Thirthahalli; ದೇವಂಗಿಯಲ್ಲಿ ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು!
ಪ್ರಸಿದ್ಧ ಯಕ್ಷಗಾನ ಕಲಾವಿದನ ತಂದೆ
Team Udayavani, Jul 31, 2024, 1:08 PM IST
ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಮಂಗಳವಾರ ಉಂಟೂರು ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.
ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ. ಮೃತರು ಪತ್ನಿ, ಒಂದು ಹೆಣ್ಣು ಮತ್ತು ಪುತ್ರ ಪ್ರಸನ್ನ ಅವರನ್ನು ಅಗಲಿದ್ದಾರೆ.
ತುಂಗಾ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಇದೆ ನದಿಯ ವ್ಯಾಪ್ತಿಗೆ ಬರುವ ಉಂಟೂರು ಹಳ್ಳದಲ್ಲೂ ಭಾರೀ ನೀರು ಹರಿಯುತ್ತಿದ್ದು ಮಂಗಳವಾರ ಸಂಜೆ ದೇವಂಗಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಬರುವಾಗ ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಮನೆಯವರೆಲ್ಲ ರಾತ್ರಿ ಇಡೀ ಹುಡುಕಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಸುರಿದ ಮಳೆಗೆ ಹಳ್ಳದಲ್ಲಿ ನೆರೆ ಬಂದಿತ್ತು. ಕಾಲು ಜಾರಿ ಹಳ್ಳಕ್ಕೆ ಬಿದ್ದು ಕೊಚ್ಚಿ ಹೋಗಿದ್ದು ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೈಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಶಾಲತಾ, ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ಆರ್ ಐ ಸುಗುಣೇಶ್, ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಯಕ್ಷಗಾನ ಕಲಾವಿದರಾದ ಬಿ ಗಣಪತಿ ಸೇರಿ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.