ಅನಾನಸು ಸಂಸ್ಕರಣೆ, ಮೌಲ್ಯವರ್ಧನೆಗೆ ಸಕಾಲ

ಕೃಷಿ ಪರಿಣಿತರ ಅಭಿಮತ

Team Udayavani, Apr 25, 2020, 6:35 AM IST

ಅನಾನಸು ಸಂಸ್ಕರಣೆ, ಮೌಲ್ಯವರ್ಧನೆಗೆ ಸಕಾಲ

ಬ್ರಹ್ಮಾವರ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಹಲವಾರು ಬೆಳೆಗಾರರು ಅನಾನಸನ್ನು ಬೆಳೆದಿದ್ದು, ಲಾಕ್‌ಡೌನ್‌ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಎಪ್ರಿಲ್‌-ಮೇನಲ್ಲಿ ಮದುವೆ ಇತ್ಯಾದಿ ಶುಭ ಸಮಾರಂಭಗಳು ಹೆಚ್ಚು ನಡೆಯುವ ಕಾಲ. ಬಹಳಷ್ಟು ಅನಾನಸು ಈ ಕಾರ್ಯಕ್ರಮಗಳಲ್ಲಿ ಅನಾನಸ್‌ಗಳಿಗೆ ತಂಪು ಪಾನೀಯಕ್ಕೆ ಬಳಸಲಾಗುತ್ತಿತ್ತು. ಇದಲ್ಲದೆ ಹೊಟೆಲ್‌ಗ‌ಳಲ್ಲಿ ಜ್ಯೂಸ್‌ಗೆ ಬಹಳಷ್ಟು ಬೇಡಿಕೆ ಇರುತ್ತಿತ್ತು. ಒಂದಿಷ್ಟು ಪ್ರಮಾಣ ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಗೆ ಕಳುಹಿಸಲಾಗುತ್ತಿತ್ತು. ಕೊರೊನಾ ಕಾರಣದಿಂದ ಅದಕ್ಕೂ ಅವಕಾಶವಿಲ್ಲವಾಗಿದೆ.
ಈ ಸಂದರ್ಭದಲ್ಲಿ ಕೃಷಿ ಪರಿಣಿತರು ಹೇಳುವ ಪ್ರಕಾರ, ಕೃಷಿ ಉತ್ಪನ್ನವನ್ನು ಮೌಲ್ಯವರ್ಧನೆಗೊಳಿಸುವುದೇ ಸೂಕ್ತ. ಅದೇ ಹೆಚ್ಚು ಲಾಭದಾಯಕ ಎನ್ನುತ್ತಿದ್ದಾರೆ. ಮಧ್ಯವರ್ತಿಗಳ ಹಾವಳಿ ಯಿಂದಲೂ ತಪ್ಪಿಸಿಕೊಳ್ಳಲು ಸಂಸ್ಕರಣೆ ಹಾಗೂ ಮೌಲ್ಯವರ್ಧನೆಯೆ ಪರಿಹಾರ ಎನ್ನುತ್ತಾರೆ ಕೃಷಿ ಪರಿಣಿತರು.

ಅನಾನಸು ಪಲ್ಪ್
ದೊಡ್ಡ ಪ್ರಮಾಣದಲ್ಲಿ ಅನಾನಾಸು ಬೆಳೆದಿದ್ದು ನೇರವಾಗಿ ಮಾರಾಟ ಆಗದಿದ್ದಾಗ ಪಲ್ಪ್ ತಯಾರಿ ಉತ್ತಮ ಮಾರ್ಗ. ಉತ್ತಮ ಗುಣಮಟ್ಟದ ಹಣ್ಣುಗಳನ್ನು ಆರಿಸಿ ಬಿಸಿ ನೀರಿನಲ್ಲಿ ತೊಳೆಯಬೇಕು. ಸಿಪ್ಪೆ ತೆಗೆದು ತಿರುಳು ಬೇರ್ಪಡಿಸಬೇಕು. ಅನಂತರ ಗೆùಂಡರ್‌ನಂತಹ ಸಾಧನದಲ್ಲಿ ಅರೆದು ರಸವನ್ನು ಬೇರ್ಪಡಿಸಬೇಕು.

