ಕದಡಿದ ಕಾಂಗ್ರೆಸ್ ವಾತಾವರಣ: “ಗುಂಪುಗಾರಿಕೆ” ರಾಜಕಾರಣದ ಬೀಜ ಮೊಳಕೆಯೊಡೆಯುತ್ತಿರುವ ಆತಂಕ
Team Udayavani, Sep 21, 2023, 11:24 PM IST
ಬೆಂಗಳೂರು: ವಿಪಕ್ಷಗಳ ಕೈಗೆಟುಕದಷ್ಟು ಭರ್ಜರಿ ಸ್ಥಾನಗಳೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರಕಾರ ಇತ್ತೀಚೆಗಷ್ಟೇ ನೂರು ದಿನಗಳನ್ನು ಪೂರೈಸಿದೆ. ಆದರೆ ಈ ಸಂಭ್ರಮದ ಹೊತ್ತಲ್ಲೇ ಸಚಿವರು-ಶಾಸಕರು ನೀಡುತ್ತಿರುವ ಸಿಎಂ-ಡಿಸಿಎಂ ಹುದ್ದೆ, ಅಧಿಕಾರ ಹಂಚಿಕೆ ಮುಂತಾದ ಹೇಳಿಕೆಗಳು ಕಾಂಗ್ರೆಸ್ ವಾತಾವರಣವನ್ನು ಕದಡಿದಂತಾಗಿದೆ.
ಸುಭದ್ರ ಸರಕಾರದ ಸಂಕಲ್ಪ ದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ನಲ್ಲಿ ಆರಂಭದಿಂದಲೂ ಒಡಕಿನ ಮಾತುಗಳೇ ಹೆಚ್ಚಾಗಿವೆ. ಆಡಳಿತ ಯಂತ್ರವನ್ನು ಸರಿದಾರಿಗೆ ತರುವುದು, ಗ್ಯಾರಂಟಿಗಳ ಜಾರಿ ಹೊರತಾಗಿಯೂ ಇತರ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯವಿರುವ ಸಂಪನ್ಮೂಲ ಸಂಗ್ರಹ ಮತ್ತಿತರ ಆದ್ಯತಾ ವಲಯಗಳ ಕಡೆ ಗಮನಹರಿಸಬೇಕಿದ್ದ ನಾಯಕರು ಪೈಪೋಟಿಗೆ ಬಿದ್ದಂತೆ ರಾಜಕೀಯ ಹೇಳಿಕೆಗಳಿಗೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದಾರೆ. ಇದರ ಹಿಂದಿನ/ಮುಂದಿನ ಉದ್ದೇಶಗಳು ಮಾತ್ರ ನಿಗೂಢವಾಗಿವೆ. ಕಾಣದ ಕೈಗಳ ಪ್ರಭಾವವಿದೆಯೇ ಎಂಬ ಅನುಮಾನವೂ ಮೂಡುತ್ತಿದೆ. ಜತೆಗೆ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ (ಬಣ) ರಾಜಕಾರಣದ ಬೀಜ ಮೊಳಕೆ ಒಡೆಯುತ್ತಿದೆಯೇ ಎಂಬ ಪ್ರಶ್ನೆಯೂ ಮೂಡುತ್ತಿದೆ.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ವೃದ್ಧಿಸಿದ್ದ ಸರಕಾರ ಹಾಗೂ ಪಕ್ಷದ ವರ್ಚಸ್ಸು ಸಿಎಂ-ಡಿಸಿಎಂ ನಡುವೆ ಆಗಿದೆ ಎನ್ನಲಾದ 50:50 ಅಧಿಕಾರ ಹಂಚಿಕೆ ಸೂತ್ರ, ದಲಿತ ಸಿಎಂ ಕೂಗು, ಮೂರು ಡಿಸಿಎಂ ಹುದ್ದೆಗಳ ಸೃಷ್ಟಿ, ವಿಧಾನ ಪರಿಷತ್ತಿನ ವಿಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಕುರಿತು ಪರೋಕ್ಷವಾಗಿ ನೀಡಿದ್ದ ಹೇಳಿಕೆ ಜತೆಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 2 ಡಿಸಿಎಂ ಬೇಡಿಕೆ ಹಾಗೂ ಲೋಕಸಭಾ ಚುನಾವಣೆ ಬಳಿಕ ಸರಕಾರ ಇರುತ್ತದೋ ಇಲ್ಲವೋ ಎಂಬ ಮಾತುಗಳಿಂದ ಮತ್ತಷ್ಟು ಗೊಂದಲ ಮೂಡಿದೆ. ಇದು ಹೈಕಮಾಂಡ್‌ಗೂ ತಲೆನೋವು ಉಂಟು ಮಾಡಿದೆ.
ಕಾಂಗ್ರೆಸ್ ಪಾಲಿಗೆ ಕಬ್ಬಿಣದ ಕಡಲೆ
ಡಿಸಿಎಂ ಹುದ್ದೆ ಸೃಷ್ಟಿ ಕಾಂಗ್ರೆಸ್ ಪಾಲಿಗೆ ಅಷ್ಟೊಂದು ಸುಲಭವಾಗಿಲ್ಲ. ದಲಿತ ಸಮುದಾಯದಿಂದ ಡಾ| ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಲಿಂಗಾಯತ ಸಮುದಾಯದಿಂದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ವಾಲ್ಮೀಕಿ ಸಮಾಜದಿಂದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಮುಸ್ಲಿಂ ಸಮಾಜದಿಂದಲೂ ಹಲವರು ಸ್ಪರ್ಧೆಯಲ್ಲಿದ್ದಾರೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದು ಕಾಂಗ್ರೆಸ್ ಪಾಲಿಗೆ ಕಬ್ಬಿಣದ ಕಡಲೆಯಾಗಿದೆ. ಹೀಗಾಗಿ ಈ ಹಂತದಲ್ಲಿ ಪಕ್ಷ ಹಾಗೂ ಸರಕಾರದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಈ ರೀತಿ ಗೊಂದಲಕಾರಿ ಹೇಳಿಕೆಗಳಿಗೆ ಕಡಿವಾಣ ಹಾಕದಿದ್ದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗಲಿದ್ದು, ಭವಿಷ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಪೆಟ್ಟು ತಿನ್ನಬೇಕಾಗುತ್ತದೆ ಎಂಬ ಆತಂಕ ಮತ್ತೂಂದು ವರ್ಗವನ್ನು ಕಾಡುತ್ತಿದೆ.
ಎಂ.ಎನ್.ಗುರುಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.