ಆರೋಗ್ಯಾಧಾರ ಸ್ತಂಭ: ಕೋವಿಡ್ ಕಲಿಸಿದ ಪಾಠ

Team Udayavani, Feb 1, 2021, 11:07 PM IST

ಆರೋಗ್ಯಾಧಾರ ಸ್ತಂಭ: ಕೋವಿಡ್ ಕಲಿಸಿದ ಪಾಠ

ಕೊರೊನಾ ಸಾಂಕ್ರಾಮಿಕದಿಂದ ವಿವಿಧ ದೇಶಗಳು, ಅಲ್ಲಿನ ಸರ್ಕಾರಗಳು ಅನೇಕ ಪಾಠಗಳನ್ನು ಕಲಿತಿವೆ. ಅದರಲ್ಲೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಎಂಬ ದೊಡ್ಡಪಾಠವನ್ನು ಕಲಿತಿವೆ. ಅದಕ್ಕೆ ಸ್ಪಷ್ಟ ಉದಾಹರಣೆ ಈ ಬಾರಿಯ ಕೇಂದ್ರ ಬಜೆಟ್‌. ಬಜೆಟ್‌ನ ಆಧಾರ ಸ್ತಂಭ ಆರೋಗ್ಯ ಕ್ಷೇತ್ರವಾಗಿದ್ದು, ಇದಕ್ಕಾಗಿ ಹಿಂದಿನ ಬಜೆಟ್‌ಗಳಿಗಿಂತಲೂ ಶೇ. 137 ರಷ್ಟು ಹೆಚ್ಚು ಅನುದಾನ ನೀಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಕಾಣಿ ಸಿ ಕೊಂಡ ನಂತರ ಬಂದಿರುವ ಕೇಂದ್ರ ಸರ್ಕಾರದ ಮೊದಲ ಬಜೆಟ್‌ ಇದಾಗಿದ್ದು, ದೇಶದ ಆರ್ಥಿಕ ಅಭಿವೃದ್ಧಿಯ ಜತೆಗೆ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ಹೊಣೆಗಾರಿಕೆ ಹೆಚ್ಚಿತ್ತು. ಅಲ್ಲದೆ, ಇತರೆ ಕ್ಷೇತ್ರಗಳಿಗಿಂತಲೂ ಆರೋಗ್ಯ ವಲಯಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ ಎಂಬ ನಿರೀಕ್ಷೆಯೂ ಇತ್ತು. ಅಂತೆಯೇ ಬಜೆಟ್‌ ನಮ್ಮ ನಿರೀಕ್ಷೆಯನ್ನು ನಿಜವಾಗಿಸಿದೆ.

ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ವಲಯವೇ ಆಧಾರ ಸ್ತಂಭವಾಗಿದೆ. ಕಳೆದ ಹಣ ಕಾಸು ವರ್ಷಕ್ಕೆ ಹೋಲಿಸಿದರೆ ಶೇ. 137 ರಷ್ಟು ಹೆಚ್ಚು ಅಂದರೆ ಬರೋಬ್ಬರಿ 2.2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿಯೂ ಅಗತ್ಯವಿದ್ದರೆ ಆರೋಗ್ಯ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚು ಅನುದಾನ ನೀಡಲು ಬದ್ಧವಾಗಿದೆ ಎಂಬ ಸ್ಪಷ್ಟ ಸಂದೇಶವನ್ನೂ ನೀಡಲಾಗಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಎದುರಾದ ಹಾಸಿಗೆ ಸಮಸ್ಯೆಗಳಿದ ಪಾಠ ಕಲಿತು, ಆಸ್ಪತ್ರೆಗಳಲ್ಲಿ ತುರ್ತು ನಿಗಾ ಹಾಸಿಗೆ (ಐಸಿಯು ಬೆಡ್‌) ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಕೇಂದ್ರ ಬಜೆಟ್ : ಚಿನ್ನ, ಬೆಳ್ಳಿ ಸುಂಕ ಇಳಿಕೆ ; ಎನ್ಆರ್‌ಐಗಳಿಗೆ ಅನುಕೂಲ

ಕೊರೊನಾ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಲಸಿಕೆ ಪ್ರಮುಖ ಪಾತ್ರವಹಿಸುತ್ತದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೊರೊನಾ ಲಸಿಕೆ ಉತ್ಪಾದನೆ, ಪೂರೈಕೆ, ವಿತರಣೆಯು ಪ್ರಮುಖವಾಗಿರಲಿದ್ದು, ಅದಕ್ಕಾಗಿ 30 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಇದರಲ್ಲಿ ಆದ್ಯತಾ ವಲಯ ಮತ್ತು ಬಡ ಜನತೆಗೆ ಲಸಿಕೆ ಉಚಿತ ವಿತರಣೆಯಾದರೆ ಅನುಕೂಲವಾಗುತ್ತದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಕೊರೊನಾ ಪರಿಸ್ಥಿತಿ ನೋಡಿಕೊಂಡು ಇನ್ನಷ್ಟು ಅನುದಾನ ನೀಡುವ ಭರವಸೆಯನ್ನು ವಿತ್ತ ಸಚಿವರು ನೀಡಿರುವುದು ಪ್ರಮುಖ ನಡೆಯಾಗಿದೆ.

ರೋಗ ಬಂದ ನಂತರ ಚಿಕಿತ್ಸೆ ನೀಡುವುದಕ್ಕಿಂತ, ರೋಗವೇ ಹರಡದಂತೆ ವಾತಾವರಣ ನಿರ್ಮಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಜನರಿಗೆ ಶುದ್ಧ ಗಾಳಿ, ಶುದ್ಧ ನೀರು, ಉತ್ತಮ ಪರಿಸರ ಕಲ್ಪಿಸಿಕೊಡುವುದಕ್ಕೆ, ಸ್ವಾಸ್ಥ್ಯ ಕೇಂದ್ರಗಳ ಉನ್ನತೀಕರಣಕ್ಕೆ ಹೆಚ್ಚು ಅನುದಾನ ನೀಡಿರುವುದು ಸ್ವಾಗತಾರ್ಹ. ಇನ್ನು ಮೀಸಲಿಟ್ಟ ಅನುದಾನ ಸದ್ಬಳಕೆ ಮುಖ್ಯವಾಗಿದ್ದು, ಯೋಜನೆಗಳ ಅನುಷ್ಠಾನ ಪರಿಣಾಮಕಾರಿ ಮತ್ತು ವೇಗವಾಗಿರಬೇಕಿದೆ. ಒಟ್ಟಾರೆ ಬಜೆಟ್‌ಗೆ 10ಕ್ಕೆ 8 ಅಂಕಗಳನ್ನು ನೀಡಬಹುದು.

ಟಾಪ್ ನ್ಯೂಸ್

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.