ಕೋವಿಡ್ : ಗುಣಮುಖ ಪ್ರಮಾಣ ಮೂರು ಪಟ್ಟು ಅಧಿಕ
Team Udayavani, Aug 25, 2020, 1:11 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸೋಮವಾರ 23 ಲಕ್ಷದ ಗಡಿ ದಾಟಿದೆ. ಜತೆಗೆ, ಸಕ್ರಿಯ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ 3 ಪಟ್ಟು ಹೆಚ್ಚಾಗಿದೆ ಎಂಬ ಸಮಾಧಾನದ ಸುದ್ದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ನೀಡಿದೆ.
ರವಿವಾರದಿಂದ ಸೋಮವಾರಕ್ಕೆ 24 ಗಂಟೆಗಳ ಅವಧಿಯಲ್ಲಿ 57,469 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿ ದ್ದಾರೆ. ಈ ಮೂಲಕ ಗುಣಮುಖ ಪ್ರಮಾಣ ಶೇ.75.27ಕ್ಕೇರಿದೆ. ಈವರೆಗೆ ವಾಸಿಯಾದವರ ಸಂಖ್ಯೆ 23.38 ಲಕ್ಷದ ಆಸುಪಾಸಿನಲ್ಲಿದ್ದರೆ, ಸಕ್ರಿಯ ಸೋಂಕಿತರ ಸಂಖ್ಯೆ 7.10 ಲಕ್ಷದ ಆಸುಪಾಸಿನಲ್ಲಿದೆ. ಅಲ್ಲದೆ, ದೇಶದಲ್ಲಿ ಕೊರೊನಾ ದಿಂದ ಮೃತಪಟ್ಟವರ ಪ್ರಮಾಣ ಶೇ.1.85ಕ್ಕಿಳಿದಿದೆ ಎಂದು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರೀಕ್ಷಾ ಪ್ರಮಾಣ ಹೆಚ್ಚಳ, ಸೋಂಕಿತರ ಸಮಗ್ರ ಟ್ರ್ಯಾಕಿಂಗ್ ಮತ್ತು ಸೂಕ್ತ ಚಿಕಿತ್ಸೆ ಮುಂತಾದ ಕ್ರಮಗಳಿಂದಾಗಿ ಇದು ಸಾಧ್ಯವಾ ಯಿತು ಎಂದಿದ್ದಾರೆ ಅಧಿಕಾರಿಗಳು.
ಈವರೆಗೆ 3.6 ಕೋಟಿ ಪರೀಕ್ಷೆ:
ರವಿವಾರ ಒಂದೇ ದಿನ 6.09 ಲಕ್ಷ ಸ್ಯಾಂಪಲ್‌ಗಳ ಪರೀಕ್ಷೆ ನಡೆದಿದ್ದು, ಈವರೆಗೆ ದೇಶಾದ್ಯಂತ 3.59 ಕೋಟಿ ಸ್ಯಾಂಪಲ್‌ಗಳ ಪರೀಕ್ಷೆ ಪೂರ್ಣಗೊಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಈ ಮೂಲಕ ಪ್ರತಿ 10 ಲಕ್ಷ ಜನಸಂಖ್ಯೆಗೆ ಪರೀಕ್ಷಾ ಪ್ರಮಾಣ 26,016ಕ್ಕೆ ಏರಿದಂತಾಗಿದೆ.
ಒಂದೇ ದಿನ 61,408 ಮಂದಿಗೆ ಸೋಂಕು
ರವಿವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ ದೇಶದಲ್ಲಿ 61,408 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಅವಧಿಯಲ್ಲಿ 836 ಸೋಂಕಿತರು ಮೃತಪಟ್ಟಿದ್ದಾರೆ ಎಂದೂ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೃತ 836 ಮಂದಿಯ ಪೈಕಿ ಅತಿ ಹೆಚ್ಚು ಅಂದರೆ 258 ಮಂದಿ ಮಹಾರಾಷ್ಟ್ರದ ವರಾದರೆ, 97 ಮಂದಿ ತಮಿಳುನಾಡು,
93 ಆಂಧ್ರ, 68 ಮಂದಿ ಕರ್ನಾಟಕದವರು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.