದ 156.5 ಕೋ. ರೂ. ಅನುದಾನ ಬಿಡುಗಡೆ ಮಾಡಿ ತಲಾ 1,000 ರೂ.ಗಳಂತೆ 15.65 ಲಕ್ಷ ಕಾರ್ಮಿಕರ ಬ್ಯಾಂಕ್ ಖಾತೆಗೆ ಹಣವನ್ನು ನೇರವಾಗಿ ಪಾವತಿಸಲಾಗಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.