ಫಲಿತಾಂಶಕ್ಕೆ ವಿದ್ಯಾರ್ಥಿಗಳ ಪರಿಶ್ರಮವೂ ಕಾರಣ
Team Udayavani, May 3, 2019, 6:13 AM IST
ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹಾಸನ ಹಾಗೂ ರಾಮನಗರ ಜಿಲ್ಲೆಗಳು ರಾಜ್ಯದಲ್ಲೇ ಮೊದಲ ಎರಡು ಸ್ಥಾನ ಪಡೆಯಲು ಶಿಕ್ಷಣ ಇಲಾಖೆಯ ಸುಧಾರಣಾ ಕ್ರಮಗಳೊಂದಿಗೆ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರು, ಪೋಷಕರ ಮಾರ್ಗದರ್ಶನವೂ ಕಾರಣ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಹಾಸನ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇನೆ. ಶಿಕ್ಷಣ ಇಲಾಖೆಯ ಪರಿಹಾರ ಬೋಧನೆಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು ಉತ್ತಮ ಫಲಿತಾಂಶ ಬರಲು ಕಾರಣ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ 7 ನೇ ಸ್ಥಾನಕ್ಕೆ ಕುಸಿದಿದೆ ಎಂದು ವಿಷಾದಿಸಬೇಕಾಗಿಲ್ಲ. ಏಕೆಂದರೆ, ಕಳೆದ ವರ್ಷಕ್ಕಿಂತ ಉತ್ತಮ ಫಲಿತಾಂಶ ಇಲ್ಲಿ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಹುತೇಕ ಜಿಲ್ಲೆಗಳ ಶೇಕಡಾವಾರು ಫಲಿತಾಂಶದಲ್ಲಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳು ಇನ್ನಷ್ಟು ಉತ್ತಮ ಸಾಧನೆ ತೋರುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಕಲಿಕೆಯ ಗುಣಮಟ್ಟ ಸುಧಾರಣೆಗೂ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಕರು ಆದ್ಯತೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.