BJP ಪದಾಧಿಕಾರಿಗಳ ನೇಮಕಕ್ಕೆ ತಂಡ ಸಿದ್ಧ
ಸಂಘಟನಾತ್ಮಕ ಜಿಲ್ಲೆಗಳಲ್ಲಿ 60 ಜನರ ತಂಡದಿಂದ ಪ್ರವಾಸ ಕಾರ್ಯಕರ್ತರು, ಶಾಸಕರು, ಸಂಸದರ ಅಭಿಪ್ರಾಯ ಸಂಗ್ರಹ
Team Udayavani, Dec 27, 2023, 10:48 PM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘ ಟನೆಗೆ ಒತ್ತು ಕೊಡಲು ನಿರ್ಧರಿಸಿರುವ ರಾಜ್ಯ ಬಿಜೆಪಿಯು ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿ ನೇಮಕಾತಿ ಗಾಗಿ 60 ಜನರ ತಂಡವನ್ನು ರಚಿಸಿದೆ.
ಬುಧವಾರ ಪಕ್ಷದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಸಭೆ ನಡೆಯಿತು. ಈ ತಂಡವು ಪಕ್ಷದ ಎಲ್ಲ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಎರಡೂ¾ರು ದಿನಗಳ ಕಾಲ ಪ್ರವಾಸ ನಡೆಸಿ, ಪಕ್ಷದ ಕಾರ್ಯಕರ್ತರು, ಸ್ಥಳೀಯ ಶಾಸಕರು, ಸಂಸದರು, ಮಾಜಿ ಶಾಸಕರು, ಸಂಸದರು ಹಾಗೂ ಹಿರಿಯರ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಕ್ಷದ ಮುಂದಿಡಲಿದೆ. ಇದನ್ನು ಆಧರಿಸಿ ನೂತನ ಜಿಲ್ಲಾಧ್ಯಕ್ಷರು ಮತ್ತು ಪದಾಧಿ ಕಾರಿಗಳ ನೇಮಕ ಮಾಡಲಿದೆ.
ಈಗಾಗಲೇ ನಡೆಯುತ್ತಿರುವ ವಿಕಸಿತ ಭಾರತ ಯಾತ್ರೆಗೆ ವೇಗ ನೀಡ ಬೇಕು. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲೂ ಕಾರ್ಯಕರ್ತರು ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಭೇಟಿ ಮಾಡಿ, ಅಭಿಪ್ರಾಯ ಸಂಗ್ರಹಿ ಸಬೇಕು. ಕೇಂದ್ರ ಸರಕಾರದ ಯಾವು ದಾದರೂ ಯೋಜನೆಗಳಿಂದ ಹೊರಗು ಳಿದವರಿದ್ದರೆ, ಅಂಥವರನ್ನು ಗುರುತಿಸಿ ಯೋಜನೆಯ ವ್ಯಾಪ್ತಿಗೆ ತರಬೇಕು. ಅದರಲ್ಲೂ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಯಾರಿಗಾದರೂ ಅಡುಗೆ ಅನಿಲ ಸಂಪರ್ಕ ಸಿಕ್ಕಿಲ್ಲದಿದ್ದರೆ, ಆದ್ಯತೆ ಮೇರೆಗೆ ನೋಂದಣಿ ಮಾಡಿಸಿ ಸಂಪರ್ಕ ಕೊಡಿಸುವ ನಿರ್ಧರಿಸಲಾಯಿತು.
ಹಗುರವಾಗಿ ಪರಿಗಣಿಸದಿರಿ
ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಯೊಂದು ಚುನಾವಣೆಯಲ್ಲೂ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲು ಗಳನ್ನು ನಿಭಾಯಿಸಬೇಕು ಹಾಗೂ ನಮ್ಮ ಎದುರಾಳಿಗಳನ್ನು ಹಗುರವಾಗಿ ಪರಿಗಣಿಸಬಾರದು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದರು.
ಮೋದಿ ಕೈ ಬಲಪಡಿಸೋಣ
ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿ ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ನಮ್ಮ ಎದುರಿಗಿದೆ. ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ. ಸುನಿಲ್ ಕುಮಾರ್, ಪಿ. ರಾಜೀವ್, ಪ್ರೀತಮ್ ಗೌಡ, ನಂದೀಶ್ ರೆಡ್ಡಿ ಸಹಿತ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಶ್ರಾಂತಿ ಪ್ರಶ್ನೆಯೇ ಇಲ್ಲಿ: ವಿಜಯೇಂದ್ರ
ಲೋಕಸಭಾ ಚುನಾವಣೆ ಮುಗಿಯುವವರೆಗೆ ನಮಗೆ ರವಿವಾರ, ಹಬ್ಬ – ಹರಿದಿನ ಎಂಬುದಿರಬಾರದು. ಚುನಾವಣೆಯ ಗುರಿ ಮುಟ್ಟುವ ತನಕ ನಾವು ವಿಶ್ರಾಂತಿ ಪಡೆಯಬಾರದು. ನರೇಂದ್ರ ಮೋದಿ ವಿಶ್ರಾಂತಿ ಪಡೆಯದೆ ಹೇಗೆ ಒಂಬತ್ತೂವರೆ ವರ್ಷಗಳಿಂದ ನಿರಂತರವಾಗಿ ದೇಶಸೇವೆ ಮಾಡುತ್ತಿದ್ದಾರೋ ಅದೇ ಮಾದರಿಯಲ್ಲಿ ಒಗ್ಗಟ್ಟಾಗಿ ಒಂದಾಗಿ ಕೆಲಸ ಮಾಡಬೇಕು. ಬಿಜೆಪಿಯು ಜಾತಿರಹಿತವಾಗಿ, ಕೇವಲ ಹಿಂದುತ್ವದ ಜಾತಿಯಡಿ ಒಂದು ತಂಡವಾಗಿ ಕೆಲಸ ಮಾಡೋಣ ಎಂದು ವಿಜಯೇಂದ್ರ ಮನವಿ ಮಾಡಿದರು.
