ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದ ದೃಷ್ಟಿಯಲ್ಲಿ ರಾಜ್ಯ ಬಜೆಟ್‌ ಆಶಾದಾಯಕ

Team Udayavani, Feb 18, 2023, 7:45 AM IST

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದ ದೃಷ್ಟಿಯಲ್ಲಿ ರಾಜ್ಯ ಬಜೆಟ್‌ ಆಶಾದಾಯಕ

ಡಾ.ಸಿ.ಎನ್‌. ಮಂಜುನಾಥ್‌, ನಿರ್ದೇಶಕರು, ಜಯದೇವ ಹೃದ್ರೋಗ ಸಂಸ್ಥೆ.
ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದ ದೃಷ್ಟಿಯಲ್ಲಿ ರಾಜ್ಯ ಬಜೆಟ್‌ ಆಶಾದಾಯಕವಾಗಿದೆ. ಆದರೆ ಇದರ ಅನುಷ್ಠಾನ ಎಷ್ಟರ ಮಟ್ಟಿಗೆ ಆಗಲಿದೆ ಎಂಬುದು ಮುಖ್ಯ. ಹಾಗೆಯೇ ಆರೋಗ್ಯ ಕ್ಷೇತ್ರದ ನಿರ್ವಹಣೆ ಅತ್ಯಂತ ಪ್ರಮುಖ ಸಂಗತಿಯಾಗಿದೆ.

ಇಂದು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ನಿರ್ಮಾಣಗೊಳ್ಳುತ್ತಿವೆ. ಆದರೆ ಇದರ ನಿರ್ವಹಣೆ ಮತ್ತು ಆರೋಗ್ಯ ಸೇವೆಗಳನ್ನು ನೀಡುವ ಮಾನವ ಸಂಪನ್ಮೂಲದ ಕೊರತೆ ಎದ್ದು ಕಾಣುತ್ತಿದೆ. ಆರೋಗ್ಯ ಮತ್ತು ವೈದ್ಯಕೀಯ ಸೇವಾ ರಂಗದಲ್ಲಿ ಮಾನವ ಸಂಪನ್ಮೂಲ ಸೃಷ್ಟಿಸುವ ಪ್ರಯತ್ನವನ್ನು ಸರ್ಕಾರ ಮಾಡಬಹುದಿತ್ತು.

ತಾಲೂಕು ಆಸ್ಪತ್ರೆಗಳಲ್ಲಿಯೂ ತುರ್ತು ಚಿಕಿತ್ಸೆ ಸಿಗುವಂತಹ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕಿತ್ತು. ಹಾಗೆಯೇ ಅಪಘಾತ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ಸಂಭವಿಸುವ ಸಾವುಗಳಲ್ಲಿ ಶೇ. 12 ರಿಂದ ಶೇ. 13ರಷ್ಟು ಅಪಘಾತದ ಕಾರಣದಿಂದ ಘಟಿಸುತ್ತಿದೆ. ಆದ್ದರಿಂದ ಟ್ರಾಮಾ ಕೇಂದ್ರಗಳನ್ನು ಹೆಚ್ಚಿಸುವ ಅಗತ್ಯವಿದೆ.
ಬೆಂಗಳೂರಿನಂತಹ ನಗರದ ನಾಲ್ಕು ದಿಕ್ಕಿನಲ್ಲೂ 300 ಬೆಡ್‌ಗಳ ಅತ್ಯಾಧುನಿಕ ಆಸ್ಪತ್ರೆಗಳನ್ನು ನಿರ್ಮಾಣ ಮಾಡಬೇಕು. ನಮ್ಮ ಜಯದೇವವೇ ಆರಂಭಗೊಂಡಿದ್ದಾಗ ನಗರದ ಹೊರ ವಲಯದಲ್ಲಿತ್ತು. ಆದರೆ ಈಗ ನಗರ ವಿಸ್ತಾರಗೊಂಡು ಜಯದೇವ ಆಸ್ಪತ್ರೆಯೇ ಹೃದಯ ಭಾಗಕ್ಕೆ ಬಂದು ಬಿಟ್ಟಿದೆ. ಆದ್ದರಿಂದ ನಗರದ ಹೊರ ವಲಯದ ನಾಲ್ಕು ದಿಕ್ಕಿನಲ್ಲೂ ಆಸ್ಪತ್ರೆ ನಿರ್ಮಿಸುವ ಪ್ರಸ್ತಾಪವನ್ನು ಬಜೆಟ್‌ ಹೊಂದಿರಬೇಕಿತ್ತು.

ಇನ್ನು ಸರ್ಕಾರಿ ಯೋಜನೆಗಳಾದ ಆಯುಷ್ಮಾನ್‌ ಭಾರತ್‌ ಮತ್ತು ಯಶಸ್ವಿನಿ ಯೋಜನೆ ಸರ್ಕಾರಿ ಆಸ್ಪತ್ರೆಗಳಿಗೆ ಸೀಮಿತವಾಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳ ಮೇಲೆ ಭಾರೀ ಹೊರೆ ಬಿದ್ದಿದೆ. ಈ ಯೋಜನೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸುವ ಮೂಲಕ ಸರ್ಕಾರಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಬಹುದು. ಆದರೆ ಇದಕ್ಕಿಂತ ಮುಂಚಿತವಾಗಿ ಯೋಜನೆಯಡಿಯಲ್ಲಿನ ಚಿಕಿತ್ಸೆಗಳ ದರ ಪರಿಷ್ಕರಣೆ ಆಗಬೇಕು.

ಹೃದಯಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಗಳಿದ್ದಾಗ ತಾಲೂಕು ಆಸ್ಪತ್ರೆಗಳಲ್ಲಿ ತೃತೀಯ ಹಂತದ ಆಸ್ಪತ್ರೆಗಳ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಜಾರಿಗೆ ತರಬೇಕಿತ್ತು. ಇದರಿಂದಾಗಿ ಹೃದಯಾಘಾತ ಪ್ರಕರಣಗಳಲ್ಲಿ ಸುವರ್ಣ ಅವಧಿಯಲ್ಲಿ ಚಿಕಿತ್ಸೆ ಸಿಕ್ಕಿ ಹೃದ್ರೋಗಿ ಪ್ರಾಣಾಪಾಯದಿಂದ ಪಾರಾಗುವ ಸಂಭವ ಹೆಚ್ಚು. ಮೂರ್ನಾಲ್ಕು ಗಂಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆ ಬಳಿಕ ಆ ವ್ಯಕ್ತಿಯನ್ನು ಹೃದ್ರೋಗ ಆಸ್ಪತ್ರೆಗಳಿಗೆ ರವಾನಿಸುವ ವ್ಯವಸ್ಥೆಯ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖೀಸುವ ನಿರೀಕ್ಷೆಯಿತ್ತು.

ಎಲ್ಲ ಮೆಡಿಕಲ್‌ ಕಾಲೇಜ್‌ಗಳಲ್ಲಿ ಸಣ್ಣ ಸಣ್ಣ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರಗಳನ್ನು ತೆರೆಯಬೇಕು. ಮೊದಲ ಮತ್ತು ಎರಡನೇ ಹಂತದ ಕ್ಯಾನ್ಸರ್‌ಗೆ ಅಲ್ಲೇ ಚಿಕಿತ್ಸೆ ಸಿಗುವಂತೆ ಮಾಡುವ ಕ್ರಮ ಕೈಗೊಳ್ಳಬೇಕಿತ್ತು.

ಟಾಪ್ ನ್ಯೂಸ್

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

Pushpa 2: Allu Arjun meets the boy injured in the stampede

Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್‌

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.