SSLC ಪರೀಕ್ಷೆಗೆ ಈ ಬಾರಿಯೂ 50:30:20 ಸೂತ್ರ

ಈ ಬಾರಿ ಪರೀಕ್ಷೆ ತುಸು ಕಠಿನ ಮತ್ತೆ ಕೊರೊನಾಪೂರ್ವದ ಹಳೆಯ ಮಾದರಿ ಪಾಲನೆಗೆ ಸಿದ್ಧತೆ

Team Udayavani, Feb 5, 2024, 12:39 AM IST

exam

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಕಾಠಿನ್ಯ ಮಟ್ಟವನ್ನು 50:30:20 ಮಾದರಿಯಲ್ಲಿ ಮುಂದುವರಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ತೀರ್ಮಾನಿಸಿದೆ. ಈ ವರ್ಷ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳ ಅವಕಾಶವಿದ್ದು, ಈ ಮೂರು ಪರೀಕ್ಷೆಗಳಲ್ಲಿಯೂ ಇದೇ ಮಾದರಿ ಅನುಸರಣೆಯಾಗಲಿದೆ.
ಶೇ. 50ರಷ್ಟು ಸುಲಭ, ಶೇ. 30ರಷ್ಟು ಸಾಧಾರಣ ಮತ್ತು ಶೇ. 20ರಷ್ಟು ಕಠಿನ ಅಥವಾ ಅನ್ವಯಿಕ ಪ್ರಶ್ನೆಗಳು 2023-24ರ ಸಾಲಿನ ಎಸೆಸೆಲ್ಸಿ ಪ್ರಶ್ನೆಪತ್ರಿಕೆಗಳಲ್ಲಿ ಇರಲಿವೆ.

ಈ ಪೈಕಿ ಶೇ. 30 ಅಂಕಗಳು ಸಾಧಾರಣ ಕಠಿನ ಮತ್ತು ಸಾಧಾರಣ ಸುಲಭ ಎಂದು ಮತ್ತೆ ವಿಭಜನೆಗೊಳ್ಳುವುದರಿಂದ ಪರೀಕ್ಷೆಯ ಕಾಠಿನ್ಯ ವ್ಯತ್ಯಾಸಗೊಳ್ಳುತ್ತದೆ ಎಂದು ಮಂಡಳಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆ ಕೋವಿಡ್‌ ಅವಧಿಯಲ್ಲಿ ಇದ್ದಷ್ಟು ಸುಲಭವಾಗಿ ಈ ಬಾರಿ ಪರೀಕ್ಷೆ ಇರಲಾರದು.

ಕೋವಿಡ್‌ ಅವಧಿಯಲ್ಲಿ ಹೇಗಿತ್ತು?
ಕೋವಿಡ್‌ ಅವಧಿಯ 2020-21 ಮತ್ತು 2021-22ರ ಸಾಲಿನಲ್ಲಿ ಕಠಿನ ಪ್ರಶ್ನೆ ಅಥವಾ ಅನ್ವಯಿಕ ಉತ್ತರ ಬಯಸುವ ಪ್ರಶ್ನೆಗಳನ್ನು ಕಡಿಮೆಗೊಳಿಸಿ 60:30:10 ಕಾಠಿನ್ಯದ ಮಾದರಿ ಅನುಸರಿಸಲಾಗಿತ್ತು. 2022-23ರ ಸಾಲಿನಲ್ಲಿ 50:30:20ರ ಮಾದರಿಯನ್ನು ಪ್ರಸ್ತಾವಿಸಿದ್ದರೂ ಪೂರ್ಣ ರೂಪದಲ್ಲಿ ಜಾರಿಗೆ ಬಂದಿರಲಿಲ್ಲ.

ಭಾಷೆಗಳು, ಮುಖ್ಯ ವಿಷಯ ಪರೀಕ್ಷೆಗಳಲ್ಲಿ ಇದೇ ಮಾದರಿಯನ್ನು ಅನುಸರಿಸಲು ಮಂಡಳಿ ತೀರ್ಮಾನಿಸಿದೆ.

