ಮೂರು ದಿನಗಳ ಅಧಿವೇಶನ ಮುಕ್ತಾಯ
Team Udayavani, Oct 13, 2019, 3:09 AM IST
ವಿಧಾನ ಮಂಡಲ: ವಿಧಾನ ಮಂಡಲದ ಮೂರು ದಿನಗಳ ಚಳಿಗಾಲದ ಅಧಿವೇಶನ ಮುಕ್ತಾಯಗೊಂ ಡಿದ್ದು, 18 ಗಂಟೆಗಳ ಕಾಲ ಕಲಾಪ ನಡೆಯಿತು. ಧನ ವಿನಿಯೋಗ ವಿಧೇಯಕ ಸೇರಿ ಮೂರು ವಿಧೇಯಕಗಳನ್ನು ಮಂಡಿಸಿ, ಅಂಗೀಕಾರ ಪಡೆಯಲಾಯಿತು. ಅಧಿವೇಶನದಲ್ಲಿ ಪ್ರಮುಖವಾಗಿ ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಉಂಟಾದ ಪ್ರವಾಹದ ಮೇಲಿನ ಚರ್ಚೆಯಲ್ಲಿ 22 ಸದಸ್ಯರು ಪಾಲ್ಗೊಂಡು ಮಾತನಾಡಿದರು. ಒಟ್ಟು 11 ಗಂಟೆ 16 ನಿಮಿಷ ಪ್ರವಾಹ ಪರಿಹಾರ ಕುರಿತು ಚರ್ಚೆ ನಡೆಸಲಾಯಿತು
ಪ್ರಮುಖವಾಗಿ ರಾಜ್ಯ ಸರ್ಕಾರದ ಖರ್ಚು ವೆಚ್ಚದ ಲೆಕ್ಕದ ಹಣಕಾಸು ವಿಧೇಯಕವನ್ನು ಎರಡು ಗಂಟೆಯಲ್ಲಿ ಎರಡೂ ಮನೆಯಲ್ಲಿ ಚರ್ಚಿಸಿ, ಅಂಗೀಕಾರ ಪಡೆಯಲಾಯಿತು. ಈ ವೇಳೆ, ಬೆಂಗಳೂರಿನ ಪ್ರತಿಪಕ್ಷಗಳ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಅದನ್ನು ಸರಿಪಡಿಸುವಂತೆ ಒತ್ತಾಯಿಸಿ, ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಅದಲ್ಲದೇ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಯೋಜನೆಗಳನ್ನು ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವ ಕುರಿತು ಜೆಡಿಎಸ್‌ನ ಮೂವರು ಸದಸ್ಯರು ಆರು ನಿಮಿಷ ಮಾತನಾಡಿದರು.
ಮೂರು ದಿನದ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಹೆಚ್ಚು ಮಾತನಾಡಿ ದರು. ಉಳಿದ ಸದಸ್ಯರಿಗೆ ಮಾತನಾಡಲು ಹೆಚ್ಚಿನ ಅವಕಾಶ ದೊರೆಯಲಿಲ್ಲ. ಹಿಂದಿನ ಸಾಲಿನ ಹೊಸ ಸದಸ್ಯರು ಪ್ರವಾಹದ ಮೇಲೆ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ದ್ದರೂ, ಕೇವಲ ಮೂರು ದಿನದ ಅಧಿವೇಶನವಾ ಗಿದ್ದರಿಂದ ಯಾರಿಗೂ ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಮಯ ದೊರೆಯಲಿಲ್ಲ.
ಮಾಧ್ಯಮಕ್ಕೆ ನಿರ್ಬಂಧ: ಇದೇ ಮೊದಲ ಬಾರಿಗೆ ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮರಾಗಳನ್ನು ವಿಧಾನ ಸಭೆಯ ಕಲಾಪ ಚಿತ್ರೀಕರಣಕ್ಕೆ ನಿಷೇಧಿಸಿ, ದೂರದರ್ಶ ನದ ಮೂಲಕ ನೇರ ಪ್ರಸಾರ ಮಾಡಿ, ಅಧಿವೇಶನ ನಡೆಸಲಾಯಿತು. ಅದರ ಜೊತೆಗೆ ವಿಧಾನಸಭೆಯ ವೆಬ್‌ಸೈಟ್ ಮೂಲಕ ಸಾರ್ವಜನಿಕರಿಗೂ ಅಧಿವೇ ಶನದ ನೇರ ವೀಕ್ಷಣೆಗೆ ಅವಕಾಶ ಕಲ್ಪಿಸಿ ಕೊಡಲಾಗಿತ್ತು.
