Kerala High Court ಆದೇಶಕ್ಕೆ ಸಚಿವ ತಂಗಡಗಿ ಸಂತಸ
Team Udayavani, Aug 25, 2023, 11:03 PM IST
ಬೆಂಗಳೂರು: ಕಾಸರಗೋಡಿನ ಅಡೂರು ಕನ್ನಡ ಶಾಲೆಗೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನೇ ನೇಮಿಸುವಂತೆ ಕೇರಳ ಹೈಕೋರ್ಟ್ ಅಲ್ಲಿನ ಸರಕಾರಕ್ಕೆ ಆದೇಶ ನೀಡಿರುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲಿನ ಜನಸಾಮಾನ್ಯರ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದ್ದಾರೆ.
ಅಡೂರು ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕದಿಂದಾಗಿ ಕಳೆದ ವರ್ಷ ಉದುಮ ಮತ್ತು ಹೊಸಕೋಟೆ ಸರಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೂ ಮಲಯಾಳ ಮಾತ್ರ ತಿಳಿದಿರುವ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಿತ ಗಡಿನಾಡಿನ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಿ, ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿರುವುದು ಗಡಿನಾಡ ಕನ್ನಡಿಗರ ಹೋರಾಟಕ್ಕೆ ಸಂದ ಜಯವಾಗಿದೆ ಎಂದಿದ್ದಾರೆ.
ಈ ಮಧ್ಯೆ ಕನ್ನಡ ಸಾಹಿತ್ಯ ಪರಿಷತ್ತು ಕೂಡ ಕೇರಳ ಹೈಕೋರ್ಟಿನ ಆದೇಶವನ್ನು ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಷಿ, ಅಡೂರು ಸರಕಾರಿ ಪ್ರೌಢಶಾಲೆ ಕನ್ನಡ ವಿಭಾಗಕ್ಕೆ ಮಲಯಾಳ ಶಿಕ್ಷಕಿ ನೇಮಕ ವಿವಾದಕ್ಕೆ ಕೇರಳ ಹೈಕೋರ್ಟ್ ಅಂತ್ಯ ಹಾಡಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.