ನಮೋ ಆ್ಯಪ್‌ನಲ್ಲಿ ಪದಾಧಿಕಾರಿಗಳಿಗೆ ಟಾಸ್ಕ್
ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ ಸಂಬಂಧ 60 ಜನರ ತಂಡವು ಏಕಕಾಲದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ. ಈಗಿನ ಅಧ್ಯಕ್ಷರು, ಕಾರ್ಯಕರ್ತರು, ಸಂಸದರು, ಶಾಸಕರು, ಮಾಜಿ ಶಾಸಕರು, ಹಿರಿಯರ ಅಭಿಪ್ರಾಯ ಪಡೆದು 2-3 ದಿನಗಳ ಒಳಗೆ ತನ್ನ ಕಾರ್ಯವನ್ನು ಪೂರೈಸಲಿದೆ. ಪದಾಧಿಕಾರಿಗಳು ಹಿರಿಯರು, ಬೂತ್ ಕಾರ್ಯಕರ್ತರು, ವರಿಷ್ಠರನ್ನು ಸಮಾನವಾಗಿ ನೋಡಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದು ಕೊಂಡು ಹೋಗಲು ವಿಜಯೇಂದ್ರ ತಿಳಿಸಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ ಮತ್ತು ನಮೋ ಆ್ಯಪ್‌ನಲ್ಲಿ ಪ್ರತಿಯೊಬ್ಬ ಪದಾಧಿಕಾರಿಗೆ ನಿಗದಿತ ಟಾಸ್ಕ್ ಕೊಡಲಾಗಿದೆ. ತಳಮಟ್ಟದಲ್ಲಿ ಸಂಘಟನೆ ಬಲಪಡಿಸುವ ಮಾಹಿತಿ ಕೊಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದರು.
ನಮಗೆ ಹೊಣೆಗಾರಿಕೆ ಯಾವ ಕಾಲಘಟ್ಟದಲ್ಲಿ ಲಭಿಸಿದೆ ಎಂಬುದು ಅತ್ಯಂತ ಪ್ರಮುಖವಾದುದು. ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಆಗಬೇಕೆಂಬ ಹಲವು ದಶಕಗಳ ಕನಸು ನನಸಾಗುತ್ತಿದೆ. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಆಗುವ ಮಹತ್ತರ ಕಾಲಘಟ್ಟದಲ್ಲೇ ಈ ಹೊಣೆ ನಮ್ಮೆಲ್ಲರ ಹೆಗಲಿಗೇರಿದೆ. ದೇಶದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರದಿಡುವಂಥ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬರಲಿದೆ.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷರು ರೈತ ಮೋರ್ಚಾ ಅಧ್ಯಕ್ಷನಾಗಿ ಮಾಡಿ ದ್ದಾರೆ. ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ರೈತರೊಂದಿಗೆ ನೇರ ಸಂವಾದ ನಡೆಸಿ, ಪಕ್ಷದ ಸಂಘಟನೆ ಜತೆಗೆ ರೈತರ ಜ್ವಲಂತ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರಲು ಹೋರಾಟ ರೂಪಿಸುತ್ತೇನೆ.
-ಎ.ಎಸ್. ಪಾಟೀಲ್ ನಡಹಳ್ಳಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ
ಪಕ್ಷದ ನಾಯಕರಿಂದ ಹಿಡಿದು ವರಿಷ್ಠರವರೆಗೆ ಯಾರೂ ನೇರ ಮಾತಿಗೆ ಸಿಗದೆ ಇರುವುದರಿಂದ ಮಾಧ್ಯಮಗಳ ಮೂಲಕ ಎಲ್ಲವನ್ನೂ ತಿಳಿಸುವಂತಾಗಿದೆ. ಪಕ್ಷದ ಸಂವಿಧಾನದ ಪ್ರಕಾರ ಹೊಸ ತಂಡ ರಚನೆಯಾಗಿದೆ. ಅವಕಾಶ ಸಿಕ್ಕಿರುವವರ ಮೇಲೆ ವಿಶ್ವಾಸವಿಲ್ಲದಿದ್ದರೆ ಕಷ್ಟ. ಹೀಗಾಗಿ ಯಾರ್ಯಾರಿಗೆ ಏನೇನು ಹೇಳಲಿಕ್ಕಿದೆಯೋ ಅದಕ್ಕೊಂದು ವೇದಿಕೆ ಕಲ್ಪಿಸಿಕೊಡಿ. ಬಿಜೆಪಿಯಲ್ಲಿ ಸರ್ವಾಧಿಕಾರ ಧೋರಣೆ ಇದೆ ಎನ್ನುವ ಭಾವನೆ ಹೋಗಲಾಡಿಸಿ. -ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.