Madikeri: ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು
Team Udayavani, Oct 31, 2023, 7:19 PM IST
ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಬರೆ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಬರೆ ಕುಸಿದಿದೆ. ಈ ಘಟನೆಯಿಂದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದರು. ಅದೃಷ್ಟವಶಾತ್ ಕಾರ್ಮಿಕ ರಾಜು ಎಂಬುವವರು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ.
ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 9 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯರುಗಳು ಹಾಗೂ ಅಧಿಕಾರಿಗಳು ಕಾರ್ಯಾಚರಣೆ ಸಂದರ್ಭ ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.