Jaipur: ಪತ್ನಿಯನ್ನೇ ಬೆತ್ತಲೆ ಮೆರವಣಿಗೆ ಮಾಡಿದ!
Team Udayavani, Sep 2, 2023, 9:39 PM IST
ಜೈಪುರ: ಬುಡಕಟ್ಟು ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಗ್ರಾಮದಲ್ಲಿ ಸಾರ್ವಜನಿಕವಾಗಿ ಮೆರೆವಣಿಗೆ ನಡೆಸಿರುವ ಅಮಾನುಷ ಘಟನೆ ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ವರದಿಯಾಗಿದೆ. ವಿಪರ್ಯಾಸವೆಂದರೆ ಈ ಕೃತ್ಯವನ್ನು ನಡೆಸಿರುವುದೇ ಮಹಿಳೆಯ ಪತಿ! ಗುರುವಾರ ರಾತ್ರಿ 21 ವರ್ಷದ ಯುವತಿಯನ್ನು ಆಕೆಯ ಪತಿ ವಿಪರೀತವಾಗಿ ಥಳಿಸಿದ್ದಲ್ಲದೇ, ಆಕೆಯನ್ನು ವಿವಸ್ತ್ರಗೊಳಿಸಿ ಮನೆಯಿಂದ ಹೊರದೂಡಿ, ಮೆರೆವಣಿಗೆ ನಡೆಸಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಅಂಗಲಾಚಿದ್ದಾರೆ, ಅದನ್ನೂ ವಿಡಿಯೊ ಮಾಡಿ, ಜಾಲತಾಣದಲ್ಲಿ ಹರಿಬಿಡಲಾಗಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ಸಿಎಂ ಅಶೋಕ್ ಗೆಹಲೋತ್ ಈ ಬಗ್ಗೆ ಕಠಿಣ ಕ್ರಮಕ್ಕೆ ಆದೇಶಿಸಿದ್ದರು. ನಂತರ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿ 6 ತಂಡಗಳನ್ನು ರಚಿಸಿ, ಮಹಿಳೆಯ ಪತಿ ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ.
ಕಾರಣವೇನು?: ಮದುವೆಯಾಗಿದ್ದರೂ ಮಹಿಳೆ ಬೇರೆ ಅವರೊಂದಿಗೆ ವಿವಾಹೇತರ ಸಂಬಂಧದಲ್ಲಿದ್ದು, ಆ ವ್ಯಕ್ತಿಯೊಂದಿಗೇ ವಾಸವಿದ್ದರಂತೆ. ಈ ಹಿನ್ನೆಲೆಯಲ್ಲಿ ಮಹಿಳೆಯ ಪತಿ, ಮಾವ ಸೇರಿದಂತೆ ಇತರರು ಸೇರಿ ಆಕೆಯನ್ನು ಅಪಹರಿಸಿ, ತಮ್ಮ ಊರಿಗೆ ಎಳೆದುತಂದು ಕೃತ್ಯ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.