ಮಕ್ಕಳಿಗಿಲ್ಲ 3ನೇ ಅಲೆ ಆತಂಕ : ಏಮ್ಸ್, WHO ಅಧ್ಯಯನದಲ್ಲಿ ಉಲ್ಲೇಖ
Team Udayavani, Jun 18, 2021, 7:15 AM IST
ಹೊಸದಿಲ್ಲಿ: ಅಕ್ಟೋಬರ್-ನವೆಂಬರ್ ದೇಶಕ್ಕೆ ಕೊರೊನಾದ ಮೂರನೇ ಅಲೆ ಅಪ್ಪಳಿಸಲಿದೆ ಎಂದು ವೈದ್ಯಕೀಯ ಸಮುದಾಯ ಈಗಾಗಲೇ ಎಚ್ಚರಿಕೆ ನೀಡಿದೆ. ಆದರೆ, ಅದು ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಾಧಿಸುವ ಸಾಧ್ಯತೆ ಇಲ್ಲವೆಂದು ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮತ್ತು ಡಬ್ಯುಎಚ್‌ಒ ನಡೆಸಿದ ಸಮೀಕ್ಷೆಯಲ್ಲಿ ದೃಢಪಟ್ಟಿದೆ.
ವಯಸ್ಕರಿಗೆ ಹೋಲಿಕೆ ಮಾಡಿದರೆ, ಮಕ್ಕಳಲ್ಲಿ ಸೀರೋ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿರುತ್ತದೆ. ಐದು ರಾಜ್ಯಗಳಲ್ಲಿನ 10 ಸಾವಿರ ಮಾದರಿಗಳ ಪೈಕಿ 4,500 ಮಾದರಿಗಳ ಅಧ್ಯಯನ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಹೊಸದಿಲ್ಲಿ ಏಮ್ಸ್‌ನ ಸಮುದಾಯ ವೈದ್ಯಕೀಯ ವಿಭಾಗದ ಡಾ|ಪುನೀತ್ ಮಿಶ್ರಾ ಹೇಳಿದ್ದಾರೆ.
ದಕ್ಷಿಣ ದಿಲ್ಲಿಯ ಕಾಲನಿಗಳಲ್ಲಿ ಸೀರೋ ಪಾಸಿಟಿವಿಟಿ ಪ್ರಮಾಣ ಶೇ. 74.7 ಇದೆ. 2ನೇ ಅಲೆ ಬರುವುದಕ್ಕಿಂತ ಮೊದಲು 18 ವರ್ಷಕ್ಕಿಂತ ಕೆಳಗಿನವರಲ್ಲಿ ಶೇ.74. 8ರಷ್ಟು ಸೀರೋ ಪಾಸಿಟಿವಿಟಿ ದಾಖಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ಅಗರ್ತಲಾದ ಗ್ರಾಮೀಣ ಪ್ರದೇಶದಲ್ಲಿ ಕನಿಷ್ಠ ಅಂದರೆ, ಶೇ.51.9 ಸೀರೋ ಪಾಸಿಟಿವಿಟಿ ದಾಖಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.
4 ವಾರಗಳಲ್ಲಿ 3ನೇ ಅಲೆ?: ಮುಂದಿನ 2ರಿಂದ 4 ವಾರಗಳ ಅವಧಿಯಲ್ಲಿ ಮಹಾರಾಷ್ಟ್ರಕ್ಕೆ ಕೊರೊನಾ ಸೋಂಕಿನ 3ನೇ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆ ರಾಜ್ಯದ ಕೊರೊನಾ ಕಾರ್ಯಪಡೆ ಎಚ್ಚರಿಕೆ ನೀಡಿದೆ. ಆದರೆ ಮಕ್ಕಳಿಗೆ ಹೆಚ್ಚಿನ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲವೆಂದು ಅದು ಪ್ರತಿಪಾದಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜತೆಗೆ ನಡೆಸಿದ ಸಭೆ ವೇಳೆ ಈ ಅಂಶ ಪ್ರಸ್ತಾವವಾಗಿದೆ. ಎರಡನೇ ಅಲೆಯಲ್ಲಿ ದೃಢಪಟ್ಟ ಕೇಸುಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು 3ನೇ ಅಲೆಯಲ್ಲಿ ಹೆಚ್ಚಾಗಲಿದೆ. ಒಟ್ಟಾರೆ ಪ್ರಕರಣಗಳ ಪೈಕಿ ಶೇ.10ರಷ್ಟು ಮಕ್ಕಳಿಗೆ ದೃಢಪಡಲಿದೆ ಎಂದು ಕಾರ್ಯಪಡೆಯ ಡಾ| ಶಶಾಂಕ್ ಜೋಶಿ ಹೇಳಿದ್ದಾರೆ.
