ಶಿಕ್ಷಣ ಗುಣಮಟ್ಟ ಸುಧಾರಣೆಗೆ ಕ್ರಮ ; ನ್ಯಾಕ್ ಮಾನದಂಡ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಸೂಚನೆ
Team Udayavani, Feb 14, 2020, 10:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಗುಣಮಟ್ಟ ಸುಧಾರಿಸುವ ಮೂಲಕ ನ್ಯಾಕ್ ಶ್ರೇಯಾಂಕದಲ್ಲಿ ಹೆಚ್ಚಿನ ಅಂಕ ಗಳಿಸುವಂತೆ ರಾಜ್ಯದ ಎಲ್ಲ ಸರಕಾರಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಇದಕ್ಕಾಗಿ ನಿರ್ದಿಷ್ಟ ಮಾನದಂಡಗಳನ್ನು ರೂಪಿಸಿ, ಅನುಷ್ಠಾನಕ್ಕೆ ತರುವಂತೆ ಸೂಚಿಸಿದೆ.
ನ್ಯಾಕ್ ಶ್ರೇಯಾಂಕದ ಆಧಾರದಲ್ಲಿ ರಾಷ್ಟ್ರೀಯ ಉಚ್ಚತರ ಶಿಕ್ಷಾ ಅಭಿಯಾನ (ರುಸಾ) ಅನುದಾನ ಸೇರಿದಂತೆ ವಿವಿಧ ಸೌಲಭ್ಯಗಳು ಸರಕಾರಿ ಕಾಲೇಜುಗಳಿಗೆ ಲಭ್ಯವಾಗುತ್ತವೆ. ಆದರೆ ರಾಜ್ಯದ ಸರಕಾರಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳು ನ್ಯಾಕ್ ಮೌಲ್ಯಮಾಪನದಲ್ಲಿ ಉತ್ತಮ ಅಂಕ ಗಳಿಸಲು ವಿಫಲವಾಗುವುದು ಕಾಲೇಜು ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿದ್ದು, ಹೀಗಾಗಿ ಈ ಕ್ರಮಕ್ಕೆ ಮುಂದಾಗಿದೆ.
ನ್ಯಾಕ್ ಮೌಲ್ಯಮಾಪನ ಮತ್ತು ಮರು ಮೌಲ್ಯಮಾಪನದ ಸಂದರ್ಭದಲ್ಲಿ ಹೆಚ್ಚಿನ ಅಂಕ ಗಳಿಸುವುದಕ್ಕಾಗಿ ನ್ಯಾಕ್ ಮಾರ್ಗ ದರ್ಶನದೊಂದಿಗೆ ಕೆಲವು ಮಾನದಂಡಗಳನ್ನು ರೂಪಿಸಲಾಗಿದೆ. ರಾಜ್ಯದ 411 ಕಾಲೇಜುಗಳ ಪ್ರಾಂಶುಪಾಲರಿಗೂ ಇದನ್ನು ಅಳವಡಿಸಿಕೊಳ್ಳುವಂತೆ ಇಲಾಖೆ ನಿರ್ದೇಶಿಸಿದೆ.
ಸಂಶೋಧನೆ, ಅನ್ವೇಷಣೆ ಮತ್ತು ವಿಸ್ತರಣೆ
ಪ್ರತಿ ಕಾಲೇಜಿನಲ್ಲೂ ಸಂಶೋಧನೆ, ಅನ್ವೇಷಣೆ ಮತ್ತು ಕಾರ್ಯ ವ್ಯಾಪ್ತಿ ವಿಸ್ತರಣೆಗೆ ಆದ್ಯತೆ ನೀಡಬೇಕು.
ಸುಧಾರಣೆಯ ಕ್ರಮಗಳು
– ನ್ಯಾಕ್ ನಿರೀಕ್ಷೆಯಂತೆ ಪದವಿ ಕಾಲೇಜಿನ ಪಠ್ಯಕ್ರಮದಲ್ಲಿ ಶೈಕ್ಷಣಿಕವಾರು ಆದ್ಯತೆ ಹೆಚ್ಚಾಗಬೇಕು.
– ವಿದ್ಯಾರ್ಥಿ, ಉಪನ್ಯಾಸಕರ ಫೀಡ್‌ಬ್ಯಾಕ್ ವ್ಯವಸ್ಥೆ ಸುಧಾರಿಸಬೇಕು.
– ಪಠ್ಯಕ್ರಮ ವಿದ್ಯಾರ್ಥಿಗಳಿಗೆ ತಲುಪುವಂತಿರಬೇಕು.
– ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನದಲ್ಲಿ ಸುಧಾರಣೆ ತರಬೇಕು.
– ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು ಮತ್ತು ಅವರ ವ್ಯಕ್ತಿತ್ವವನ್ನು ಚೆನ್ನಾಗಿ ರೂಪಿಸಬೇಕು.
– ಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚೆಚ್ಚು ಒಳಗೊಳ್ಳುವಂತೆ ಪ್ರೋತ್ಸಾಹಿಸಬೇಕು ಮತ್ತು ಕಲಿಕಾ ಗುಣಮಟ್ಟವನ್ನು ಉನ್ನತೀಕರಿಸಬೇಕು.
ಸರಕಾರಿ ಕಾಲೇಜುಗಳ ಶೈಕ್ಷಣಿಕ ಮತ್ತು ಸೌಲಭ್ಯದ ಗುಣಮಟ್ಟ ಸುಧಾರಣೆಗಾಗಿ ನ್ಯಾಕ್‌ನ ನಿರ್ದೇಶಕರು ಕೆಲವು ಮಾರ್ಗಸೂಚಿ ನೀಡಿದ್ದಾರೆ. ಅದನ್ನು ಕಾಲೇಜುಗಳಲ್ಲಿ ಅನುಷ್ಠಾನ ಮಾಡಿಕೊಳ್ಳಲು ನಿರ್ದೇಶನ ನೀಡಿದ್ದೇವೆ.
– ಪ್ರೊ| ಎಸ್. ಮಲ್ಲೇಶ್ವರಪ್ಪ, ನಿರ್ದೇಶಕ, ಕಾಲೇಜು ಶಿಕ್ಷಣ ಇಲಾಖೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.