ಸದನದ ಬಾವಿಗಿಳಿದು ಕಾಂಗ್ರೆಸ್ ಪ್ರತಿಭಟನೆ
ವಿಧಾನ ಪರಿಷತ್: ನೆರೆ ಪರಿಹಾರ ಸಂಬಂಧ ಪ್ರತಿಪಕ್ಷಗಳ ಬೇಡಿಕೆಯನ್ನು ಈಡೇರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರು. ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೇಂದ್ರದಿಂದ ವಿಶೇಷ ಅನುದಾನ ಬರುವಂತೆ ಮಾಡಿ ಎಂದು ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಮಾಡಿದ ಒತ್ತಾಯವನ್ನು ರಾಜ್ಯ ಸರ್ಕಾರ ತಿರಸ್ಕರಿಸಿರುವುದಕ್ಕೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.
ಎಸ್.ಆರ್.ಪಾಟೀಲ್ ಮಾತನಾಡಿ, ರಾಜ್ಯ ಸರ್ಕಾರ ನಮ್ಮ ಯಾವುದೇ ಬೇಡಿಕೆಯನ್ನು ಈಡೇರಿಸಿಲ್ಲ. ಭೀಕರ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ಬಗ್ಗೆ ಚಿಂತನೆ ನಡೆಸಲು ಸರ್ಕಾರ ಒಪ್ಪುತ್ತಿಲ್ಲ. ಮನೆ ಕಳೆದುಕೊಂ ಡವರಿಗೆ 5 ಲಕ್ಷದ ಬದಲಿಗೆ 10 ಲಕ್ಷ ರೂ.ನೀಡ ಬೇಕು ಎಂದು ಕೋರಿಕೊಂಡಿದ್ದೇವೆ. ಇದ್ಯಾವು ದಕ್ಕೂ ಸರ್ಕಾರ ಒಪ್ಪಿಲ್ಲ. ಹೀಗಾಗಿಯೇ, ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಜೆಡಿಎಸ್ ಧರಣಿ: ರಾಜ್ಯದಲ್ಲಿ 50 ಸಾವಿರಕ್ಕೂ ಅಧಿಕ ಶಾಲಾ ಕಟ್ಟಡಗಳು ಶಿಥಿಲಗೊಂಡಿವೆ. ಮಕ್ಕಳು ಬಯಲಲ್ಲಿ ವಿದ್ಯಾರ್ಜನೆ ಮಾಡಬೇ ಕಾದ ಸ್ಥಿತಿ ಎದುರಾಗಿದೆ ಎಂದು ಜೆಡಿಎಸ್‌ನ ಶ್ರೀಕಂಠೇಗೌಡ ಪ್ರಸ್ತಾಪಿಸುತ್ತಿದ್ದಂತೆ, ಇದಕ್ಕೆ ಈಗಾಗಲೇ ಉತ್ತರ ನೀಡಲಾಗಿದೆ. ಪದೇಪದೆ ಕೇಳುವ ಅಗತ್ಯವಿಲ್ಲ ಎಂದ ಆಡಳಿತ ಪಕ್ಷದ ಸದಸ್ಯರು ಮುಗಿಬಿದ್ದರು. ಆಗ ಜೆಡಿಎಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸಲು ಮುಂದಾದರು.
ಕಂದಾಯ ಸಚಿವ ಆರ್.ಅಶೋಕ್ ಅವರು, ಶಿಥಿಲಗೊಂಡಿರುವ ಎಲ್ಲ ಶಾಲೆಗಳಿಂದ ಮಕ್ಕಳನ್ನು ಬೇರೆಡೆಗೆ ಸ್ಥಳಾಂತರ ಮಾಡಿದ್ದೇವೆ. ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದೇವೆ. ತುರ್ತಾಗಿ ಕಲ್ಯಾಣಮಂಟಪ ಇತ್ಯಾದಿ ಕಡೆಗಳಲ್ಲಿ ಪಾಠಕ್ಕೆ ವ್ಯವಸ್ಥೆ ಮಾಡಿದ್ದೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಅಡ್ಡಿ ಆಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರತಿಪಕ್ಷದ ಪ್ರತಿಭಟನೆಯ ನಡುವೆಯೇ ಕರ್ನಾಟಕ ಧನ ವಿನಿಯೋಗ (ಸಂಖ್ಯೆ.3) ವಿಧೇ ಯಕ-2019, ಕರ್ನಾಟಕ ಧನ ವಿನಿಯೋಗ (ಸಂಖ್ಯೆ.4) ವಿಧೇಯಕ-2019 ಹಾಗೂ ಕರ್ನಾಟಕ ಸರಕು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ-2019ನ್ನು ಮುಖ್ಯಮಂತ್ರಿಗಳು ಮಂಡಿಸಿ, ಸದನದ ಅಂಗೀಕಾರ ಪಡೆದರು.