ಡ್ರಮ್‌ನಂತಹ ಸಂಗ್ರಹ ಯೋಗ್ಯ ಸಾಧನದಲ್ಲಿ ಮುಕ್ಕಾಲು ಭಾಗದಷ್ಟು ತುಂಬಿಸಬೇಕು. ಅನಂತರ ಅದನ್ನು ನೀರು ತುಂಬಿದ ಇನ್ನೊಂದು ಪಾತ್ರೆಯೊಳಗಿರಿಸಿ 100 ಡಿಗ್ರಿ ಸೆಲಿÏಯಸ್‌ನಲ್ಲಿ ಕನಿಷ್ಠ 30 ನಿಮಿಷ ಕುದಿಸಬೇಕು.ಬಳಿಕ ಮುಚ್ಚಳವನ್ನು ಭದ್ರಗೊಳಿಸಿ ಗಾಳಿಯಾಡದಂತೆ ಸಂರಕ್ಷಿಸಿದರೆ ಕನಿಷ್ಠ 6 ತಿಂಗಳ ವರೆಗೆ ಸುರಕ್ಷಿತವಾಗಿಡ ಬಹುದು. ಇದನ್ನು ಯಾವುದೇ ಸಂದರ್ಭದಲ್ಲಿ ನೈಜ ಹಣ್ಣಿನಂತೆ ಜ್ಯೂಸ್‌ ಇನ್ನಿತರ ವಿಧಾನಕ್ಕೆ ಬಳಸಿ ಕೊಳ್ಳಬಹುದು. ಮಾರುಕಟ್ಟೆಯಲ್ಲೂ ಉತ್ತಮ ಬೇಡಿಕೆ ಇರುತ್ತದೆ. ಆದರೆ ಪ್ರತಿ ಹಂತದಲ್ಲೂ ಸ್ವತ್ಛತೆಗೆ ಗಮನ ಹರಿಸುವುದು ಅತೀ ಅವಶ್ಯ ಎನ್ನುತ್ತಾರೆ ಕೃಷಿ ಪರಿಣಿತರು.

ನಿಮ್ಮ ಬೆಳೆ ಮಾಹಿತಿ ನೀಡಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾವಿರಾರು ರೈತರು ತಾವು ಬೆಳೆದ ತರಕಾರಿ, ಹಣ್ಣು ಹಾಗೂ ಆಹಾರ ಬೆಳೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದಯವಾಣಿಯು ಗ್ರಾಹಕರೊಂದಿಗೆ ಸಂಪರ್ಕ ಕಲ್ಪಿಸಲು ಮುಂದಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ರೈತರು, ತರಕಾರಿ ಬೆಳೆಗಾರರು ಈ ಅಂಕಣದ ಪ್ರಯೋಜನ ಪಡೆಯಬಹುದು. ತಮ್ಮ ಬೆಳೆ ಹಾಗೂ ಸಂಪರ್ಕ ಸಂಖ್ಯೆಯನ್ನು ನಮ್ಮ ವಾಟ್ಸಪ್‌ಗೆ ಕಳಿಸಿದರೆ ಪ್ರಕಟಿಸಲಾಗುವುದು. ನೀಡಬೇಕಾದ ಮಾಹಿತಿ: ಹೆಸರು, ಉತ್ಪನ್ನದ ಹೆಸರು, ಲಭ್ಯವಿರುವ ಬೆಳೆ ಪ್ರಮಾಣ, ಊರಿನ ಹೆಸರು, ಸಂಪರ್ಕ ಸಂಖ್ಯೆ, ಉತ್ಪನ್ನದ ಬೆಲೆ.

ವಾಟ್ಸಪ್‌ ಸಂಖ್ಯೆ:76187 74529

ಟಾಪ್ ನ್ಯೂಸ್

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.