ಇಂದು International Literacy Day- ದೇಶದ ಅಭಿವೃದ್ಧಿ ಪಥದ ಅಡಿಗಲ್ಲು
Team Udayavani, Sep 7, 2023, 11:40 PM IST
ಬರೆಯುವುದು, ಓದುವುದು ಮತ್ತುಅದನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವನ್ನು ಸಾಕ್ಷರತೆ ಎಂದು ಕರೆಯಲಾಗುತ್ತದೆ. ಒಂದು ದೇಶದ ಅಭಿವೃದ್ಧಿಗೆ ಅತೀ ಅಗತ್ಯವಾದುದು ಸಾಕ್ಷರತೆ.
ಆಚರಣೆಯ ಹಿನ್ನೆಲೆ
ಶಿಕ್ಷಣದ ಮಹತ್ವವನ್ನು ವಿಶ್ವದ ಮೂಲೆ ಮೂಲೆಗೂ ತಲುಪಿಸುವ ಉದ್ದೇಶ ದಿಂದ ಯುನೆಸ್ಕೋ 1966ರ ಅಕ್ಟೋಬರ್ 26ರಂದು ತನ್ನ ಸಾಮಾನ್ಯ ಸಮ್ಮೇಳನದಲ್ಲಿ ಪ್ರತೀ ವರ್ಷ ಸೆಪ್ಟಂಬರ್ 8ನ್ನು ಅಂತಾರಾಷ್ಟ್ರೀಯ ಸಾಕ್ಷರತಾ ದಿನವಾಗಿ ಆಚರಿಸುವ ನಿರ್ಧಾರ ಕೈಗೊಂಡಿತು. ಅದರಂತೆ 1967ರಿಂದ ಇದು ಜಾರಿಗೆ ಬಂತು.
ಈ ವರ್ಷದ ಧ್ಯೇಯ
“ಪರಿವರ್ತನೆ ಪಥದಲ್ಲಿರುವ ಜಗತ್ತಿನಲ್ಲಿ ಸಾಕ್ಷರತೆಯನ್ನು ಉತ್ತೇಜಿಸುವುದು, ಸುಸ್ಥಿರ ಮತ್ತು ಶಾಂತಿಯುತ ಸಮಾಜಕ್ಕೆ ಅಡಿಪಾಯ ಹಾಕುವುದು’ ಎನ್ನುವ ಧ್ಯೇಯದೊಂದಿಗೆ ಈ ಬಾರಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತಿದೆ.
ಭಾರತದಲ್ಲಿ ಸಾಕ್ಷರತೆ
ಭಾರತದ ಸಾಕ್ಷರತಾ ಪ್ರಮಾಣ ಶೇ. 77.7. ಶೇ. 84.70 ಪುರುಷರು, ಶೇ.70.30 ಮಹಿಳೆಯರು ಸಾಕ್ಷರರಾಗಿದ್ದಾರೆ. ಕೇರಳ,ದೇಶದಲ್ಲಿ ಅತೀ ಹೆಚ್ಚು ಅಂದರೆ ಶೇ. 94ರಷ್ಟು ಸಾಕ್ಷರತೆಯನ್ನು ಹೊಂದಿದೆ. ಶೇ. 61.80ರಷ್ಟು ಅಕ್ಷರಸ್ಥರನ್ನು ಹೊಂದಿರುವ ಬಿಹಾರ ದೇಶದಲ್ಲಿ ಅತೀ ಕಡಿಮೆ ಸಾಕ್ಷರತಾ ಪ್ರಮಾಣ ಹೊಂದಿರುವ ರಾಜ್ಯ. ಕರ್ನಾಟಕದ ಸಾಕ್ಷರತಾ ಪ್ರಮಾಣ ಶೇ. 75.36. ಶೇ. 82.47 ಪುರುಷರು, ಶೇ. 68.08 ಮಹಿಳೆಯರು ಅಕ್ಷರಸ್ಥರಾಗಿದ್ದಾರೆ.
ಸಾಕ್ಷರತೆ ಹೆಚ್ಚಳಕ್ಕೆ ಹಲವು ಕ್ರಮಗಳು
ಸ್ವಾತಂತ್ರ್ಯ ಲಭಿಸಿದ ಸಂದರ್ಭದಲ್ಲಿ ದೇಶದ ಸಾಕ್ಷರತಾ ಪ್ರಮಾಣ ಶೇ. 12. ಅಂದಿನಿಂದಲೂ ದೇಶದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯವನ್ನು ನೀಡುತ್ತಾ ಬರಲಾಗಿದೆ. ವಯಸ್ಕರ ಶಿಕ್ಷಣ, ರಾಷ್ಟ್ರೀಯ ಸಾಕ್ಷರತಾ ಅಭಿಯಾನ, ಬಡ ಮತ್ತು ದುರ್ಬಲ ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಲು ಉಚಿತ ಶಿಕ್ಷಣ, ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆ, ಪೌಷ್ಟಿಕ ಆಹಾರ ವಿತರಣೆ , ಉಚಿತ ಮಧ್ಯಾಹ್ನದ ಬಿಸಿ ಊಟ ಹೀಗೆ ಹಲವಾರು ಕಾರ್ಯಕ್ರಮ, ಯೋಜನೆಗಳನ್ನು ಸರಕಾರ ಅನುಷ್ಠಾನಕ್ಕೆ ತರುವ ಮೂಲಕ ಮಕ್ಕಳನ್ನು ಶಾಲೆಗಳತ್ತ ಸೆಳೆಯುವ ಪ್ರಯತ್ನಗಳನ್ನು ನಡೆಸಲಾಗಿದೆ. 2002ರಲ್ಲಿ 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ನೀಡುವುದನ್ನು ಮೂಲಭೂತ ಹಕ್ಕಿನಡಿ ಸೇರಿಸಲಾಗಿದೆ. 2009ರಲ್ಲಿ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ)ಯನ್ನು ಜಾರಿಗೊಳಿಸಲಾಗಿದೆ.
ಸುಶ್ಮಿತಾ ನೇರಳಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅತ್ಯಗತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.