Congress: ಕಾಂಗ್ರೆಸ್‌ನ ದಿಲ್ಲಿ ಸಭೆಯಲ್ಲಿ ನಾಯಕರ ಒಗ್ಗಟ್ಟಿನ ಸಂಕಲ್ಪ
20 ಸ್ಥಾನ ಗೆಲ್ಲುವುದೇ ಗುರಿ- ಲೋಕ ಚುನಾವಣೆಗೆ ವರಿಷ್ಠರ ಟಾರ್ಗೆಟ್- ಸಚಿವರ ಕಾರ್ಯವೈಖರಿಗೆ ಅಸಮಾಧಾನ
Team Udayavani, Aug 3, 2023, 12:25 AM IST
ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಜಾರಿಗೊಳಿಸಿ ರುವ 5 ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖ ಅಸ್ತ್ರ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ.
ಹೊಸದಿಲ್ಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೇಲ್ಮನೆಯ ಮಾಜಿ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಹಿತ ರಾಜ್ಯದ ಆಯ್ದ 37 ಮಂದಿ ಹಿರಿಯ ನಾಯಕರೊಂದಿಗೆ ನಡೆಸಿದ ಮಹತ್ವದ ಸಭೆಯಲ್ಲಿ 20 ಲೋಕ ಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ನೀಡಲಾಗಿದೆ.
ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಜತೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷದ ಕಾರ್ಯ ಕರ್ತರು ಮನೆಮನೆಗೂ ತೆರಳಿ ಮನವರಿಕೆ ಮಾಡಿಕೊಟ್ಟು, ಲೋಕ ಸಭಾ ಚುನಾವಣೆ ಗೆಲ್ಲುವುದಕ್ಕೆ ಭೂಮಿಕೆ ಸಿದ್ಧಪಡಿಸಬೇಕು. ಪಕ್ಷದ ವರ್ಚಸ್ಸಿಗೆ ಧಕ್ಕೆ ತರದಂತೆ ನಡೆದುಕೊಳ್ಳುವುದರ ಜತೆಗೆ ಕರ್ನಾಟಕ ಸರಕಾರದ ಆಡಳಿತವು ಇತರ ರಾಜ್ಯ
ಗಳಿಗೆ ಮಾದರಿ ಆಗಬೇಕು. ಯಾವುದೇ ಕಾರಣಕ್ಕೂ ಭ್ರಷ್ಟಾ ಚಾರ ಸಹಿಸುವುದಿಲ್ಲ ಎಂಬ ಎಚ್ಚರಿಕೆ ಯನ್ನೂ ನೀಡಲಾಗಿದೆ.
ಸಲಹೆಗಳ ಸ್ವೀಕಾರ
ಲೋಕಸಭಾ ಚುನಾವಣೆಯ ತಯಾರಿ ಹಿನ್ನೆಲೆಯಲ್ಲಿ ಕರೆದಿದ್ದ ಸಭೆಯಲ್ಲಿ ಆಹ್ವಾನಿತರೆಲ್ಲರಿಗೂ ಆರಂಭದಲ್ಲಿ ಮಾತನಾಡಲು ಅವಕಾಶ ನೀಡಿ, ಸಲಹೆಗಳನ್ನು ಕೇಳಲಾಯಿತು.
ಸಚಿವರ ಕಾರ್ಯಶೈಲಿ ಬದಲಾಗಬೇಕು
ಬೆಂಗಳೂರು: ರಾಜ್ಯ ಸರಕಾರದ ಒಟ್ಟಾರೆ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ವರಿಷ್ಠರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಆರೋಪ ಗಳ ಹಿನ್ನೆಲೆಯಲ್ಲಿ ಸಚಿವರು ಕಾರ್ಯ ಶೈಲಿ ಬದಲಾಯಿಸಿಕೊಳ್ಳಬೇಕೆಂಬ ಸ್ಪಷ್ಟ ಸಂದೇಶ ವನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ನೀಡಲಾಗಿದೆ.
