ಮತದಾರ ಪಟ್ಟಿ ಮತ್ತಷ್ಟು ಖಚಿತ; 170 ಕ್ಷೇತ್ರಗಳಲ್ಲಿ ಮತ್ತೆ ಪರಿಶೀಲನೆಗೆ ನಿರ್ಧಾರ
Team Udayavani, Feb 1, 2023, 7:15 AM IST
ಬೆಂಗಳೂರು: ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇನ್ನಷ್ಟು ಖಚಿತ ಹಾಗೂ ವಸ್ತುನಿಷ್ಠಗೊಳಿಸಲು ರಾಜ್ಯ ಚುನಾವಣ ಆಯೋಗ ಮುಂದಾಗಿದೆ. ಅದಕ್ಕೆ ಪೂರಕವಾಗಿ ಒಟ್ಟು ಮತದಾರರ ಸಂಖ್ಯೆಯಲ್ಲಿ ಶೇ. 4ಕ್ಕಿಂತ ಹೆಚ್ಚು ಮತದಾರರ ಹೆಸರು ಅಳಿಸಲಾಗಿರುವ (ಡಿಲಿಟ್) ಕ್ಷೇತ್ರಗಳ ಪಟ್ಟಿಯನ್ನು ಇನ್ನೊಮ್ಮೆ ಪರಿಶೀಲಿಸಲು ನಿರ್ಧರಿಸಿದೆ.
ಕೇಂದ್ರ ಚುನಾವಣ ಆಯೋಗದ ನಿರ್ದೇಶನದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಈ ಕ್ರಮಕ್ಕೆ ಮುಂದಾಗಿದ್ದು, ಇನ್ನೊಂದು ವಾರದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದೆ.
ಪರಿಶೀಲನೆ ವೇಳೆ ಲೋಪಗಳು ಕಂಡುಬಂದಲ್ಲಿ ಸರಿಪಡಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ 10 ಸಾವಿರ ಮತದಾರರ ಹೆಸರುಗಳು ಅಳಿಸಿ ಹೋಗಿದ್ದರೆ ಅಂತಹ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸಲು ಕೇಂದ್ರ ಚುನಾವಣ ಆಯೋಗ ನಿರ್ದೇಶನ ನೀಡಿದೆ. ಅದರಂತೆ ರಾಜ್ಯದಲ್ಲಿ 170 ಅಂತಹ ಕ್ಷೇತ್ರಗಳನ್ನು ಗುರುತಿಸಲಾಗಿದ್ದು, ಈ ಕ್ಷೇತ್ರಗಳ ಮತದಾರರ ಪಟ್ಟಿಯ “ಟೇಬಲ್ ಟಾಪ್ ವೆರಿಫಿಕೇಷನ್’ ನಡೆಸಲಾಗುತ್ತದೆ. ಈಗಾಗಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಕಾರ್ಯ ಮುಗಿದಿದ್ದು, ರಾಜ್ಯದ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಇನ್ನೊಂದು ವಾರದಲ್ಲಿ ಪೂರ್ಣವಾಗಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ.
ಪ್ರತೀ ವರ್ಷದ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭ ಸಕಾರಣಗಳಿಗೆ ಮತದಾರರ ಹೆಸರು ಅಳಿಸುವುದು ಸಹಜ. ಒಂದೇ ಫೋಟೋ ಎರಡು ಬಾರಿ ನೋಂದಣಿ ಆಗಿದ್ದರೆ, ಪುನರಾವರ್ತಿತ ನೋಂದಣಿ ಆಗಿದ್ದರೆ, ಮರಣ ಹೊಂದಿದ ಪ್ರಕರಣಗಳು, ಸ್ಥಳಾಂತರ, ಗೈರು ಹಾಜರು ಮತದಾರರ ಹೆಸರಗಳನ್ನು ಅಂತಿಮ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ. ಇದಕ್ಕೆ ತನ್ನದೇ ಆದ ಪ್ರಕ್ರಿಯೆ ಹಾಗೂ ಒಂದೊಂದಕ್ಕೂ ಪ್ರತ್ಯೇಕ ನಮೂನೆಗಳನ್ನು ತುಂಬಬೇಕಾಗುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಈ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತದೆ.
ಒಂದೊಮ್ಮೆ ಈ ಪ್ರಕ್ರಿಯೆಯಲ್ಲಿ ಲೋಪಗಳಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.
ಈಗ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಅದರಲ್ಲಿ 6 ಲಕ್ಷಕ್ಕೂ ಅಧಿಕ ಮತದಾರರನ್ನು ತೆಗೆದು ಹಾಕಲಾಗಿದೆ.
ಶೇ. 4ಕ್ಕಿಂತ ಹೆಚ್ಚು ಅಥವಾ 10 ಸಾವಿರ ಮತದಾರರ ಹೆಸರುಗಳು ಡಿಲೀಟ್ ಆಗಿದ್ದರೆ ಅಂತಹ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಮತ್ತೂಮ್ಮೆ ಪರಿಶೀಲಿಸಲಾಗುತ್ತಿದೆ. ಲೋಪಗಳಾಗಿದ್ದರೆ ಸರಿಪಡಿಸಲಾಗುತ್ತದೆ.
-ಮನೋಜ್ ಕುಮಾರ್ ಮೀನಾ, ರಾಜ್ಯ ಮುಖ್ಯ ಚುನಾವಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.