World Biofuel Day: ಜೈವಿಕ ಇಂಧನದತ್ತ ಹೊರಳುತ್ತಿವೆ ವಿಶ್ವ ರಾಷ್ಟ್ರಗಳು
Team Udayavani, Aug 9, 2023, 11:37 PM IST
ಇಂಧನ ಶಕ್ತಿಯು ಪ್ರತೀ ದೇಶದ ಅಭಿವೃದ್ಧಿಯಲ್ಲಿ ದೊಡ್ಡ ಪಾತ್ರವನ್ನು ನಿರ್ವ ಹಿಸುತ್ತಿದೆ. ವಿಶ್ವದ ಹಲವಾರು ದೇಶಗಳು ತಮ್ಮ ತಮ್ಮ ಇಂಧನ ಕ್ಷೇತ್ರವನ್ನು ಬಲಪಡಿಸುವಲ್ಲಿ ನಿರತವಾಗಿವೆ. ಅದರಲ್ಲೂ ಜೈವಿಕ ಇಂಧನಕ್ಕೆ ಹೆಚ್ಚು ಪ್ರಾಮುಖ್ಯ ನೀಡುತ್ತಿರುವ ದೇಶಗಳು ಹೊಸ ತಂತ್ರಜ್ಞಾನದ ಮೂಲಕ ಜೈವಿಕ ಇಂಧನವನ್ನು ವೃದ್ಧಿಸಲು ಯೋಜನೆಗಳನ್ನು ರೂಪಿಸಿವೆ. ಪ್ರಪಂಚದಾದ್ಯಂತ ಜೈವಿಕ ಇಂಧನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತೀ ವರ್ಷ ಆಗಸ್ಟ್ 10ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸ ಲಾಗುತ್ತದೆ. ಏನಿದು ಜೈವಿಕ ಇಂಧನ? ಏನಿದರ ಪ್ರಯೋಜನ? ಈ ನಿಟ್ಟಿನಲ್ಲಿ ಭಾರತದ ಯೋಜನೆಗಳೇನು? ಎನ್ನುವುದರ ಮಾಹಿತಿ ಇಲ್ಲಿದೆ.
ಜೈವಿಕ ಇಂಧನ ಎಂದರೆ?
ಸಸ್ಯ, ಕೃಷಿ ತ್ಯಾಜ್ಯ, ಪ್ರಾಣಿ ತ್ಯಾಜ್ಯ ಹಾಗೂ ಇತರ ಸಾವಯವ ಪರಿಕರಗಳಿಂದ ದೊರೆಯುವ ಇಂಧನವೇ ಜೈವಿಕ ಇಂಧನ. ಈ ಇಂಧನಗಳನ್ನು ಪಳೆಯುಳಿಕೆ ಇಂಧನಗಳ ಪರ್ಯಾಯವಾಗಿ ಬಳಸಬಹುದಾಗಿದೆ.
ಯಾಕೆ ಮಹತ್ವ?
ಆರೋಗ್ಯ ಯುತ ಪರಿಸರ ನಿರ್ಮಾಣದಲ್ಲಿ ಜೈವಿಕ ಇಂಧನ ಸಹಕಾರಿಯಾಗಿದೆ. ಇವು ನವೀಕರಿಸಬಹುದಾದ ಇಂಧನ ಮೂಲಗಳಾಗಿವೆ. ಇವುಗಳಿಂದ ಇಂಗಾಲದ ಹೊರಸೂಸುವಿಕೆ ಯನ್ನು ಶೇ.90 ರಷ್ಟು ತಡೆಯಬಹುದಾಗಿದ್ದು ವಾಯುಮಾಲಿನ್ಯವನ್ನು ನಿಯಂತ್ರಿಸಿ, ಪರಿಸರವನ್ನು ಸಂರಕ್ಷಿಸಬಹುದಾಗಿದೆ. ಇದರಿಂದ ನಮ್ಮ ಸುತ್ತಮುತ್ತಲಿನ ಪ್ರಕೃತಿಯನ್ನು ಹಸುರಾಗಿ ಉಳಿಸಲು ಸಾಧ್ಯ. ಜೈವಿಕ ಇಂಧನಗಳ ಬಳಕೆ ಹೆಚ್ಚಿದಂತೆ ಕಚ್ಚಾ ತೈಲಗಳ ಮೇಲಿನ ಅವಲಂಬನೆ ಕಡಿಮೆಯಾಗುವುದರ ಜತೆಯಲ್ಲಿ ಇದಕ್ಕಾಗಿ ವ್ಯಯಿಸಲಾಗುತ್ತಿರುವ ಭಾರೀ ಪ್ರಮಾಣದ ಹಣವನ್ನೂ ಉಳಿಸಬಹುದಾಗಿದೆ.
