ಸಾವಿರಾರು ವಲಸೆ ಕಾರ್ಮಿಕರು ಅತಂತ್ರ!

ದ.ಕ.: ವದಂತಿ, ಮಾಹಿತಿ ಕೊರತೆ ಹಿನ್ನೆಲೆ

Team Udayavani, May 14, 2020, 5:55 AM IST

ಸಾವಿರಾರು ವಲಸೆ ಕಾರ್ಮಿಕರು ಅತಂತ್ರ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿಯಾಗಿರುವ ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಕೆಲವು ದಿನಗಳಿಂದ ತಮ್ಮ ಊರುಗಳಿಗೆ ಕಳುಹಿಸಿ ಕೊಡಲಾಗುತ್ತಿದ್ದು, ಕೆಲವೊಂದು ವಲಸೆ ಕಾರ್ಮಿಕರು ಜಿಲ್ಲಾಡಳಿತದ ಮಾಹಿತಿ ಕೊರತೆ, ವದಂತಿಗಳಿಂದಾಗಿ ಅತಂತ್ರರಾಗಿದ್ದಾರೆ.

ಮಂಗಳೂರು ಜಂಕ್ಷನ್‌ ಮತ್ತು ಪುತ್ತೂರು ರೈಲು ನಿಲ್ದಾಣದಿಂದ ಕಾರ್ಮಿಕರನ್ನು ಹೊತ್ತು 8 ರೈಲುಗಳು ಈಗಾಗಲೇ ತೆರಳಿವೆ. ಅವುಗಳಲ್ಲಿ ಸುಮಾರು 10 ಸಾವಿರ ಮಂದಿ ತಮ್ಮ ಊರು ತಲುಪಿದ್ದಾರೆ. ಇನ್ನೂ ಇಪ್ಪತ್ತು ಸಾವಿರದಷ್ಟು ಮಂದಿ ಊರುಗಳಿಗೆ ತೆರಳುವ ಧಾವಂತದಲ್ಲಿದ್ದು, ಇತ್ತ ಜಿಲ್ಲಾಡಳಿತದಿಂದ ಮಾಹಿತಿ ಕೊರತೆ ಯಿಂದಾಗಿ ಕಾರ್ಮಿಕರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಎರಡೂ ರಾಜ್ಯಗಳ ಒಪ್ಪಿಗೆ ಸಿಗಬೇಕು
ಹೊರ ರಾಜ್ಯದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು “ಸೇವಾ ಸಿಂಧು’ ಪೋರ್ಟಲ್‌ ಮುಖೇನ ಕಡ್ಡಾಯವಾಗಿ ನೋಂದಣಿ ಮಾಡಬೇಕು. ಎರಡೂ ರಾಜ್ಯಗಳ ಒಪ್ಪಿಗೆ ಬಳಿಕ ಅವರನ್ನು ರೈಲು ಮುಖೇನ ತಮ್ಮ ಊರುಗಳಿಗೆ ಕಳುಹಿಸಲಾಗುತ್ತಿದೆ. ಇಂತಹ ಕಾರ್ಮಿಕನ್ನು ಕರೆದೊಯ್ಯಲು ದ.ಕ. ಜಿಲ್ಲಾಡಳಿತವು ರೈಲು ವ್ಯವಸ್ಥೆ ಮಾಡಿದ್ದು, ಆಯಾ ದಿನದಂದು ವಲಸೆ ಕಾರ್ಮಿಕರು ಇದ್ದ ಸ್ಥÙದಿಂದಲೇ ಕೆಎಸ್ಸಾರ್ಟಿಸಿ ಬಸ್‌ ಮುಖೇನ ನೇರವಾಗಿ ರೈಲು ನಿಲ್ದಾಣಕ್ಕೆ ಕಳುಹಿಸಲಾಗುತ್ತಿದೆ. ಆದರೆ ಕೆಲವೊಬ್ಬರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು,ಇದರಿಂದಾಗಿ ಕಾರ್ಮಿಕರು ನಗರದಲ್ಲಿ ತಂಡೋಪತಂಡವಾಗಿ ಅಲ್ಲಲ್ಲಿ ಜಮಾಯಿಸುತ್ತಿದ್ದಾರೆ.

