ಕಂದಾಯ ದಾಖಲೆ ಮನೆ ಬಾಗಿಲಿಗೆ; ಶೀಘ್ರ ಜಾರಿ


Team Udayavani, Feb 10, 2022, 6:05 AM IST

ಕಂದಾಯ ದಾಖಲೆ ಮನೆ ಬಾಗಿಲಿಗೆ; ಶೀಘ್ರ ಜಾರಿ

ಮಂಗಳೂರು/ಉಡುಪಿ: ರಾಜ್ಯ ಸರಕಾರದ “ಕಂದಾಯ ದಾಖಲೆ ಮನೆಬಾಗಿಲಿಗೆ’ ಯೋಜನೆ ಜಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸರ್ವಸಿದ್ಧತೆಗಳು ನಡೆದಿವೆ.

ದ.ಕ. ಜಿಲ್ಲೆಯ ಒಟ್ಟು 8 ತಾಲೂಕುಗಳಲ್ಲಿ 8,79,118 ಆರ್‌ಟಿಸಿಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಗುರಿ ಹೊಂದಲಾಗಿದೆ. ಯೋಜನೆ ಫೆ. 10ರಿಂದ ರಾಜ್ಯಾದ್ಯಂತ ಜಾರಿಗೆ ಬರುವ ಬಗ್ಗೆ ನಿಗದಿಯಾಗಿತ್ತಾದರೂ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದ್ದು, ಹೊಸ ದಿನಾಂಕವನ್ನು ಕಂದಾಯ ಸಚಿವರು ಶೀಘ್ರದಲ್ಲೇ ಪ್ರಕಟಿಸಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಾಗದ ಪಹಣಿ (ಆರ್‌ಟಿಸಿ), ಹಿಸ್ಸಾ ನಕ್ಷೆ, ಆದಾಯ ಪ್ರಮಾಣಪತ್ರ ಹಾಗೂ ಜಾತಿ ಪ್ರಮಾಣಪತ್ರವನ್ನು ಮುದ್ರಿಸಿ ಪ್ರತಿ ರೈತರ ಮನೆಬಾಗಿಲಿಗೆ ಸರಬರಾಜು ಮಾಡಲಾಗುತ್ತದೆ. ದ.ಕ. ಜಿಲ್ಲೆಗೆ ಸಂಬಂಧಿಸಿದಂತೆ ಇ-ಟೆಂಡರು ಕರೆದು ಕಾರ್ಯಾದೇಶ ನೀಡಲಾಗಿದ್ದು ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಫೆ. 10ರೊಳಗೆ ಇದು ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ದಾಖಲೆಗಳನ್ನು ಪ್ರತೀ ರೈತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಗ್ರಾಮವಾರು ಕಂದಾಯ ದಾಖಲೆಗಳ ವಿವರಗಳನ್ನು ಜಿಲ್ಲಾ ಭೂಮಿ ಸಮಾಲೋಚಕರಿಗೆ ಈಗಾಗಲೇ ಹಂಚಿಕೆ ಮಾಡಲಾಗಿದೆ. ಫೆ. 10ರಂದು ಈ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರಕಿದ ಬಳಿಕ ಗ್ರಾಮ ಮಟ್ಟದಲ್ಲಿ ಈ ಎಲ್ಲ ದಾಖಲೆಗಳನ್ನು ಒಂದು ಲಕೋಟೆಯಲ್ಲಿ ಹಾಕಿ ರೈತರ ಮನೆಬಾಗಿಲಿಗೆ ತಲುಪಿಸುವ ಕಾರ್ಯ ನಡೆಯಲಿದೆ. ರೈತರಿಗೆ ನೀಡಿದ ಬಳಿಕ ಅವರಿಂದ ಸ್ವೀಕೃತಿ ಪಡೆದು ಗ್ರಾಮವಾರು ವಹಿಯನ್ನು ನಿರ್ವಹಿಸಲಾಗುತ್ತದೆ.

ನೋಡಲ್‌ ಅಧಿಕಾರಿಗಳ ನೇಮಕ
ದಾಖಲೆಗಳನ್ನು ಸಮರ್ಪಕವಾಗಿ ವಿತರಿಸಲು ಹಾಗೂ ಯೋಜನೆಯನ್ನು ಪೂರ್ಣಪ್ರಮಾಣದಲ್ಲಿ ಯಶಸ್ವಿಗೊಳಿಸಲು ಜಿಲ್ಲಾ ಹಾಗೂ ಉಪವಿಭಾಗ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಯವರು ಹಾಗೂ ಉಪವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಯವರು ನೋಡಲ್‌ ಅಧಿಕಾರಿಯಾಗಿರುತ್ತಾರೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಮುಖ್ಯಸ್ಥರಾಗಿರುತ್ತಾರೆ. ಹೋಬಳಿ ವ್ಯಾಪ್ತಿಯಲ್ಲಿ ತಾಲೂಕು ಆರ್‌ಟಿಸಿ ಶಿರಸ್ತೇದಾರರು, ಭೂದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ನಾಡಕಚೇರಿ ಉಪತಹಶೀಲ್ದಾರರು, ಹೋಬಳಿಯಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮದ ಗ್ರಾಮಲೆಕ್ಕಿಗರು ರೈತರ ಮನೆಬಾಗಿಲಿಗೆ ತಲುಪಿಸುವ ಕಾರ್ಯದ ತಂಡದ ಉಸ್ತುವಾರಿಗಳಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ
ಉಡುಪಿ ಜಿಲ್ಲೆಯ ಎಲ್ಲ ಗ್ರಾ.ಪಂ. ಮೂಲಕ ಆರ್‌ಟಿಸಿ, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಹಾಗೂ ಭೂ ನಕ್ಷೆಗಳನ್ನು ಫ‌ಲಾನುಭವಿಗಳಿಗೆ ತಲುಪಿಸಲು ಮುದ್ರಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಆಯಾ ಗ್ರಾ.ಪಂ. ಮೂಲಕ ಫ‌ಲಾನುಭವಿಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದೆ. ಅದರ ಆಧಾರದಲ್ಲಿ 6,61,230 ಆರ್‌ಟಿಸಿ, 13,10,481 ಜಾತಿ ಪ್ರಮಾಣ ಪತ್ರ, 8,01,851 ಆದಾಯ ಪ್ರಮಾಣ ಪತ್ರ ಹಾಗೂ 4,62,861 ಭೂ ನಕ್ಷೆಯನ್ನು ಜಿಲ್ಲೆಯಲ್ಲಿ ಮನೆ ಬಾಗಿಲಿಗೆ ಸರಕಾರದ ದಾಖಲೆಯಡಿ ವಿತರಣೆ ಮಾಡಲಾಗುತ್ತದೆ.

ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ. ದಾಖಲೆಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ.
– ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ

ಸರಕಾರದ ನಿರ್ದೇಶನ ಬಂದ ಅನಂತರ ಮನೆ ಮನೆಗೆ ಹೋಗಿ ವಿತರಿಸುವ ಕಾರ್ಯವನ್ನು ಸಿಬಂದಿ ಮಾಡಲಿದ್ದಾರೆ. ಒಂದೇ ದಿನದಲ್ಲಿ ಎಷ್ಟು ಸಾಧ್ಯವೂ ಅಷ್ಟು ದಾಖಲೆಗಳನ್ನು ಮನೆ ಮನೆಗೆ ತಲುಪಿಸಲು ಬೇಕಾದ ಸಿದ್ಧತೆಯನ್ನು ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ.
– ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.