ಸಾಧಕಗಳೇನು?
- ಈ ವರ್ಷ 3 ಪರೀಕ್ಷೆಗೆ ಅವಕಾಶ ಇರುವುದ ರಿಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ನಿರ್ಲಕ್ಷಿಸುವ ಸಾಧ್ಯತೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯ ಕಾಠಿನ್ಯ ಹೆಚ್ಚಿಸುವುದರಿಂದ ವಿದ್ಯಾರ್ಥಿಗಳು ಗಂಭೀರವಾಗಿ ಅಧ್ಯಯನ ಶೀಲರಾಗಬಹುದು.
- ಉನ್ನತ ಶಿಕ್ಷಣದಲ್ಲಿ ಅನ್ವಯಕ್ಕೆ ಹೆಚ್ಚು ಮನ್ನಣೆ ಸಿಗುವುದರಿಂದ ಅನ್ವಯ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಅನ್ವಯಿಕ ಮನೋಭಾವಕ್ಕೆ ಕಾರಣವಾಗಬಲ್ಲವು.
- ಮೂರು ಪರೀಕ್ಷೆಗಳಲ್ಲಿಯೂ ಏಕರೂಪದ ಮಾದರಿ ಅನುಸರಿಸುವುದರಿಂದ ವಿದ್ಯಾರ್ಥಿಗಳು ಪ್ರತಿ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಅನಿವಾರ್ಯ.

ಬಾಧಕ?
– ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ಬರೆಯುವ ಅವಕಾಶ ಇರುವುದರಿಂದ ಮೊದಲ ಪರೀಕ್ಷೆಯತ್ತ ನಿರ್ಲಕ್ಷ್ಯ
– ಮೊದಲ ಪರೀಕ್ಷೆಯಲ್ಲಿ ಚೆನ್ನಾಗಿ ಬರೆಯದ ವಿದ್ಯಾರ್ಥಿಗೆ ಹೆಚ್ಚುವ ಒತ್ತಡ
– 50:30:20 ಮಾದರಿ ಅನುಸರಿಸಿದಾಗ ಕಡಿಮೆಯಾಗುವ ಒಟ್ಟು ಫ‌ಲಿತಾಂಶ

ಮಂಡಳಿ ಬಿಡುಗಡೆ ಮಾಡಿರುವ ಮಾದರಿ ಪ್ರಶ್ನೆ ಪತ್ರಿಕೆಯಲ್ಲಿಯೂ ಇದೇ ಮಾದರಿಯನ್ನು ಪಾಲಿಸಲಾಗಿದೆ.

ರಾಜ್ಯದಲ್ಲಿ ಸಾಮಾನ್ಯವಾಗಿ ಎಸೆಸೆಲ್ಸಿ ಪರೀಕ್ಷೆಯನ್ನು 50:30:20ರ ಮಾದರಿಯಲ್ಲಿಯೇ ನಡೆಸಲಾಗುತ್ತಿತ್ತು. ಹಿಂದಿನ ವರ್ಷ ಇದೇ ಮಾದರಿ ಅನುಸರಿಸಿದಾಗ ಕೋವಿಡ್‌ ಅವಧಿಗಿಂತ ಕಡಿಮೆ ಫ‌ಲಿತಾಂಶ ದಾಖಲಾಗಿತ್ತು.

ಆದರೆ ಈ ಸಲ ಮೊದಲ ಬಾರಿಗೆ ಎಸೆಸೆಲ್ಸಿಯಲ್ಲಿ ಮೂರು ವಾರ್ಷಿಕ ಪರೀಕ್ಷೆಗಳು ನಡೆಯಲಿವೆ ಮತ್ತು ಮೊದಲ ಬಾರಿಗೆ 80 ಅಂಕಗಳಿಗೆ ಪರೀಕ್ಷೆ ನಡೆಯುತ್ತಿದೆ. ಈ ಬದಲಾವಣೆಗಳಿದ್ದರೂ ಮಂಡಳಿ ಕಳೆದ ವರ್ಷದ ತನ್ನ ಮಾದರಿಯಲ್ಲಿ ಬದಲಾವಣೆ ಮಾಡಿಲ್ಲ.

ನಾವು ಪ್ರಶ್ನೆಪತ್ರಿಕೆಯನ್ನು ತಯಾರಿಸುವಾಗ ಎಲ್ಲ ವಿದ್ಯಾರ್ಥಿಗಳನ್ನು ಗಮನಿಸಿಯೇ ತಯಾರಿಸುತ್ತೇವೆ. ಒಬ್ಬ ಸಾಧಾರಣ ವಿದ್ಯಾರ್ಥಿಯೂ ಉತ್ತೀರ್ಣಗೊಳ್ಳಲು ಸಾಧ್ಯವಾಗಬೇಕು ಎಂಬುದು ನಮ್ಮ ಆಶಯ. ಈ ಅಂಶ ಗಮನಿಸಿಕೊಂಡು ಪ್ರಶ್ನೆಪತ್ರಿಕೆಯ ಮಾದರಿ ಸಿದ್ಧಪಡಿಸಲಾಗುತ್ತದೆ.
– ಎಚ್‌. ಎನ್‌. ಗೋಪಾಲಕೃಷ್ಣ, ನಿರ್ದೇಶಕರು, ಕೆಎಸ್‌ಇಎಬಿ

 ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.