ಸಮ್ಮಿಶ್ರ ಸರ್ಕಾರ ಉಳಿವಿಗೆ ಅಂತಿಮ ಸೂತ್ರ


Team Udayavani, Jul 10, 2019, 3:10 AM IST

siddaramaiah

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಮಧ್ಯರಾತ್ರಿ ಸೂತ್ರವೊಂದು ಸಿದ್ಧಗೊಂಡಿದೆ. ಒಂದು ವೇಳೆ ಸಂಪುಟ ಪುನಾರಚನೆ ಆದಲ್ಲಿ ಈಗಾಗಲೇ ಸಚಿವ ಸ್ಥಾನ ಅನುಭವಿಸಿರುವ ಕೆಲವರಿಗೆ ಅರ್ಧಚಂದ್ರ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಡಾ.ಜಿ.ಪರಮೇಶ್ವರ್‌ ಅವರಿಗೆ ನೀಡದಿರುವುದು ಸೂತ್ರದ ತಿರುಳಾಗಿದೆ. ಇದು ಸಂಕಷ್ಟ ನಿವಾರಣೆಗೆ ಮೈತ್ರಿ ಸರ್ಕಾರದ ಕೊನೇ ಪ್ರಯತ್ನದ ಭಾಗವಾಗಿದೆ.

ಆದರೆ, ಇದೆಲ್ಲವೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆಯೇ ಅವಲಂಬಿತವಾಗಿದ್ದು, ಬದಲಾವಣೆಯ ನಂತರ ಪಕ್ಷದಲ್ಲಿ ಬಂಡಾಯ ಅಥವಾ ಭಿನ್ನಮತ ಸ್ಫೋಟಗೊಳ್ಳದಂತೆ ನೋಡಿಕೊಳ್ಳುವಂತೆ ಹೈಕಮಾಂಡ್‌ ಅವರಿಗೆ ಸೂಚನೆ ನೀಡಿದೆ.

ಮಹಾರಾಷ್ಟ್ರ -ಹರಿಯಾಣ ವಿಧಾನಸಭೆ ಚುನಾವಣೆ ಸೇರಿ ಮುಂದಿನ ವರ್ಷದ ಫೆಬ್ರವರಿವರೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರಲೇಬೇಕು. ಅಲ್ಲಿಯವರೆಗೆ ಉಳಿಸಿಕೊಳ್ಳಿ, ಮುಂದಿನದನ್ನು ಆಮೇಲೆ ನೋಡೋಣ ಎಂಬ ಸಂದೇಶವೂ ಖಡಕ್‌ಆಗಿ ಹೈಕಮಾಂಡ್‌ನಿಂದ ರವಾನೆಯಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಹೀಗಾಗಿ, ಸೋಮವಾರ ತಡರಾತ್ರಿವರೆಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ನಿರಂತರ ಸಭೆ ನಡೆಸಿ ಸರ್ಕಾರ ಉಳಿಸಿಕೊಳ್ಳಲು ಅಂತಿಮ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈಗಿನ ಸೂತ್ರಕ್ಕೆ ಅತೃಪ್ತ ಶಾಸಕರು ಒಪ್ಪಿದರೆ ಶುಕ್ರವಾರವೇ ವಿಶ್ವಾಸಮತ ಯಾಚಿಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.

ಅದಕ್ಕೆ ಮೊದಲು ಅತೃಪ್ತರ ಜತೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಒನ್‌ ಟು ಒನ್‌ ಚರ್ಚೆ ನಡೆಸಲಿದ್ದಾರೆ. ರಾಮಲಿಂಗಾರೆಡ್ಡಿಯವರ ಅತೃಪ್ತಿ ವಿಚಾರವನ್ನೇ ಗಮನದಲ್ಲಿಟ್ಟುಕೊಂಡು ಈ ಸೂತ್ರ ರಚಿಸಲಾಗಿದೆ. ಹೊಸ ಸೂತ್ರಕ್ಕೆ ರಾಜೀನಾಮೆ ನೀಡಿರುವ ಬೆಂಗಳೂರು ನಗರ ಶಾಸಕರ ಸಮ್ಮತಿ ವ್ಯಕ್ತವಾದರೆ ಮಾತ್ರ ಸರ್ಕಾರ ಸೇಫ್ ಆಗಲಿದೆ. ಈ ಪ್ರಯತ್ನ ಕೈಗೂಡದಿದ್ದರೆ ಏನೂ ಮಾಡಲಾಗದೆಂಬ ಮಾತುಗಳೂ ಕೇಳಿ ಬರುತ್ತಿವೆ.

