Siddapura ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ
Team Udayavani, Mar 21, 2024, 12:45 AM IST
ಸಿದ್ದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್. (52) ಅವರು ಮಾ.20ರ ಅಪರಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಶಾ ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಅಡಿಟ್ ಕೂಡ ನಡೆಯುತ್ತಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಪ್ರಭಾರ ಸಿಇಒ ಮಹೇಶ್ ರಾವ್ ಅವರು ಹೇಳುವ ಪ್ರಕಾರ, ಆಶಾ ಅವರು ತಮ್ಮ ಚಿನ್ನವನ್ನು ಪತಿಯ ಹೆಸರಿನಲ್ಲಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿದ್ದರು. ಚಿನ್ನವನ್ನು ಲಾಕರ್‌ನಲ್ಲಿ ಇಡುವ ಜವಾಬ್ದಾರಿಯನ್ನು ಅವರೇ ನಿಭಾಯಿಸುತ್ತಿದ್ದರು. ಬುಧವಾರ ಅಡಿಟ್ ನಡೆಯುವಾಗ ಅವರು ಅಡವಿಟ್ಟ ಚಿನ್ನ ಲಾಕರ್‌ನಲ್ಲಿ ಇಲ್ಲದಿರುವುದನ್ನು ಆಶಾ ಅವರಲ್ಲಿ ವಿಚಾರಿಸಲಾಗಿದೆ. ಚಿನ್ನ ಇಲ್ಲದಿರುವ ವಿಚಾರ ಹೊರಗಡೆಗೆ ಬಂದು ಅವಮಾನವಾಗುತ್ತದೆ ಎಂದು ಹೆದರಿ, ಕಚೇರಿಯಲ್ಲಿ ಯಾರಿಗೂ ಹೇಳದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದಿದ್ದಾರೆ.
ಆಶಾ ಅವರು ಕಚೇರಿಯಲ್ಲಿ ಇಲ್ಲದಿರುವುದು ಗೊತ್ತಾದ ಬಳಿಕ ಹುಡುಕಾಟ ನಡೆಸಲಾಗಿತ್ತು. ಕೊನೆಯಲ್ಲಿ ಸಿಸಿ ಕೆಮರಾ ನೋಡಿದಾಗ, ಮನೆಯ ಕಡೆಗೆ ಸ್ಕೂಟಿ ತೆಗೆದುಕೊಂಡು ಹೋಗುತ್ತಿರುವುದು ಗೊತ್ತಾಗಿದೆ. ಕೂಡಲೇ ಮಹೇಶ್ ಹಾಗೂ ಸಿಬಂದಿ ಮಂಜುನಾಥ ಅವರು ಆಶಾ ಅವರ ಮನೆಗೆ ಬಂದು ನೋಡಿದಾಗ ಅವರು ನೇಣುಬಿಗಿದುಕೊಂಡಿದ್ದರು. ಆಶಾ ಅವರ ತಾಯಿ ಬೊಬ್ಬೆ ಹಾಕಿದಾಗ ಸ್ಥಳೀಯರು ಬಂದು ಬಾಗಿಲು ಒಡೆದು ನೇಣಿನಿಂದ ಆಶಾ ಅವರನ್ನು ಕೆಳಗೆ ಇಳಿಸಿ, ಕೂಡಲೇ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದರು.
ಸಾರೀ ಮಗಳೆ ಎಂದು ಮೆಸೇಜ್ ಆಶಾ ಅವರಿಗೆ ಇಬ್ಬರು ಮಕ್ಕಳು. ಪುತ್ರ ಮದುವೆಯಾಗಿ ಯುಎಸ್‌ಎಯಲ್ಲಿ ಉದ್ಯೋಗದಲ್ಲಿದ್ದಾರೆ. ಪುತ್ರಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಯ ಕೆಲವು ಕ್ಷಣಗಳ ಮೊದಲು ಮಗಳಿಗೆ ಸಾರೀ ಮಗಳೆ ಎಂದು ಮೆಸೇಜ್ ಮಾಡಿದ್ದರು ಎಂದು ತಿಳಿದುಬಂದಿದೆ. ಮನೆಗೆ ಬಂದಿದ್ದ ಆಶಾ ಮೊದಲು ತಾಯಿಯ ಹತ್ತಿರ ನೀನು ಊಟ ಮಾಡು. ನನಗೆ ಸೊಸೈಟಿಯ ಕೆಲಸ ಇದೆ. ನಾನು ಮಹಡಿಯ ಮೇಲಿನ ರೂಂನಲ್ಲಿ ಇರುತ್ತೇನೆ. ನನ್ನನ್ನು ಕರೆಯಬೇಡ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.