ಸಂಪುಟ ವಿಸ್ತರಣೆಗೆ ಮತ್ತೆ ಬಂಡಾಯದ ಭೀತಿ
Team Udayavani, Jun 9, 2019, 3:09 AM IST
ಬೆಂಗಳೂರು: “ಆಪರೇಷನ್ ಕಮಲ’ದ ಭೀತಿಯ ನಡುವೆಯೂ ರಾಜ್ಯದ ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆ ಸಾಹಸಕ್ಕೆ ಕೈ ಹಾಕಿದ್ದು, ರಾಜ್ಯ ನಾಯಕರ ಈ ನಡೆಯ ವಿರುದ್ಧ ಕಾಂಗ್ರೆಸ್‌ನಲ್ಲಿ ಮತ್ತೂಂದು ಸುತ್ತಿನ ಬಂಡಾಯದ ಕಹಳೆ ಮೊಳಗುವ ಲಕ್ಷಣಗಳು ಕಾಣಿಸುತ್ತಿವೆ.
ಅತೃಪ್ತರನ್ನು ಸಮಾಧಾನ ಪಡಿಸಲು ರಾಜ್ಯ ನಾಯಕರು ಸಂಪುಟ ಪುನಾರಚನೆಗೆ ಮಾಡಿದ ಪ್ರಯತ್ನಕ್ಕೆ ಸಚಿವರಿಂದ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪುನಾರಚನೆ ಬದಲು ವಿಸ್ತರಣೆಗೆ ನಿರ್ಧಾರ ಮಾಡಿದ್ದಾರೆ. ರಾಜ್ಯ ನಾಯಕರ ಈ ನಿರ್ಧಾರಕ್ಕೆ ಸಚಿವಾಕಾಂಕ್ಷಿಗಳು ಬಂಡಾಯದ ಮುನ್ಸೂಚನೆ ನೀಡಿದ್ದಾರೆ.
ಆದರೆ, ಬಂಡಾಯ ಶಾಸಕರಲ್ಲಿ ಯಾರಿಗಾದರೂ ಆದ್ಯತೆ ನೀಡಿದರೆ, ಬೇರೆಯವರಿಗೆ ಅದೇ ಪ್ರೇರಣೆಯಾಗುವ ಸಾಧ್ಯತೆಯಿದೆ ಎನ್ನುವ ಕಾರಣಕ್ಕಾಗಿಯೇ ರಾಜ್ಯ ನಾಯಕರು ಯಾವುದೇ ಬಂಡಾಯ ಶಾಸಕರಿಗೂ ಮಣೆ ಹಾಕದೆ ಸದ್ಯಕ್ಕೆ ಸರ್ಕಾರವನ್ನು ಭದ್ರಗೊಳಿಸಲು ಇಬ್ಬರು ಪಕ್ಷೇತರರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿಯ “ಆಪರೇಷನ್ ಕಮಲ’ಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.
ಜತೆಗೆ, ಅತೃಪ್ತರೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಂಖ್ಯಾಬಲದ ಕೊರತೆಯುಂಟಾಗದಂತೆ ನೋಡಿಕೊಳ್ಳಲು ಈ ತಂತ್ರ ಪ್ರಯೋಗಿಸಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ ಶಿಸ್ತು ತರುವ ನಿಟ್ಟಿನಲ್ಲಿ ರಾಜ್ಯ ನಾಯಕರು ಈ ನಿರ್ಧಾರ ಕೈಗೊಂಡಿದ್ದಾರೆ.
ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬ ಸಂದೇಶ ರವಾನೆ ಮಾಡಲು ಹಾಗೂ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎನ್ನುವುದನ್ನು ಅತೃಪ್ತರಿಗೆ ಮುಟ್ಟಿಸಲು ಪಕ್ಷದ ನಾಯಕರು ಈ ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಈಗಾಗಲೇ ಬಂಡಾಯದ ಬಾವುಟ ಹಾರಿಸಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತೆರೆಮರೆಯಲ್ಲಿ ಅತೃಪ್ತ ಶಾಸಕರನ್ನು ಒಂದುಗೂಡಿಸುವ ಪ್ರಯತ್ನ ಆರಂಭಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆರು ತಿಂಗಳ ಹಿಂದೆ ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತು ತಮ್ಮೊಂದಿಗೆ ಬಂಡಾಯದ ಬಾವುಟ ಹಾರಿಸಿದ್ದ ಶಾಸಕರಾದ ಪ್ರತಾಪ್‌ಗೌಡ ಪಾಟೀಲ್, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್, ಬಿ.ನಾಗೇಂದ್ರ, ಆನಂದ್ ಸಿಂಗ್, ಬಿ.ಸಿ. ಪಾಟೀಲ್, ಡಿ.ಎಸ್.ಹೂಲಗೇರಿ, ಭಿಮಾ ನಾಯ್ಕ ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆಸಿದ್ದಾರೆಂದು ತಿಳಿದು ಬಂದಿದೆ.
ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್ ಈಗಾಗಲೇ ಸಂಪುಟ ವಿಸ್ತರಣೆಯ ಕುರಿತು ಅಸಮಾಧಾನ ಹೊರ ಹಾಕಿದ್ದು, ಮೈತ್ರಿ ಸರ್ಕಾರದಲ್ಲಿ ಚೇಲಾಗಳಿಗೆ ಮಾತ್ರ ಅವಕಾಶ ದೊರೆಯುತ್ತದೆ. ಈ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದರೂ ಬೇಡ ಎನ್ನುವ ಮೂಲಕ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.
ಹಿರಿಯರು ಕಾದು ನೋಡುವ ತಂತ್ರ: ಪಕ್ಷದ ನಾಯಕರ ನಡೆಯ ಬಗ್ಗೆ ಬಹಿರಂಗ ಬಂಡಾಯ ಸಾರಿದ್ದ ಹಿರಿಯ ನಾಯಕರಾದ ರೋಷನ್ ಬೇಗ್ ಹಾಗೂ ರಾಮಲಿಂಗಾರೆಡ್ಡಿ ಸಂಪುಟ ವಿಸ್ತರಣೆಯ ಬಗ್ಗೆ ಕಾದು ನೋಡುವ ತಂತ್ರ ಅನುಸರಿಸಲು ಮುಂದಾಗಿದ್ದಾರೆ.
ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಅವಕಾಶ ನೀಡುತ್ತಾರೆ, ಪಕ್ಷದ ಶಾಸಕರಿಗೆ ಅವಕಾಶ ದೊರೆಯುತ್ತದೆಯೋ ಅಥವಾ ಕೇವಲ ಪಕ್ಷೇತರರಿಗೆ ಮಾತ್ರ ಅವಕಾಶ ನೀಡಿ ಕೈ ತೊಳೆದುಕೊಳ್ಳುತ್ತಾರೋ ಎನ್ನುವುದನ್ನು ಕಾದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದ್ದಾರೆಂದು ತಿಳಿದು ಬಂದಿದೆ.
ಒಂದು ಸ್ಥಾನ ನಿಗೂಢ: ಮೈತ್ರಿ ಸರ್ಕಾರದಲ್ಲಿ ಮೂರು ಸಚಿವ ಸ್ಥಾನ ಖಾಲಿ ಇದ್ದು, ಜೆಡಿಎಸ್ ಬಳಿ ಇರುವ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಪಕ್ಷೇತರ ಶಾಸಕ ನಾಗೇಶ್‌ಗೆ, ಕಾಂಗ್ರೆಸ್ ಬಳಿ ಇರುವ ಒಂದು ಸ್ಥಾನವನ್ನು ಇನ್ನೊಬ್ಬ ಪಕ್ಷೇತರ ಶಾಸಕ ಆರ್. ಶಂಕರ್ ಅವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಆದರೆ, ಖಾಲಿ ಉಳಿಯುವ ಇನ್ನೊಂದು ಸ್ಥಾನವನ್ನು ಕಾಂಗ್ರೆಸ್‌ನ ಅತೃಪ್ತ ಶಾಸಕರಲ್ಲಿ ಬಹಿರಂಗ ಆರೋಪ ನಡೆಸುತ್ತಿರುವ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಅಥವಾ ಬಿ.ಸಿ.ಪಾಟೀಲ್‌ಗೆ ನೀಡುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದ್ದರೂ, ತಕ್ಷಣಕ್ಕೆ ಒಂದು ಸ್ಥಾನ ಖಾಲಿ ಇಟ್ಟುಕೊಂಡು ಶಾಸಕರ ನಡೆಯ ಮೇಲೆ ನಿರ್ಧಾರ ಕೈಗೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ನಾನು ಸಚಿವಾಕಾಂಕ್ಷಿಯಲ್ಲ. ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯೇ ಮುಖ್ಯ. ರಮೇಶ್ ಜಾರಕಿಹೊಳಿ ಯಾರೊಂದಿಗೆ ಸಭೆ ಮಾಡಿದ್ದಾರೋ ನನಗೆ ಗೊತ್ತಿಲ್ಲ. ನಾನು ಪಕ್ಷದ ನಾಯಕರ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ.
-ಮಹೇಶ್ ಕುಮಠಳ್ಳಿ, ಅಥಣಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.