ಭ್ರಷ್ಟಾಚಾರ ಆರೋಪ ಬಂದಿರುವ ಸಚಿವರು ಕೂಡಲೇ ತಮ್ಮ ನಡೆಯನ್ನು ಬದಲಿಸಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನದಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ರಾಹುಲ್ ಗಾಂಧಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. “ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ಮೈಮರೆಯಬೇಡಿ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಶಾಸಕರ ವಿಶ್ವಾಸ ಗಳಿಸುವುದು ಮುಖ್ಯ’ ಎಂದು ಕಿವಿ ಮಾತು ಹೇಳಿದ್ದಾರೆನ್ನಲಾಗಿದೆ.
ಭ್ರಷ್ಟಾಚಾರವಿಲ್ಲ; ಸಿಎಂ
ಸರಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಬಿಜೆಪಿ-ಜೆಡಿಎಸ್‌ನವರು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಹುಲ್ ಎಚ್ಚರಿಕೆ
ಸಚಿವರು ಎರಡು ತಿಂಗಳಲ್ಲಿ ಮಾಡಿರುವ ಕೆಲಸದ ರಿಪೋರ್ಟ್ ಕಾರ್ಡ್ ಪಡೆದ ರಾಹುಲ್ ಗಾಂಧಿ, ಬಳಿಕ ಭ್ರಷ್ಟಾಚಾರ ಆರೋಪವನ್ನು ಪ್ರಸ್ತಾವಿಸಿದರು. ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಕುಮಾರಸ್ವಾಮಿ ಅವರ ಪೆನ್‌ಡ್ರೈವ್ ಪ್ರಕರಣದ ಉದಾಹರಣೆ ನೀಡಿ ಕೆಲವು ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಕ್ಕೆ ಬಂದು 2 ತಿಂಗಳು ಕಳೆಯುವ ಮೊದಲೇ ಇಂಥ ಆರೋಪಗಳು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತದೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಐದು ಗ್ಯಾರಂಟಿಗಳ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದೆ. ನಾವು 20ರಿಂದ 24 ಕ್ಷೇತ್ರಗಳಲ್ಲಿ ಜಯ ಗಳಿಸುವ ವಿಶ್ವಾಸವಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ರಾಜ್ಯದಲ್ಲಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಕರ್ನಾಟಕ ಮಾದರಿ ಮಾಡಿದ್ದೇವೆ. ಅದೇ ರೀತಿ ಮುಂದೆಯೂ ಹೋಗುತ್ತೇವೆ. ನುಡಿದಂತೆ ನಡೆದಿದ್ದೇವೆ. ಆದ್ದರಿಂದ ನಾವು ಕರ್ನಾಟಕದಿಂದ 20 ಸ್ಥಾನಗಳನ್ನು ಗೆದ್ದು “ಇಂಡಿಯಾ’ ಗೆ ಕೊಡುವ ವಿಶ್ವಾಸ ಹೊಂದಿದ್ದೇವೆ.
-ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ
ನಾವು ಬಿಜೆಪಿ ಸರಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ಹೀಗಾಗಿ ನಮ್ಮ ಸರಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬರದಂತೆ ನೋಡಿಕೊಳ್ಳಿ. ಇಲ್ಲದಿದ್ದರೆ ನಮಗೂ-ಅವರಿಗೂ ಏನು ವ್ಯತ್ಯಾಸ? ಸರಕಾರದ ಕಾರ್ಯಕ್ರಮಗಳನ್ನು ಪಕ್ಷದ ಕಾರ್ಯಕ್ರಮಗಳಂತೆ ಬಿಂಬಿಸಬೇಕು, ಕೆಪಿಸಿಸಿ ಪದಾಧಿಕಾರಿಗಳಾಗಿದ್ದವರು ಈಗ ಶಾಸಕರಾಗಿದ್ದರೆ ಅಂಥವರು ಪದಾಧಿಕಾರಿ ಹುದ್ದೆಗಳನ್ನು ತ್ಯಜಿಸಬೇಕು. ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡಲು ಬಯಸುವ ಆಸಕ್ತರಿಗೆ ಜವಾಬ್ದಾರಿ ನೀಡಿ ಎಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.