Prisons: ಜೈಲುಗಳ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದ ಸುಪ್ರೀಂ ಸಮಿತಿ

Team Udayavani, Aug 31, 2023, 11:15 PM IST

arrest 3

ಕಾರಾಗೃಹಗಳ ಸುಧಾರಣೆಗಾಗಿನ ಸುಪ್ರೀಂ ಕೋರ್ಟ್‌ನ ಸಮಿತಿ ಗುರು ವಾರ ತನ್ನ ವರದಿಯನ್ನು ಸಲ್ಲಿಸಿದ್ದು ದೇಶದಲ್ಲಿರುವ ಜೈಲುಗಳು ಮತ್ತು ಕೈದಿಗಳ ದಯನೀಯ ಸ್ಥಿತಿಯ ಬಗೆಗೆ ಬೆಳಕು ಚೆಲ್ಲಿದೆ. ಜೈಲುಗಳಲ್ಲಿನ ಮೂಲಸೌಕರ್ಯಗಳು, ಕೈದಿಗಳ ಸ್ಥಿತಿಗತಿ, ಕೈದಿಗಳ ಅಸಹಜ ಸಾವು, ಕಾರಾ ಗೃಹಗಳಲ್ಲಿನ ಅಧಿಕಾರಿಗಳು ಮತ್ತು ಸಿಬಂದಿಯ ಕೊರತೆ, ಮಂಗಳಮುಖೀ ಕೈದಿಗಳ ಪರಿಸ್ಥಿತಿ ಸಹಿತ ಎಲ್ಲ ಅಂಶಗಳ ಬಗೆಗೆ ಈ ವರದಿಯಲ್ಲಿ ಸಮಿತಿ ಅಂಕಿಅಂಶಗಳ ಸಹಿತ ಸವಿಸ್ತಾರವಾಗಿ ವಿವರಿಸಿ ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹಲವಾರು ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಅಷ್ಟು ಮಾತ್ರವಲ್ಲದೆ 2016ರ ಮಾದರಿ ಕಾರಾಗೃಹ ಕೈಪಿಡಿಯನ್ನು ಶೀಘ್ರವೇ ಪುನರ್‌ ವಿಮರ್ಶಿಸಿ ಹಾಲಿ ಪರಿಸ್ಥಿತಿಗನುಗುಣವಾದ ಹೊಸ ಕೈಪಿಡಿಯನ್ನು ರಚಿಸಿ ಜಾರಿಗೆ ತರುವ ಅಗತ್ಯತೆಯ ಬಗೆಗೆ ಒತ್ತಿ ಹೇಳಿದೆ.

