ತೀರ್ಥಹಳ್ಳಿ: ಶ್ಮಶಾನದಲ್ಲಿ ಸುಟ್ಟ ಶವದ ಬೂದಿ ಮಾಯ; ಕಂಗಾಲಾದ ಕುಟುಂಬಸ್ಥರು!
Team Udayavani, Feb 1, 2023, 5:31 PM IST
ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಶ್ಮಶಾನದಲ್ಲಿ ಸುಟ್ಟ ಶವದ ಬೂದಿಯನ್ನು ಹಾಗೂ ಶ್ಮಶಾನದಲ್ಲಿದ್ದ ಕಬ್ಬಿಣದ ರಾಡನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆಯೊಂದು ಬುಧವಾರ ಬೆಳಕಿಗೆ ಬಂದಿದೆ.
ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಶ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ ಒಂದು ಎಳನೀರು ಇಟ್ಟು ವಾಪಾಸು ಬಂದಿದ್ದರು. ಮೂರನೇ ದಿನವಾದ ಇಂದು ಸಂಸ್ಕಾರ ಮಾಡಿದ ಬೂದಿ ತೆಗೆಯಲು ಕುಟುಂಬಸ್ಥರು ಶ್ಮಶಾನಕ್ಕೆ ಬಂದಿದ್ದರು ಆದರೆ ಶ್ಮಶಾನದಲ್ಲಿ ನೋಡುವಾಗ ಸುಟ್ಟ ಶವದ ಬೂದಿ ಮಂಗ ಮಾಯವಾಗಿತ್ತು. ಆಶ್ಚರ್ಯವೆಂದರೆ ಬೂದಿ ಕದ್ದ ಕಳ್ಳರು ಮೂರು ಎಲುಬುಗಳನ್ನು ಅಲ್ಲೆ ಒಂದು ಬದಿಯಲ್ಲಿ ಇಟ್ಟಿದ್ದರು ಎನ್ನಲಾಗಿದೆ. ಕುಟುಂಬದವರು ಆ ಮೂರು ಮೂಳೆಗಳನ್ನು ತಂದು ಮುಂದಿನ ಕಾರ್ಯವನ್ನು ಮಾಡಿದ್ದಾರೆ.
ಶ್ಮಶಾನದಲ್ಲಿ ಸುಟ್ಟ ಶವದ ಬೂದಿ ಇಲ್ಲದ್ದನ್ನು ನೋಡಿ ಕಂಗಾಲಾದ ಕುಟುಂಬಸ್ಥರು ಆಶ್ಚರ್ಯಚಕಿತರಾಗಿ ಊರಿನ ಗ್ರಾಮಸ್ಥರಿಗೆ ಈ ವಿಷಯ ಮುಟ್ಟಿಸಿದ್ದಾರೆ. ಗ್ರಾಮಸ್ಥರು ಶ್ಮಶಾನಕ್ಕೆ ಹೋಗಿ ನೋಡಿದಾಗ ಕುಟುಂಬಸ್ಥರು ಹೇಳಿದ ವಿಷಯ ಸತ್ಯವಾಗಿತ್ತು. ಶವ ಸಂಸ್ಕಾರ ಮಾಡುವಾಗ ಅದರಲ್ಲಿ ಬಂಗಾರ, ಬೆಳ್ಳಿ ಹಾಗೂ ನಾಣ್ಯಗಳನ್ನು ಹಾಕಿರಬಹುದೆಂದು ಯೋಚಿಸಿ ಕಳ್ಳರು ಬೂದಿಯನ್ನು ತೆಗೆದುಕೊಂಡು ಹೋಗಿರಬಹುದು ಎಂದು ಊರಿನ ಸಾರ್ವಜನಿಕರಿಂದ ಮಾತುಗಳು ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.