ನಮ್ಮನ್ನು ಕಡೆಗಣಿಸಿದ್ದರಿಂದಲೇ ಪರಿಷತ್ ಚುನಾವಣೆಯಲ್ಲಿ ಹಿನ್ನಡೆ ಆಯ್ತು; ಯತ್ನಾಳ್ ಕಿಡಿ
Team Udayavani, Dec 15, 2021, 11:00 PM IST
ಬೆಳಗಾವಿ: ನಮ್ಮನ್ನು ಕಡೆಗಣಿಸಿದ್ದರಿಂದಲೇ ವಿಜಯಪುರ ಕ್ಷೇತ್ರದಲ್ಲಿ ಎರಡನೇ ಪ್ರಾಶಸ್ತ್ಯ ಮತದಲ್ಲಿ ಬಿಜೆಪಿ ಗೆಲ್ಲುವಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಂದಗಿಯಲ್ಲಿ ಜವಾಬ್ದಾರಿ ಕೊಟ್ಟಿದ್ರು. 34 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದೆವು. ಈಚುನಾವಣೆ ಪ್ರಚಾರಕ್ಕೆ ಕರೆಯಲಿಲ್ಲ. ಬಿಜೆಪಿಗೆ ಮತ ಹಾಕಿ ಎಂದು ಮನೆಯಲ್ಲಿ ಕುಳಿತೆ ಎಂದು ತಿಳಿಸಿದರು.
ಯಡಿಯೂರಪ್ಪ ನವರು ಯಾವುದೋ ಯಾತ್ರೆ ತೆಗೆದುಕೊಂಡು ಬಂದಿದ್ದರು. ಆಗಲೂ ಕರೆಯಲಿಲ್ಲ ಎಂದು ಹೇಳಿದರು.
ಪರಿಷತ್ ಚುನಾವಣೆಯಲ್ಲಿ ಎಲ್ಲೆಲ್ಲಿ ಸೋಲಾಗಿದೆ, ಯಾಕಾಗಿದೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯಾಧ್ಯಕ್ಷರು ಎಲ್ಲ ನಾಯಕರನ್ನ ಕರೆದು ಚರ್ಚಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ:ನಿಮ್ಮಲ್ಲಿ ಐಫೋನ್,ಮ್ಯಾಕ್‌ಬುಕ್,ಆ್ಯಪಲ್ ವಾಚ್‌ಗಳಿದ್ದರೆ ಬೇಗನೆ ಅಪ್‌ಡೇಟ್ ಮಾಡಿಕೊಳ್ಳಿ
ಮುಖ್ಯಮಂತ್ರಿಯವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲ ನವಗ್ರಹಗಳು ಇರುತ್ತವೆ. ಅದಕ್ಕೆ ಶಾಂತಿ ಮಾಡಬೇಕಾಗುತ್ತದೆ. ರಾಹು-ಕೇತು ಎರಡು ದೊಡ್ಡ ಗ್ರಹಗಳು. ಈಗ್ರಹಗಳಿಂದ ಭವಿಷ್ಯದಲ್ಲಿ ಸಮಸ್ಯೆ ಆಗಬಾರದು. ಇದಕ್ಕಾಗಿ ಶಾಂತಿ ಮಾಡಬೇಕಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.