“ರಾಷ್ಟ್ರೀಯ ವಿಪತ್ತಾಗಿ ಘೋಷಿಸಲಾಗದು’
ವಿಧಾನ ಪರಿಷತ್: ರಾಜ್ಯದಲ್ಲಿ ಸಂಭವಿಸಿರುವ ಪ್ರವಾಹ ಮತ್ತು ಮಳೆಹಾನಿಯನ್ನು ರಾಷ್ಟ್ರೀಯ ವಿಪತ್ತಾಗಿ ಘೋಷಿಸಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಪ್ರವಾಹ ಪರಿಹಾರ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಪ್ರತಿಪಕ್ಷ ಸದಸ್ಯರು ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಬೇಡಿಕೆ ಇಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ರಾಷ್ಟ್ರೀಯ ವಿಪತ್ತು ಘೋಷಿಸಲು ಸಾಧ್ಯ ವಿಲ್ಲ. ಅದಕ್ಕಾಗಿ ಹಲವು ನಿಯಮಗಳಿವೆ ಎಂದು ಹೇಳಿದರು.
ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಯಮ ಗಳು ಪ್ರತಿ ಐದು ವರ್ಷಕ್ಕೆ ಪರಿಷ್ಕರಣೆಯಾಗುತ್ತಿರುತ್ತವೆ. ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ಎಲ್ಲ ರೀತಿಯ ಪರಿಹಾರ ಕಾರ್ಯ ಕೈಗೊಂಡಿದ್ದೇವೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಮಾತನಾಡಿದ ಪ್ರತಿ ಪಕ್ಷದ ನಾಯಕ ಎಸ್. ಆರ್. ಪಾಟೀಲ್ ಮಾತನಾಡಿ, ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜನತೆಗೆ ಸೂಕ್ತ ಪರಿಹಾರ ನೀಡಲು ಮತ್ತು ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ, ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದರೆ, ಕೇಂದ್ರದಿಂದ ಹೆಚ್ಚುವರಿ ಅನುದಾನ ದೊರೆಯುತ್ತದೆ ಎಂದು ಒತ್ತಾಯಿಸಿದರು.
ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್ ಸದಸ್ಯ ಬಸವರಾಜ ಇಟಗಿ, ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರವೇ ಘೋಷಣೆ ಮಾಡಬೇಕು. ಆದರೆ, ರಾಜ್ಯ ಸರ್ಕಾರ ಈ ಸಂಬಂಧ ಒಂದು ನಿರ್ಧಾರ ತೆಗೆದುಕೊಂಡು ಕೇಂದ್ರಕ್ಕೆ ಸಲ್ಲಿಸಬಹುದಲ್ಲ ಎಂದು ಕೋರಿಕೊಂಡರು. ಜೆಡಿಎಸ್ ಸದಸ್ಯ ಟಿ.ಎ.ಶರವಣ ಎದ್ದುನಿಂತು, ಕನಿಷ್ಠ ರಾಜ್ಯ ಸರ್ಕಾರವಾದರೂ ಈ ಸಂಬಂಧ ನಿರ್ಧಾರ ತೆಗೆದುಕೊಂಡು ಕೇಂದ್ರ ಕಳುಹಿಸಬಹುದಲ್ಲವೇ? ಎಂದು ಪ್ರಶ್ನಿಸಿದರು.
ಸಚಿವ ಮಾಧುಸ್ವಾಮಿ ಮಾತನಾಡಿ, ರಾಷ್ಟ್ರೀಯ ವಿಪತ್ತು ಘೋಷಣೆ ಯಾವಾಗ ಮಾಡಬೇಕು ಮತ್ತು ಅದರ ನಿಯಮ ಗಳೇನಾದರೂ ನಿಮಗೆ ತಿಳಿದಿದೆಯೇ ಹೇಳಿ ನೋಡೋಣ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶರವಣ, ನಮಗೆ ಅದರ ಬಗ್ಗೆ ಗೊತ್ತಿಲ್ಲ. ನೀವೇ ಹೇಳಿ ಎನ್ನುತ್ತಿದ್ದಂತೆ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರು ಮಧ್ಯಪ್ರವೇಶಿಸಿ ಚರ್ಚೆಗೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.