“ದಿಲ್ ಬೇಚಾರ’ ಚಿತ್ರದ ಟೈಟಲ್ ಸಾಂಗ್ ರಿಲೀಸ್!
ಸುಶಾಂತ್ ಸಿಂಗ್ ರಜಪೂತ್ ನಟನೆಯ ಕೊನೆಯ ಚಿತ್ರ
Team Udayavani, Jul 11, 2020, 7:44 AM IST
ನಟ ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಕೊನೆಯ ಚಿತ್ರ “ದಿಲ್ ಬೇಚಾರʼ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಯೂಟ್ಯೂಬ್‌ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ಚಿತ್ರತಂಡ ಚಿತ್ರದ ಮೊದಲ ಟೈಟಲ್ ಟ್ರ್ಯಾಕನ್ನು ಬಿಡುಗಡೆ ಮಾಡಿದೆ. ಈ ಹಾಡಿನಲ್ಲಿ ವೇದಿಕೆ ಮೇಲೆ ಸುಶಾಂತ್ ಜಬರ್‌ದಸ್ತ್ ಸ್ಟೆಪ್ ಹಾಕಿದ್ದಾರೆ. ಎ.ಆರ್. ರೆಹಮಾನ್ ಸಂಗೀತವಿರುವ ಈ ಹಾಡಿಗೆ ಅಮಿತಾಭ್ ಭಟ್ಟಾಚಾರ್ಯ ಸಾಹಿತ್ಯವಿದೆ.
ಇದು ಸಾಮಾನ್ಯ ಜನರ ಅಸಾಮಾನ್ಯ ಪ್ರೇಮಕತೆ. ಹಲವಾರು ತಿರುವುಗಳಿಂದ ಕೂಡಿದ ಪ್ರೇಮಿಗಳಿಬ್ಬರ ಜೀವನದಲ್ಲಿ ನಡೆಯುವ ದುರಂತ ಪ್ರೇಮಕತೆಯಾಗಿದ್ದು, ಟ್ರೈಲರ್‌ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಹಾಗೂ ಸಂಜನಾ ಸಾಂಘಿ ಇಬ್ಬರು ಮುಗ್ಧ ಹಾಗೂ ಮನೋಜ್ಞ ಅಭಿನಯದಿಂದ ಗಮನಸೆಳೆಯುತ್ತಾರೆ.
ನಟ ಸುಶಾಂತ್ಗೆ ಇದು ಕೊನೆಯ ಚಿತ್ರವಾದರೆ, ಚಿತ್ರದ ನಾಯಕಿ ಸಂಜನಾ ಸಾಂಘಿಗೆ ಇದು ಮೊದಲನೇ ಚಿತ್ರ. ಮುಖೇಶ್ ನಿರ್ದೇಶನದ ಈ ಚಿತ್ರದಲ್ಲಿ ನಾಯಕನಾಗಿ ಸುಶಾಂತ್ ಮನ್ನಿಯಾಗಿ ಹಾಗೂ ಸಂಜನಾ ಕಿಜಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಸೈಫ್ ಅಲಿ ಖಾನ್ ಸಹ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.
ಇನ್ನು “ದಿಲ್ ಬೇಚಾರʼ ಚಿತ್ರ ಕಥೆ ಮೂಲತಃ ಜಾನ್ ಗ್ರೀನ್ ಅವರ ಹೆಚ್ಚು ಮಾರಾಟವಾದ ಕಾದಂಬರಿ “ದಿ ಫಾಲ್ಟ್ ಇನ್ ಅವರ್ ಸ್ಟಾರ್ಸ್’ ದಿಂದ ಆಧಾರಿತವಾಗಿದೆ. ಚಿತ್ರ ಇದೇ ತಿಂಗಳ ಜುಲೈ 24 ರಂದು ಡಿಸ್ನಿ- ಹಾಟ್ ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದ್ದು, ಸುಶಾಂತ್ ಸಿಂಗ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ಸಿನಿಮಾವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವನ್ನು ಚಿತ್ರತಂಡ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.