ಭಾರತ ಮತ್ತು ಜೈವಿಕ ಇಂಧನ
ಭಾರತ ಸರಕಾರದ ಪೆಟ್ರೋ ಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು 2015ರಿಂದ ಜೈವಿಕ ಇಂಧನ ದಿನವನ್ನು ಆಚರಿಸುತ್ತಿದೆ. ಭಾರತವು ಜೈವಿಕ ಇಂಧನಗಳ ಉತ್ಪಾ
ದನೆಯಲ್ಲಿ ಮುಂಚೂಣಿಯಲ್ಲಿರುವ ದೇಶಗಳಲ್ಲಿ ಒಂದಾಗಿದೆ. ಭಾರತ ಸರಕಾರ ಇಂಧನ ಆಮದು ಅವಲಂಬನೆಯನ್ನು ಕಡಿಮೆ ಮಾಡುವ, ಪರಿಸರದ ಸುರಕ್ಷೆಯ ಸಲುವಾಗಿ ಜೈವಿಕ ಇಂಧನದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನುನೀಡಿದೆ.
ಪ್ರಾಕೃತಿಕವಾಗಿ ಹಾಗೂ ಆರ್ಥಿಕವಾಗಿಯೂ ಬಲವಾಗಿ ರುವ ಭಾರತ ಕೃಷಿ ತ್ಯಾಜ್ಯ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯ, ಹಸುವಿನ ಸೆಗಣಿ ಹಾಗೂ ಇನ್ನಿತರ ನೈಸರ್ಗಿಕ ಇಂಧನಗಳಿಂದ ಜೈವಿಕ ಇಂಧನವನ್ನು ಉತ್ಪಾದಿಸುತ್ತಿದೆ. ಕೇವಲ ಸಾರಿಗೆ ಇಂಧನವಾಗಿ ಮಾತ್ರವಲ್ಲದೇ ವಿದ್ಯುತ್ ಉತ್ಪಾದನೆಯಲ್ಲಿಯೂ ಇದನ್ನು ಬಳಸಲಾಗುತ್ತಿದೆ.
ಭಾರತ ಸರಕಾರವು 2018ರಲ್ಲಿ ರಾಷ್ಟ್ರೀಯ ಜೈವಿಕ ಇಂಧನ ನೀತಿಯನ್ನು ಜಾರಿಗೆ ತಂದಿತು. 2030ರ ವೇಳೆಗೆ ಶೇ.20ರಷ್ಟು ಎಥೆನಾಲ್ ಮಿಶ್ರಣ ಹಾಗೂ ಶೇ.5ರಷ್ಟು ಜೈವಿಕ ಇಂಧನ ಮಿಶ್ರಣವನ್ನು ಸಾಧ್ಯಗೊಳಿಸುವುದು ಇದರ ಉದ್ದೇಶ. ಇದರೊಂದಿಗೆ ಜೈವಿಕ ಇಂಧನಗಳ ಫೀಡ್‌ಸ್ಟಾಕ್‌ಗಳನ್ನು ಹೆಚ್ಚಿಸುವುದು. ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣವನ್ನು ಹೆಚ್ಚಿಸುವ ಗುರಿಯನ್ನು ಹೊಂದುವುದು. ಅಲ್ಲದೇ ಪೆಟ್ರೋಲ್ ಉತ್ಪನ್ನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮೇಕ್ ಇನ್ ಇಂಡಿಯಾ ಯೋಜನೆಯಡಿ ವಿಶೇಷ ಆರ್ಥಿಕ ವಲಯಗಳಲ್ಲಿ ಹಾಗೂ ರಫ್ತು ಕೇಂದ್ರಗಳಲ್ಲಿ ಜೈವಿಕ ಇಂಧನಗಳ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುವ ಮೂಲಕ 2047ರ ವೇಳೆಗೆ ಭಾರತ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯನ್ನು ಈ ನೀತಿ ಹೊಂದಿದೆ.
ಭಾರತ ಸರಕಾರವು 2ಜಿ ಎಥೆನಾಲ್ ಉತ್ಪಾದನೆಯನ್ನು ಉತ್ತೇಜಿಸಲು “ಪ್ರಧಾನ್‌ಮಂತ್ರಿ ಜೀ-ವನ್’ ಯೋಜನೆ ಯನ್ನು ಜಾರಿಗೆ ತಂದಿದೆ. ಇದೀಗ ಜಿ-20 ರಾಷ್ಟ್ರಗಳ ಶೃಂಗ ಸಭೆಯ ಚುಕ್ಕಾಣಿ ಹಿಡಿದಿರುವ ಭಾರತ ಜೈವಿಕ ಇಂಧನಗಳ ಉತ್ಪಾದನೆಗೆ ಅಂತಾರಾಷ್ಟ್ರೀಯ ಸಹಕಾರದ ನಿರೀಕ್ಷೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.