Parliament Case: ಮನೋರಂಜನ್ ತಾಯಿ, ಸಹೋದರಿ ಹೇಳಿಕೆ ದಾಖಲಿಸಿದ ದಿಲ್ಲಿ ಪೊಲೀಸರು
Team Udayavani, Dec 19, 2023, 11:20 PM IST
ಮೈಸೂರು: ಸಂಸತ್ ಭವನದಲ್ಲಿನ ಭದ್ರತಾ ಲೋಪ ಸಂಬಂಧ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮನೆಗೆ ಮಂಗಳವಾರವೂ ಭೇಟಿ ನೀಡಿದ ದಿಲ್ಲಿ ಪೊಲೀಸ್ ವಿಶೇಷ ತನಿಖಾ ತಂಡ ವಿಚಾರಣೆ ಮುಂದುವರಿಸಿತು. ಬೆಳಗ್ಗೆ ಮನೋರಂಜನ್ ತಾಯಿ ಮತ್ತು ಸಹೋದರಿಯನ್ನು ಎರಡು ಗಂಟೆಗೂ ಹೆಚ್ಚು ಕಾಲ ಪೊಲೀಸರು ವಿಚಾರಣೆ ನಡೆಸಿದರು. ಪೊಲೀಸ್ ವಶದಲ್ಲಿರುವ ಮನೋರಂಜನ್ ನೀಡಿರುವ ಹೇಳಿಕೆ ಮತ್ತು ಆತನ ಪೋಷಕರು ನೀಡುತ್ತಿರುವ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ಮನೋರಂಜನ್ ತಾಯಿ ಮತ್ತು ಸಹೋದರಿ ನೀಡಿರುವ ಹೇಳಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡರು.
ಪ್ರಕರಣದ ಮತ್ತೂಬ್ಬ ಆರೋಪಿ ಸಾಗರ್ ಶರ್ಮ ಎರಡು ಬಾರಿ ಮನೋರಂಜನ್ ನಿವಾಸಕ್ಕೆ ಬಂದಿರುವ ಬಗ್ಗೆ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಮನೋರಂಜನ್, ಸಾಗರ್ ಶರ್ಮ ಮೈಸೂರಿಗೆ ಬಂದೇ ಇಲ್ಲ ಎಂದು ವಿಚಾರಣೆ ವೇಳೆ ಹೇಳಿದ್ದಾನೆ. ಜೊತೆಗೆ ಮನೋರಂಜನ್‌ಗೆ ಯಾರು ಆರ್ಥಿಕ ಸಹಾಯ ಮಾಡುತ್ತಿದ್ದರು ಎಂಬ ಬಗ್ಗೆಯೂ ದಿಲ್ಲಿ ಪೊಲೀಸರಿಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ ಬ್ಯಾಂಕ್ ಸ್ಟೇಂಟ್‌ಮೆಂಟ್ ಪರಿಶೀಲನೆಗೆ ತನಿಖಾ ತಂಡ ಮುಂದಾಗಿದೆ.
ವಿಚಾರಣೆ ವೇಳೆ ಮನೋರಂಜನ್ ತಾಯಿ, ನಮ್ಮ ಮಗ ಯಾರೊಂದಿಗೂ ಸರಿಯಾಗಿ ಮಾತನಾಡುತ್ತಿರಲಿಲ್ಲ. ಊಟ, ತಿಂಡಿ ನಿತ್ಯಕರ್ಮಗಳಿಗೆ ಮಾತ್ರ ಮನೆ ಒಳಗೆ ಬರುತ್ತಿದ್ದ. ಆತ ಮನೆಯಲ್ಲೇ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದ. ಮುದ್ದಿನಿಂದ ಬೆಳಸಿದ್ದೇ ಇದಕ್ಕೆಲ್ಲ ಕಾರಣವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.