ಈ ಚುನಾವಣೆ ಕರ್ನಾಟಕ ಮುಂದಿನ ಭವಿಷ್ಯದ ಚುನಾವಣೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ J. P. Nadda


Team Udayavani, Apr 28, 2023, 3:31 PM IST

9-chikmagaluru

ಚಿಕ್ಕಮಗಳೂರು/ಕಳಸ: ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡರೆ ಒಳ್ಳೆ ಫಲಿತಾಂಶ ಬರಲಿದೆ. ಈ ಚುನಾವಣೆ ಶೋಭಾ ಕರಂದ್ಲಾಜೆ, ದೀಪಕ್ ದೊಡ್ಡಯ್ಯ ಚುನಾವಣೆಯಲ್ಲ. ಕರ್ನಾಟಕ ಅಭಿವೃದ್ಧಿಯ ಚುನಾವಣೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಶುಕ್ರವಾರ ಜಿಲ್ಲೆಯ ಮೂಡಿಗೆರೆ ತಾಲೂಕು ಕಳಸ ಪಟ್ಟಣದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಈ ಚುನಾವಣೆ ಕರ್ನಾಟಕ ಮುಂದಿನ ಭವಿಷ್ಯದ ಚುನಾವಣೆ. ಸರಿಯಾದ ಬಟನ್ ಒತ್ತಿದರೇ ಸರಿಯಾದ ಸರ್ಕಾರ ಬರುತ್ತದೆ. ಇಲ್ಲದಿದ್ದರೇ ಭ್ರಷ್ಟಚಾರದ ಸರ್ಕಾರ ಬರುತ್ತದೆ. ಆದ್ದರಿಂದ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಮೀಸಲಾತಿಯನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಾಪಸ್ಸು ಪಡೆಯುತ್ತೇವೆ ಎನ್ನುತ್ತಾರೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿದ್ದರೂ. ಸಿದ್ದರಾಮಯ್ಯ ಅವರು ಅವರ ಪಿಎಫ್‌ಐ ಕಾರ್ಯ ಕರ್ತರ ಮೇಲಿದ್ದ ಪ್ರಕರಣಗಳನ್ನು ವಾಪಸ್ಸು ಪಡೆದರು ಎಂದರು.

2018ರಲ್ಲಿ ಪೊಲೀಸ್ ನೇಮಕಾತಿ, ಶಿಕ್ಷಕರ ನೇಮಕಾತಿ, ಅರ್ಕಾವತಿ ಹಗರಣ, ಪ್ಲೇವೋವರ್ ಸ್ಕಾö್ಯಮ್, ಬಿಬಿಎಂಪಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಗರಣ ನಡೆದವು. ಸಿದ್ದರಾಮ ಯ್ಯ ಅವಧಿಯಲ್ಲಿ ಇಷ್ಟೇಲ್ಲ ಭ್ರಷ್ಟಚಾರ ನಡೆದಿದ್ದರೂ ಭ್ರಷ್ಟಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾನು ತಪ್ಪು ಮಾಡಿಲ್ಲ, ಸತ್ಯವಾಗಿದ್ದೇನೆ ಎಂದು ಹೇಳಲಿ. ಅವರ ಮೇಲೆ ಪ್ರಕರಣಗಳಿಲ್ಲವೇ, ಜಾಮೀನಿನ ಮೇಲೆ ಹೊರಗೆ ಇಲ್ಲವೇ ಎಂದು ಪ್ರಶ್ನಿಸಿದ ಅವರು, ಯಡಿಯೂ ರಪ್ಪ ಅವರು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾದರೂ. ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣ ನಿರ್ಮಾಣ ನಿಲ್ಲಿಸಲು ಮುಂದಾಗಿದ್ದರು ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಲಿಂಗಾಯತರಿಗೆ ಶೇ.೨ರಷ್ಟು ಮೀಸಲಾತಿ ನೀಡಿ ದ್ದೇವೆ. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮೀಸಲಾತಿಯನ್ನು ಹಿಂಪಡೆಯುತ್ತೇವೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಮುಖಂಡರಿಗೆ ಲಿಂಗಾಯತರ ಬಗ್ಗೆ ಚಿಂತೆಯಾಗಿದೆ. ನಿಜಲಿಂಗಪ್ಪ, ವೀರೆಂದು ಪಾಟೀಲ್‌ಗೆ ಕಾಂಗ್ರೆಸ್ ಏನು ಮಾಡಿದೆ ಗೊತ್ತಿಲ್ಲ, ಆದರೆ, ಸಿದ್ದರಾಮಯ್ಯ ಕಾಲದಲ್ಲಿ ರಾಜ್ಯದಲ್ಲಿ ದಂಗೆ ಯಾಗಿದೆ ಎಂದು ದೂರಿದರು.

ಯಡಿಯೂರಪ್ಪ ಅವರು ಪಿಎಫ್ ಸಂಘಟನೆಯ ಮೇಲೆ 175 ಪ್ರಕರಣ ಹಾಕಿಸಿದ್ದರು. ಸಿದ್ದರಾಮಯ್ಯ ಪ್ರಕರಣಗಳನ್ನು ಹಿಂಪಡೆದರು. ಇದಕ್ಕೆಲ್ಲ ಸಿದ್ದರಾಮಯ್ಯ ಅವರು ಉತ್ತರ ನೀಡಬೇಕಿದೆ. ಕಾಂಗ್ರೆಸ್ ಅಧಿ ಕಾರಕ್ಕೆ ಬಂದರೇ ಎಲ್ಲವನ್ನೂ ವಾಪಸ್ ಪಡೆಯುತ್ತಾರೆ ಎಂದು ಗುಡುಗಿದರು.

ಸಭೆಯಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಕೇಂದ್ರ ಸಚಿವೆ ಶೋಭಾ ಕರಂದ್ಲಜೆ, ಬಿಜೆಪಿ ಮೂಡಿಗೆರೆ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

complaint

Kundapura: ಹಲ್ಲೆ, ಗಾಯ; ದೂರು ದಾಖಲು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.