Karnataka: ಶಾಂತಿ ಕದಡಿದರೆ ಸಹಿಸೆವು: ಸಿಎಂ ಎಚ್ಚರಿಕೆ
ಕನ್ನಡ ಕಡ್ಡಾಯ ಮಾಡಲು ನೋಟಿಸ್ ನೀಡೋಣ ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು: ಡಿಕೆಶಿ
Team Udayavani, Dec 28, 2023, 11:22 PM IST
ಬೆಂಗಳೂರು: ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಶಾಂತಿಯುತ ವಾದ ಪ್ರತಿಭಟನೆಗೆ ವಿರೋಧವಿಲ್ಲ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾ ದರೂ ನಡೆದುಕೊಂಡರೆ ಅದನ್ನು ಸರಕಾರ ಸಹಿಸುವು ದಿಲ್ಲ ಎಂದು ಕನ್ನಡಪರ ಹೋರಾಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ವಿರೋಧವಿಲ್ಲ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳು ಹಗೆ ಎಲ್ಲರೂ ಸಂವಿಧಾನಕ್ಕೆ ಅನು ಗುಣವಾಗಿ ನಡೆದುಕೊಳ್ಳಬೇಕು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಜಾರಿಗೊಳಿಸಲಾಗು ವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದರು.
ಸರಕಾರ ಕಣ್ಮುಚ್ಚಿ ಕುಳಿತುಕೊಳ್ಳದು
ಡಿ.ಕೆ.ಶಿವಕುಮಾರ್ ಮಾತನಾಡಿ, “ಕನ್ನಡಪರ ಹೋರಾಟಗಳು ಮತ್ತು ಹೋರಾಟಗಾರರ ಬಗ್ಗೆ ನಮಗೆ ಗೌರವವಿದೆ. ಹಾಗಂತ, ಆಸ್ತಿಪಾಸ್ತಿ ಹಾನಿ ಮಾಡಿ ದರೆ, ಸರಕಾರ ಕಣ್ಮುಚ್ಚಿಕೊಂಡು ಕುಳಿತುಕೊಳ್ಳದು ಎಂದರು.
ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, ಶೇ. 60ರಷ್ಟು ನಾಮಫಲಕ ಕನ್ನಡದಲ್ಲೇ ಇರಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ’ ಎಂದು ತೀಕ್ಷ್ಣವಾಗಿ ಹೇಳಿದರು.
“ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣ ಗೌಡರ ಮೇಲೆ ಕೇಸು ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟಿಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣ ಗೌಡ ರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ’ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣ ಗೌಡರ ಎಚ್ಚರಿಕೆ ವಿಚಾರವಾಗಿ ಕೇಳಿದಾಗ, “ಸರಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳ್ಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶವಿಲ್ಲ’ ಎಂದು ತಿಳಿಸಿದರು.
ಪಾಲಿಸದವರಿಗೆ ನೋಟಿಸ್ ಜಾರಿ: ಯಾರೆಲ್ಲ ಕನ್ನಡ ನಾಮಫಲಕ ಹಾಕಿಲ್ಲ ಅವರಿಗೆ ನೊಟೀಸ್ ಜಾರಿ ಮಾಡಲಾಗುವುದು. ಎಲ್ಲ ವ್ಯಾಪಾರಿಗಳು ಸರಕಾರದ ಆದೇಶ ಪಾಲಿಸಬೇಕು, ನಾಮಫಲಕ ಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಕನ್ನಡದ ಹಿತ ಕಾಯಲು ಸರಕಾರ ಬದ್ಧವಾಗಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯನವರೇ, ನಿಮ್ಮ ಸರಕಾರ ಚುನಾವಣೆಯಲ್ಲಿ ನಮ್ಮನ್ನು ಬಳಸಿಕೊಂಡಿತ್ತು. ನನ್ನ ಆರೋಗ್ಯ ಹದಗೆ ಟ್ಟಿದೆ. ನಾನು ಸತ್ತರೂ ಚಿಂತೆ ಇಲ್ಲ. ನಾವು ಜಗ್ಗುವು ದಿಲ್ಲ. ಏನು ಮಾಡುತ್ತಾರೋ ಮಾಡಲಿ, ಗುಂಡಿಕ್ಕಿ ಕೊಂದರೂ ಚಿಂತೆ ಯಿಲ್ಲ. ನಾವು ಅಂಜುವುದಿಲ್ಲ, ಹೋರಾ ಟದಿಂದ ಹಿಂದೆ ಹೋಗಲ್ಲ. ಕನ್ನಡ ನೆಲ,ಜಲ ಭಾಷೆಗಾಗಿ ಹೋರಾಡುತ್ತೇವೆ.
– ಟಿ.ಎ.ನಾರಾಯಣ ಗೌಡ, ರಾಜ್ಯಾಧ್ಯಕ್ಷ, ಕರವೇ
ಆಡಳಿತ ಕನ್ನಡಕ್ಕಾಗಿ ಆಗ್ರಹಿಸಿ ಕನ್ನಡಪರ ಸಂಘಟನೆಗಳು ನಡೆಸಿದ ಹೋರಾಟವನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ. ಹೋರಾಟಕ್ಕೆ ನೀಡಿದ ಕರೆಯನ್ನು ಗಂಭೀರವಾಗಿ ಪರಿಗಣಿಸದೆ ಇದ್ದುದರಿಂದ ಸಾರ್ವಜನಿಕ ಜನಜೀವನಕ್ಕೆ ಹಾಗೂ ವ್ಯಾಪಾರೋದ್ಯಮಕ್ಕೆ ತೊಂದರೆ ಆಗುವುದಕ್ಕೆ ಸರಕಾರವೇ ಕಾರಣವಾದಂತಾಗಿದೆ.
– ವಿ.ಸುನಿಲ್ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.