ಗೊಂದಲ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿ ಕೊಡ ಲಾಗುತ್ತದೆ ಎಂಬ ವದಂತಿಯಿಂದಾಗಿ ಮೇ 8ರಂದು ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಸಾವಿರಾರು ಮಂದಿ ಕಾರ್ಮಿಕರು ಜಮಾಯಿಸಿ ಗೊಂದಲಕ್ಕೆ ಎಡೆ ಯಾಗಿತ್ತು. ಅಷ್ಟೇ ಅಲ್ಲದೆ, ತಮ್ಮನ್ನು ಊರಿಗೆ ಕಳುಹಿಸುವಂತೆ “ವಿ ವಾಂಟ್‌ ಟು ಗೋ ಹೋಮ್‌’ ಎಂಬ ಪೋಸ್ಟರ್‌ ಹಿಡಿದು ಪ್ರತಿಭಟನೆ ನಡೆಸಿದ್ದರು. ಅದೇ ರೀತಿ ನಗರದ ಪುರಭವನ, ಕರಾವಳಿ ಉತ್ಸವ ಮೈದಾನದಲ್ಲಿಯೂ ಈ ಹಿಂದೆ ಅನೇಕ ಮಂದಿ ಹೊರ ರಾಜ್ಯಗಳ ವಲಸೆ ಕಾರ್ಮಿಕರು ಜಮಾಯಿಸಿದ್ದರು.

ಜಿಲ್ಲಾಡಳಿತ ಹೆಚ್ಚಿನ ನಿಗಾ ವಹಿಸಲಿ
ದಕ್ಷಿಣ ಕನ್ನಡ ಜಿಲ್ಲೆಯಿಂದ ಬೇರೆ ರಾಜ್ಯಕ್ಕೆ ತೆರಳುವ ಬಹುತೇಕ ವಲಸೆ ಕಾರ್ಮಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ. ಅದರಲ್ಲೂ ಎರಡು ದಿನಗಳ ಹಿಂದೆ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಜಮಾಯಿಸಿದ್ದ ಸಾವಿರಾರು ಮಂದಿ ವಲಸೆ ಕಾರ್ಮಿಕರು ಒತ್ತೂತ್ತಾಗಿ ನಿಂತಿದ್ದರು. ಮಾಸ್ಕ್ ಹಾಕುವುದನ್ನು ಮರೆತಿದ್ದರು. ಇನ್ನು, ತಮ್ಮ ಊರುಗಳಿಗೆ ತೆರಳುವ ಧಾವಂತದಲ್ಲಿ ಎಚ್ಚರ ಕಳೆದುಕೊಂಡರೆ ದೊಡ್ಡ ಅನಾಹುತಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ. ಈ ಬಗ್ಗೆ ಜಿಲ್ಲಾಡಳಿತ ಗಮನ ನೀಡಬೇಕಿದೆ.

ಮತ್ತಷ್ಟು ರೈಲಿಗೆ ಬೇಡಿಕೆ
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, ಈಗಾಗಾಲೇ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳುಹಿಸ ಲಾಗುತ್ತಿದೆ. ಮತ್ತಷ್ಟು ರೈಲಿಗೆ ಬೇಡಿಕೆ ಇದ್ದು, ಈ ಬಗ್ಗೆ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದೆ. ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದ ವತಿಯಿಂದ ಮಾಹಿತಿ ನೀಡಲಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಇನ್ನೇನು ಕಾಮಗಾರಿಗಳು ಆರಂಭವಾಗಲಿದ್ದು, ಕಾರ್ಮಿಕರನ್ನು ಮನ ವೊಲಿಸಲಾಗುತ್ತಿದೆ’ ಎಂದಿದ್ದಾರೆ.

 ವದಂತಿ ನಂಬಬೇಡಿ
ವಲಸೆ ಕಾರ್ಮಿಕರನ್ನು ಅವರಿರುವ ಪ್ರದೇಶಗಳಿಂದ ರೈಲು ನಿಲ್ದಾಣಕ್ಕೆ ನೇರವಾಗಿ ಕೆಎಸ್ಸಾರ್ಟಿಸಿ ಬಸ್‌ ಮುಖೇನ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಕೆಲವೊಂದು ಮಂದಿ ವಾಟ್ಸಾಪ್‌ ಮುಖೇನ ಸುಳ್ಳು ಸಂದೇಶ ರವಾನಿಸುತ್ತಿದ್ದಾರೆ. ಇದನ್ನು ನಂಬಿ ಅನೇಕ ಮಂದಿ ಅಲ್ಲಲ್ಲಿ ಗುಂಪು ಸೇರುತ್ತಿದ್ದಾರೆ. ಯಾರು ಕೂಡ ವದಂತಿ ನಂಬಬಾರದು.
-ಡಾ|ಭರತ್‌ ಶೆಟ್ಟಿ ವೈ.
ಶಾಸಕ

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.