ಹೊಸ ಸೂತ್ರದಂತೆ, ಸಂಪುಟ ಪುನಾರಚನೆ ನಂತರ ಕೆ.ಜೆ.ಜಾರ್ಜ್‌, ಕೃಷ್ಣಬೈರೇಗೌಡ, ಶಿವಶಂಕರೆಡ್ಡಿ, ಜಯಮಾಲಾ, ವೆಂಕಟರಮಣ್ಣಪ್ಪ, ಪರಮೇಶ್ವರ್‌ ನಾಯ್ಕ ಮತ್ತೆ ಸಚಿವರಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಡಿ.ಕೆ.ಶಿವಕುಮಾರ್‌ ಸಹ ಅಗತ್ಯವಾದರೆ ನಾನು ತ್ಯಾಗಕ್ಕೆ ಸಿದ್ಧನಿದ್ದೇನೆ. ಬೇಕಾದರೆ ಸಂಕಷ್ಟ ಸಮಯದಲ್ಲಿ ಪಕ್ಷದ ಅಧ್ಯಕ್ಷಗಿರಿ ವಹಿಸಿಕೊಳ್ಳಲು ನಾನು ಸಿದ್ಧ.

ನನಗೆ ಸಮ್ಮಿಶ್ರ ಸರ್ಕಾರ ಉಳಿಯುವುದು ಮುಖ್ಯ ಎಂದು ಹೈಕಮಾಂಡ್‌ ನಾಯಕರಿಗೆ ಹೇಳಿದ್ದಾರೆ. ಅವರು ದೆಹಲಿಗೆ ದಿಢೀರ್‌ ಹೋಗಿ ನಾಯಕರ ಜತೆ ಮಾತನಾಡಿದ ನಂತರದ ವಿದ್ಯಮಾನಗಳಲ್ಲಿ ಸರ್ಕಾರ ಉಳಿಯುವ ಸಣ್ಣ ಅವಕಾಶವಿದೆ ಎಂಬ ಆಸೆ ಚಿಗುರೊಡೆದಿದೆ. ಹೀಗಾಗಿ, ಮೇಲ್ನೋಟಕ್ಕೆ ಸದ್ಯಕ್ಕೆ ಎದುರಾಗಿರುವ ಬಿಕ್ಕಟ್ಟಿಗೆ ಪರಿಹಾರ ಸಿಗಬಹುದಾ? ಎಂಬ ಆಶಾಭಾವನೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ವಲಯದಲ್ಲಿ ವ್ಯಕ್ತವಾಗಿದೆ.

ಆಯ್ತು ಬನ್ನಿ ಎಂದು ಸಿಟ್ಟಾದ ಸಿದ್ದರಾಮಯ್ಯ: ಸೋಮವಾರ ರಾತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರದ ಅತೃಪ್ತ ಶಾಸಕರನ್ನು ಸಂಪರ್ಕಿಸಿದ್ದರು. ಆ ವೇಳೆ, ಎಲ್ಲ ಸಮಸ್ಯೆ ಬಗೆಹರಿಯುತ್ತದೆ, ನೀವೆಲ್ಲಾ ಬಂದು ಬಿಡಿ ಎಂದು ಹೇಳಿದರು. ಆದರೆ, ಆಗ ನಿಮ್ಮನ್ನು ನಂಬಿದ್ದು ಸಾಕು. ನಮ್ಮನ್ನು ಬಿಟ್ಟು ಬಿಡಿ ಎಂದು ಅವರು ಹೇಳಿದರು. ಇದಕ್ಕೆ ಸಿದ್ದರಾಮಯ್ಯ ಗರಂ ಆಗಿ, ಹೇ, ಆಯ್ತು ಬನ್ನಿ ಎಂದು ಸಿಟ್ಟಾದರು ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸೋನಿಯಾಗಾಂಧಿ ಹಾಗೂ ರಾಹುಲ್‌ಗಾಂಧಿಯವರ ಜತೆಯೂ ಮಾತನಾಡಿದರು. ಕೆಲವು ಶಾಸಕರು ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸುತ್ತಿರುವ ಬಗ್ಗೆಯೂ ತಿಳಿಸಿದರು. ಜೆಡಿಎಸ್‌ ಶಾಸಕರು ನಾಯಕತ್ವ ಬದಲಾವಣೆಗೆ ಒಪ್ಪುತ್ತಿಲ್ಲ ಎಂಬುದನ್ನು ಅವರ ಗಮನಕ್ಕೆ ತಂದರು.