ದೇಶದ ಜೈಲು ಗ ಳ ಲ್ಲಿ ಹೆಚ್ಚುತ್ತಿರುವ ಕೈದಿಗಳ ಸಂಖ್ಯೆಗನುಗುಣವಾಗಿ ಜೈಲುಗಳ ಸಂಖ್ಯೆಯಾಗಲೀ, ಮೂಲಸೌಕರ್ಯವಾಗಲೀ, ಸಿಬಂದಿ ಯಾಗಲೀ ಹೆಚ್ಚುತ್ತಿಲ್ಲ. ಸಣ್ಣಪುಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿ ಗಳನ್ನು ಬಂಧಿಸಿ ಅವರನ್ನು ಜೈಲುಗಳಿಗೆ ಕಳುಹಿಸುವುದು, ಪ್ರಕರಣಗಳ ತನಿಖೆ ಮತ್ತು ವಿಚಾರಣೆ ಪ್ರಕ್ರಿಯೆಯಲ್ಲಿನ ವಿಳಂಬದ ಕಾರಣದಿಂದಾಗಿಯೂ ಜೈಲುಗಳಲ್ಲಿ ಕೈದಿಗಳ ದಟ್ಟಣೆ ಹೆಚ್ಚುವಂತಾಗಿದೆ. ಇತ್ತ ಒಂದಿಷ್ಟು ಗಮನ ಹರಿಸಿದ್ದೇ ಆದಲ್ಲಿ ಜೈಲುಗಳ ಪರಿಸ್ಥಿತಿಯಲ್ಲಿ ಕೊಂಚ ಸುಧಾರಣೆಯಾದೀತು ಎಂದು ಸುಪ್ರೀಂ ನಿವೃತ್ತ ನ್ಯಾ| ಅಮಿತಾವ ರಾಯ್‌ ನೇತೃತ್ವದ ತ್ರಿಸದಸ್ಯ ಸಮಿತಿ ಅಭಿಪ್ರಾಯಪಟ್ಟಿದೆ. ವಿಚಾರಣಾಧೀನ ಕೈದಿಗಳ ಪ್ರಕರಣಗಳ ಪರಾಮರ್ಶೆ ಸಮಿತಿ ವ್ಯವಸ್ಥೆಯನ್ನು ಜಿಲ್ಲಾ ಮಟ್ಟದಲ್ಲಿ ಜಾರಿಗೆ ತರುವುದು, ತ್ವರಿತಗತಿಯಲ್ಲಿ ತನಿಖೆ ಮತ್ತು ವಿಚಾರಣ ಪ್ರಕ್ರಿಯೆ ನಡೆಸುವುದು, ಸಣ್ಣಪುಟ್ಟ ಪ್ರಕರಣಗಳು ಹಾಗೂ 5 ಮತ್ತು ಅದಕ್ಕಿಂತ ಹೆಚ್ಚಿನ ವರ್ಷಗಳಿಂದ ವಿಚಾರಣೆ ಬಾಕಿ ಉಳಿದಿರುವ ಪ್ರಕರಣಗಳ ವಿಲೇವಾರಿಗಾಗಿ ವಿಶೇಷ ತ್ವರಿತಗತಿಯ ನ್ಯಾಯಾಲಯಗಳ ಸ್ಥಾಪನೆ, ವಿಳಂಬಿತ ಪ್ರಕರಣಗಳ ವಿಚಾರಣೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ಗಳ ಮೇಲೆ ಆಯಾಯ ರಾಜ್ಯಗಳ ಹೈಕೋರ್ಟ್‌ಗಳು ನಿಗಾ ಇರಿಸುವ ಜತೆಯಲ್ಲಿ ಕಾಲಕಾಲಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವುದು… ಈ ಎಲ್ಲ ಕ್ರಮಗಳನ್ನು ಕೈಗೊಂಡಲ್ಲಿ ಕಾರಾಗೃಹಗಳಲ್ಲಿನ ಕೈದಿಗಳ ದಟ್ಟಣೆಯನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದೆ.

ಸಿಬಂದಿ ಕೊರತೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರಾಗೃಹ ಇಲಾಖೆ ತ್ವರಿತ ಕ್ರಮ ಕೈಗೊಳ್ಳಬೇಕು. ಜೈಲುಗಳಲ್ಲಿ ಸಂಭವಿಸುತ್ತಿರುವ ಅಸಹಜ ಸಾವುಗಳಲ್ಲಿ ಕೈದಿಗಳ ಆತ್ಮಹತ್ಯೆಯ ಸಂಖ್ಯೆಯೇ ಅಧಿಕವಾಗಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಕಾರಾಗೃಹ ಕಟ್ಟಡಗಳ ನಿರ್ಮಾಣದ ಸಂದರ್ಭ­ದಲ್ಲಿಯೇ ವಿನ್ಯಾಸದಲ್ಲಿ ಆವಶ್ಯಕ ಮಾರ್ಪಾಡುಗಳನ್ನು ಮಾಡಬೇಕು. ಕೈದಿಗಳಿಗೆ ಸರಕಾರಿ ಆರೋಗ್ಯ ವಿಮಾ ಸೌಲಭ್ಯಗಳಡಿ ಆರೋಗ್ಯ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಮಂಗಳಮುಖೀ ಕೈದಿಗಳಿಗೂ ಕೈದಿಗಳಿಗೆ ನೀಡಲಾಗುವ ಎಲ್ಲ ಸೌಕರ್ಯಗಳನ್ನು ಒದಗಿಸಬೇ ಕು ಎಂದು ಸಮಿತಿ ತಿಳಿ ಸಿದೆ. ಕಾರಾಗೃಹಗಳ ದಯನೀಯ ಪರಿಸ್ಥಿತಿಯ ಬಗೆಗೆ ಪ್ರತೀ ಬಾರಿ ಪ್ರಸ್ತಾವ ವಾಗಿ ಚರ್ಚೆಗಷ್ಟೇ ಸೀಮಿತಗೊಳ್ಳುತ್ತಿದ್ದು ಈ ಬಾರಿಯಾದರೂ ಸುಪ್ರೀಂ ಕೋರ್ಟ್‌ ಸಮಿತಿ ಮಾಡಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆ ಮತ್ತು ಸರಕಾರ ಕಾರ್ಯೋ ನ್ಮುಖವಾಗಬೇಕು. ಕೈದಿಗಳ ಹಕ್ಕಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಸರಕಾರದ್ದಾಗಿದೆ ಎಂಬುದನ್ನು ಮರೆಯಬಾರದು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.