ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರ ರಜೆ ಶಿಫಾರಸು ಮುಂದಕ್ಕೆ
Team Udayavani, May 29, 2019, 6:00 AM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡುವುದರ ಜತೆಗೆ ಆಯ್ದ ಮಹನೀಯರ ಜಯಂತಿ ಹಾಗೂ ಧಾರ್ಮಿಕ ಹಬ್ಬಕ್ಕೆ ನೀಡುವ ರಜೆಯನ್ನು ರದ್ದುಪಡಿಸುವ ಕುರಿತು ಸಚಿವ ಸಂಪುಟ ಉಪ ಸಮಿತಿ ಶಿಫಾರಸು ಮಾಡಿದೆ.
ಈ ಶಿಫಾರಸು ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ವಿಷಯ ಪಟ್ಟಿಯಲ್ಲಿತ್ತಾದರೂ ಸಂಪುಟ ಸಭೆಯಲ್ಲಿ ಆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಕುರಿತಂತೆ ಆಯಾ ಸಮುದಾಯದ ಪ್ರಮುಖರು, ಸಂಘಟನೆಗಳು, ಆಡಳಿತ ವಲಯದ ತಜ್ಞರ ಜತೆ ಚರ್ಚಿಸಿ ಅಗತ್ಯ ಮಾರ್ಪಾಡಿನೊಂದಿಗೆ ಶಿಫಾರಸ್ಸನ್ನು ಮರು ಮಂಡಿಸುವಂತೆ ಸಚಿವ ಸಂಪುಟ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. ರಾಜ್ಯದ 6ನೇ ವೇತನ ಆಯೋಗದ ವರದಿಯಲ್ಲಿ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಬೇಕು ಎಂಬ ಅಂಶವನ್ನು ಪರಾಮರ್ಶಿಸಿ ಸಂಪುಟ ಉಪ ಸಮಿತಿ ಸರ್ಕಾರದ ಸೂಚನೆಯಂತೆ ಸಚಿವ ಸಂಪುಟ ಸಭೆಗೆ ಶಿಫಾರಸು ಮಂಡಿಸಿತ್ತು.
ಇದರಲ್ಲಿ ಪ್ರಮುಖವಾಗಿ ಸರ್ಕಾರಿ ನೌಕರರಿಗೆ ಸದ್ಯ ಜಾರಿಯಲ್ಲಿರುವ 15 ಸಾಂದರ್ಭಿಕ ರಜೆಯನ್ನು 12ಕ್ಕೆ ಕಡಿತಗೊಳಿಸುವುದು. ಮಹಾವೀರ ಜಯಂತಿ, ಬಸವ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ, ಕನಕದಾಸ ಜಯಂತಿ ಹಾಗೂ ಕಾರ್ಮಿಕರ ದಿನಾಚರಣೆಯಂದು ನೀಡಲಾಗಿರುವ ಸಾರ್ವತ್ರಿಕ ರಜೆಯನ್ನು ರದ್ದುಪಡಿಸುವುದು. ಹಾಗೆಯೇ ಗುಡ್ ಫ್ರೈಡೆ, ಮಹಾಲಯ ಅಮಾವಾಸ್ಯೆ, ಈದ್- ಮಿಲಾದ್ ಹಬ್ಬದ ದಿನದಂದು ನೀಡಲಾಗಿರುವ ರಜೆಯನ್ನು ಕೆಲಸದ ದಿನವನ್ನಾಗಿ ಪರಿವರ್ತಿಸುವುದು. ಈ ಜಯಂತಿ ಹಾಗೂ ಧಾರ್ಮಿಕ ಹಬ್ಬಗಳನ್ನು ನಿರ್ಬಂಧಿತ ರಜೆ ಎಂದು ಘೋಷಿಸುವುದು ಹಾಗೂ ಈ ಮಹಾನುಭಾವರ ಜಯಂತಿ ಆಚರಣೆಯನ್ನು ಯಥಾವತ್ತಾಗಿ ಮುಂದುವರಿಸುವ ಶಿಫಾರಸುಗಳಿದ್ದವು.
ಹಾಗೆಯೇ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೀಡುವ ಎರಡು ರಜೆಯನ್ನು ಹಬ್ಬದ 1ನೇ ಮತ್ತು 3ನೇ ದಿನದ ಬದಲಿಗೆ 1ನೇ ಮತ್ತು 2ನೇ ದಿನ ನೀಡುವ ಶಿಫಾರಸು ಕೂಡ ಇತ್ತು. ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ಉಪಸಮಿತಿ ತನ್ನ ಶಿಫಾರಸುಗಳನ್ನು ಸರ್ಕಾರದ ಒಪ್ಪಿಗೆಗೆಂದು ಸೋಮವಾರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿತ್ತು. ಆದರೆ, ಇದಕ್ಕೆ ಸಂಪುಟ ಒಪ್ಪಿಗೆ ನೀಡಿಲ್ಲ. ನಾನಾ ಸಮುದಾಯ, ಕಾರ್ಯಾಂಗದ ತಜ್ಞರೊಂದಿಗೆ ಚರ್ಚಿಸಿ ಸಲಹೆ ಪಡೆದು ಹೊಸ ಶಿಫಾರಸುಗಳನ್ನು ಮಾಡುವಂತೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.