ರಾಹುಲ್‌ಗಾಂಧಿಯವರು, ನಾಯಕತ್ವ ಬದಲಾವಣೆ ವಿಚಾರ ನಮ್ಮ ಪರಿಶೀಲನೆಯಲ್ಲಿ ಇಲ್ಲ. ಆದರೆ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಕಾಂಗ್ರೆಸ್‌ ಸಚಿವರ ಇಲಾಖೆಗಳಲ್ಲಿ ಹಸ್ತಕ್ಷೇಪ ಆಗದಂತೆ ನೋಡಿಕೊಳ್ಳಬೇಕಿತ್ತು. ಪರಿಸ್ಥಿತಿ ಈ ಮಟ್ಟಕ್ಕೆ ಹೋಗುವವರೆಗೂ ಬಿಟ್ಟಿದ್ದು ಸರಿಯಲ್ಲ ಎಂದು ಹೇಳಿದರು. ಆಗ, ಇದರಲ್ಲಿ ಕಾಂಗ್ರೆಸ್‌ ನಾಯಕರ ಪಾತ್ರದ ಬಗ್ಗೆಯೂ ಗೌಡರು ಅವರಿಗೆ ಮನವರಿಕೆ ಮಾಡಿಕೊಟ್ಟರು ಎಂದು ತಿಳಿದು ಬಂದಿದೆ.

ಯಾರ್ಯಾರ ತಲೆದಂಡ?: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ರಚಿಸಿಕೊಂಡಿರುವ ಸೂತ್ರ ಯಶಸ್ವಿಯಾಗಿ, ಸರ್ಕಾರ ಉಳಿದಿದ್ದೇ ಆದರೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ 7 ಶಾಸಕರು ಅತಂತ್ರಗೊಳ್ಳುವ ಸಾಧ್ಯತೆ ಇದೆ. ಪದೇಪದೆ ಸರ್ಕಾರಕ್ಕೆ ಕಾಟ ಕೊಟ್ಟಿದ್ದಕ್ಕೆ ಶಿಕ್ಷೆಯಾಗಿ ಐವರು ಅನರ್ಹತೆಗೆ ಗುರಿಯಾಗಬಹುದು.

ಡಾ.ಜಿ.ಪರಮೆಶ್ವರ್‌ ವಿರುದ್ಧ ರಾಮಲಿಂಗಾರೆಡ್ಡಿ ಸಹಿತ ಬೆಂಗಳೂರು ನಗರದ ಶಾಸಕರು ಆಕ್ರೋಶ ವ್ಯಕ್ತಪಡಿಸಿ ಸೋನಿಯಾಗಾಂಧಿವರೆಗೂ ಆ ದೂರು ಸೌಮ್ಯರೆಡ್ಡಿ ಮೂಲಕ ತಲುಪಿರುವುದರಿಂದ ಈ ಎಪಿಸೋಡ್‌ನ‌ಲ್ಲಿ ಡಾ.ಜಿ.ಪರಮೇಶ್ವರ್‌ ತಲೆದಂಡವೂ ಆಗಬಹುದಾ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆದರೆ, ದಲಿತರಿಗೆ ಉಪ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ ಅಪವಾದ ಬರುವುದರಿಂದ ಬೆಂಗಳೂರು ಉಸ್ತುವಾರಿಯನ್ನು ಬೇರೆಯವರಿಗೆ ನೀಡುವ ಸಾಧ್ಯತೆಯಿದೆ. ಸಚಿವರ ಪೈಕಿ ಕೆ.ಜೆ.ಜಾರ್ಜ್‌, ಕೃಷ್ಣಬೈರೇಗೌಡ ಅವರು ಸಂಪುಟದಿಂದ ಹೊರಗುಳಿಯಬಹುದು ಎಂದು ಹೇಳಲಾಗಿದೆ.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.