ಸಕ್ರಿಯ ಸೋಂಕು ಇಳಿಕೆ: ದೇಶದಲ್ಲಿ ಬುಧವಾರದಿಂದ ಗುರುವಾರದ ಅವಧಿಯಲ್ಲಿ 67,208 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ 2,330 ಮಂದಿ ಸೋಂಕಿನಿಂದಾಗಿ ಅಸುನೀಗಿದ್ದಾರೆ. ಸಕ್ರಿಯ ಸೋಂಕು ಸಂಖ್ಯೆ 8,26,740ಕ್ಕೆ ಇಳಿಕೆಯಾಗಿದೆ. ಇದು 71 ದಿನಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕನಿಷ್ಠದ್ದು. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 3.48ಕ್ಕೆ ಇಳಿಕೆಯಾಗಿದೆ. 24 ಗಂಟೆಗಳಲ್ಲಿ 1,03,570 ಮಂದಿ ಚೇತರಿಸಿಕೊಂಡಿದ್ದಾರೆ.
ಲಸಿಕೆ ಹಾಕಿಸಿಕೊಂಡ ಸೋನಿಯಾ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೊವಿಶೀಲ್ಡ್‌ನ 2 ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಮೊದಲ ಡೋಸ್ ಪಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ಸ್ಪಷ್ಟನೆ ನೀಡಿದೆ. ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರ ಸಲಹೆ ಮೇರೆಗೆ ಅವರು ಶೀಘ್ರವೇ ಲಸಿಕೆ ಪಡೆದುಕೊಳ್ಳಲಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುಜೇìವಾಲಾ ಹೇಳಿದ್ದಾರೆ. ರಾಹುಲ್ ಅವರಿಗೆ ಎ.18ರಂದು ನಡೆಸಲಾಗಿದ್ದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು ಎಂದಿದ್ದಾರೆ. ಬಿಜೆಪಿಯ ಪ್ರಮುಖ ನಾಯಕರು ಸೋನಿಯಾ ಗಾಂಧಿ ಮತ್ತು ಅವರ ಕುಟುಂಬ ಸದಸ್ಯರು ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರವಾಗಿ ಈ ಸ್ಪಷ್ಟನೆ ನೀಡಲಾಗಿದೆ.
ಬಯಲಾಜಿಕಲ್ -ಇ ಶೇ. 90ರಷ್ಟು ಪರಿಣಾಮಕಾರಿ
ಹೈದರಾಬಾದ್‌ನ ಬಯಲಾಜಿಕಲ್ ಇ ಸಂಸ್ಥೆಯ ಕೊರ್ಬೆವಾಕ್ಸ್ ಲಸಿಕೆ ಕೊರೊನಾ ವಿರುದ್ಧ ಶೇ.90ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಕೇಂದ್ರ ಸರಕಾರದ ಕೊರೊನಾ ಟಾಸ್ಕ್ಫೋರ್ಸ್‌ನ ಮುಖ್ಯಸ್ಥ ಎನ್.ಕೆ. ಅರೋರಾ ತಿಳಿಸಿದ್ದಾರೆ. ಸೋಂಕಿನ ವಿರುದ್ಧದ ಯುದ್ಧ ದಲ್ಲಿ ಇದು ಹೊಸ ಅಧ್ಯಾಯವನ್ನೇ ಆರಂಭಿಸಲಿದೆ ಎಂದಿದ್ದಾರೆ. ಸದ್ಯ ಲಸಿಕೆಯ 3ನೇ ಹಂತದ ಪ್ರಯೋಗ ನಡೆಯುತ್ತಿದೆ. ಅಕ್ಟೋಬರ್‌ನಲ್ಲಿ ಅದರ ಫಲಿತಾಂಶಗಳು ಲಭ್ಯವಾಗಲಿವೆ ಎಂದಿದ್ದಾರೆ.
ಸೆಪ್ಟಂಬರ್‌ನಲ್ಲಿ ಮತ್ತೂಂದು?: ಪುಣೆಯ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮಕ್ಕಳಾಗಿ ಇರುವ ನೊವಾಕ್ಸ್ ಲಸಿಕೆಯ ಪ್ರಯೋಗ ಜುಲೈಯಿಂದ ಆರಂಭಿಸುವ ಸಾಧ್ಯತೆ ಇದೆ. ಪರೀಕ್ಷೆಯ ಪ್ರಯೋಗ ಮುಕ್ತಾಯಗೊಳಿಸಿ ಸೆಪ್ಟಂಬರ್‌ನಲ್ಲಿಯೇ ಅದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದರ ಜತೆಗೆ ಅಮೆರಿಕದ ನೊವಾಕ್ಸ್ ಸಂಸ್ಥೆಯ ಲಸಿಕೆಯ ಮಾದರಿಯನ್ನು ಆಧಾರವಾಗಿಸಿಕೊಂಡು ಕೊವಾವ್ಯಾಕ್ಸ್ ಅನ್ನೂ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.