Theerthahalli: ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ ದಂಧೆ!
Team Udayavani, Jun 22, 2023, 2:27 PM IST
ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ.
ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಜೂ.21ರ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ.
ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು, ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಮಹಿಳೆಯರು ಬೆಂಗಳೂರು ಮತ್ತು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ರಾತ್ರೋ ರಾತ್ರಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.