ಮುಂಡಗೋಡ: ವೈನ್ ಶಾಪ್‌ನಲ್ಲಿ ಕಳ್ಳತನ; ದೂರು ದಾಖಲು
Team Udayavani, Aug 19, 2021, 8:33 PM IST
ಮುಂಡಗೋಡ: ಕಳ್ಳರು ವೈನ್ ಶಾಪ್‌ನ ಮೇಲ್ಛಾವಾಣಿ ಕೊರೆದು ಒಳಗೆ ಪ್ರವೇಶಿಸಿ ಬಾಕ್ಸ್‌ನಲ್ಲಿದ್ದ 1,93,500 ರೂ. ನಗದನ್ನು ಕಳ್ಳತನ ಮಾಡಿಕೊಂಡು ಹೋದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ತೃಪ್ತಿ ವೈನ್ ಶಾಪ್ ಕಳ್ಳತನವಾಗಿರುವುದು. ಈ ಶಾಪ್ ಪಕ್ಕದ ಬಿಲ್ಡಂಗ್ ಮೂಲಕ ಬಂದ ಕಳ್ಳರು ಮೊದಲಿಗೆ ವೈನ್‌ಶಾಪ್‌ನ ಮೇಲ್ಮಹಡಿ ತಗಡಿನ ಶೀಟ್ ತೆಗೆದಿದ್ದಾರೆ. ನಂತರ ರೂಮಿನ ಪಾಟಿಕಲ್ಲ ಒಡೆದು ಅದರ ಕೆಳಗೆ ಇದ್ದ ಕಟ್ಟಗಿಯ ಹಲಗೆಯನ್ನು ಮುರಿದು ಒಳಗೆ ಇಳಿದು ಪ್ಲಾಸ್ಟಿಕ್ ಬಾಕ್ಸ್‌ನಲ್ಲಿ ವ್ಯಾಪಾರ ಮಾಡಿ ಇಟ್ಟಿದ್ದ 1,93,500 ರೂ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಈರಜ್ಜ ಮಳವಳ್ಳಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಿಎಸೈ ಎನ್.ಡಿ. ಜಕ್ಕಣ್ಣವರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ:ಕನ್ನಡೇತರರಿಗೆ ಕನ್ನಡ ಕಲಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ
ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಮಾಹಿತಿ ಸಂಗ್ರಹಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. ಕಳ್ಳರು ಪ್ಲಾಸ್ಟಿಕ್ ಬಾಕ್ಸ್‌ನಲ್ಲಿದ್ದ ನಗದನ್ನು ಮಾತ್ರ ಕಳ್ಳತನ ಮಾಡಿದ್ದು ವೈನ್ ಶಾಪ್‌ನಲ್ಲಿರುವ ಯಾವೊಂದು ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೊಗಿಲ್ಲ. ಆದರೆ ಶಾಪ್‌ನಲ್ಲಿದ್ದ ಸಿ.ಸಿ ಕ್ಯಾಮೆರಾದಲ್ಲಿ ಒಬ್ಬ ಕಳ್ಳ ಮಾತ್ರ ಮೇಲ್ಮಹಡಿಯಿಂದ ಇಳಿದು ಕಳ್ಳತನ ಮಾಡಿರುವುದು ಕಂಡುಬಂದಿದೆ. ಪೊಲೀಸರು ಅತಿ ಶೀಘ್ರದಲ್ಲಿ ಕಳ್ಳರನ್ನು ಪತ್ತೆಹಚ್ಚುವ ವಿಶ್ವಾಸದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.