ಥ್ರಿಲ್ಲರ್ “ಶಾರ್ದೂಲ’ ರೆಡಿ
Team Udayavani, Jun 13, 2020, 4:19 AM IST
ಲಾಕ್‌ಡೌನ್ ಬಹುತೇಕ ಸಡಿಲಿಕೆಯಾಗಿದೆ. ಎಲ್ಲಾ ಕ್ಷೇತ್ರಗಳ ಕೆಲಸಗಳು ಆರಂಭವಾಗಿವೆ. ಸಿನಿಮಾ ಕ್ಷೇತ್ರದ ಮಂದಿ ಕೂಡಾ ಸಿನಿಮಾ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಈಗ ಶಾರ್ದೂಲ ಎಂಬ ಸಿನಿಮಾ ಕೂಡಾ ಬಿಡುಗಡೆಯ ಹಂತಕ್ಕೆ ಬಂದಿದೆ. ಸಿನಿಮಾ ಬಿಡುಗಡೆಗೆ ಆನುಮತಿ ಸಿಕ್ಕ ಬೆನ್ನಲ್ಲೇ ಚಿತ್ರ ತೆರೆಕಾಣಲಿದೆ. ಚಿತ್ರವನ್ನು ವೀಕ್ಷಿಸಿರುವ ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರವನ್ನು ನೀಡಿದೆ.
ಕೊರೊನಾ ಹಾವಳಿಯಿಂದ ಸಿನಿಮಾ ಬಿಡುಗಡೆ ವಿಳಂಬವಾಗಿದ್ದು, ಅನುಮತಿ ದೊರಕಿದ ಕೂಡಲೆ ಚಿತ್ರವನ್ನು ತೆರೆಗ ತರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.ಭೈರವ ಸಿನಿಮಾಸ್ ಲಾಂಛನದಲ್ಲಿ ಕಲ್ಯಾಣ್ ಸಿ ಹಾಗೂ ರೋಹಿತ್ .ಎಸ್
ಅವರು ಈ ಚಿತ್ರ ನಿರ್ಮಿಸಿದ್ದಾರೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕೂಡ ವಿಭಿನ್ನವಾಗಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.
ನಮ್ ಏರಿಯಲ್ಲೊಂದು ದಿನ, ತುಘಲಕ್ ಹಾಗೂ ಹುಲಿರಾಯ ಚಿತ್ರಗಳನ್ನು ನಿರ್ದೇಶಿಸಿರುವ ಅರವಿಂದ್ ಕೌಶಿಕ್ ಈ ಚಿತ್ರದ ನಿರ್ದೇಶಕರು. ಇವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.. ದೆವ್ವ ಇರಬಹುದಾ ಎಂಬ ಅಡಿಬರಹ ಈ ಚಿತ್ರಕ್ಕಿದೆ.ವೈ.ಜಿ.ಆರ್. ಮನು ಛಾಯಾಗ್ರಹಣ, ಸತೀಶ್ ಬಾಬು ಸಂಗೀತ ನಿರ್ದೇಶನ, ಶಿವರಾಜ್ ಮೇಹು ಸಂಕಲನ ಹಾಗೂ ಮಾಸ್ ಮಾದ, ಅಲ್ಟಿಮೇಟ್ ಶಿವ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಪಿ.ಯು.ಸಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ, ನಟ ರವಿತೇಜ, ಕೃತಿಕ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.